ಸಂತೋಷ್ ಪಾಟೀಲ್ ಕೇಸ್‌: ರಸ್ತೆ ತಡೆ ನಡೆಸಿದ್ದಕ್ಕಾಗಿ ಸಿದ್ದರಾಮಯ್ಯ ಮತ್ತು ಇತರೆ ಕಾಂಗ್ರೆಸ್ ನಾಯಕರಿಗೆ 10000 ರೂ ದಂಡ
ಕನ್ನಡ ಸುದ್ದಿ  /  ಕರ್ನಾಟಕ  /  ಸಂತೋಷ್ ಪಾಟೀಲ್ ಕೇಸ್‌: ರಸ್ತೆ ತಡೆ ನಡೆಸಿದ್ದಕ್ಕಾಗಿ ಸಿದ್ದರಾಮಯ್ಯ ಮತ್ತು ಇತರೆ ಕಾಂಗ್ರೆಸ್ ನಾಯಕರಿಗೆ 10000 ರೂ ದಂಡ

ಸಂತೋಷ್ ಪಾಟೀಲ್ ಕೇಸ್‌: ರಸ್ತೆ ತಡೆ ನಡೆಸಿದ್ದಕ್ಕಾಗಿ ಸಿದ್ದರಾಮಯ್ಯ ಮತ್ತು ಇತರೆ ಕಾಂಗ್ರೆಸ್ ನಾಯಕರಿಗೆ 10000 ರೂ ದಂಡ

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದ್ದಾಗ 2022ರಲ್ಲಿ ಸಂತೋಷ್ ಪಾಟೀಲ್ ಕೇಸ್‌ಗೆ ಸಂಬಂಧಿಸಿ ರಸ್ತೆ ತಡೆ ನಡೆಸಿದ್ದಕ್ಕಾಗಿ ಸಿದ್ದರಾಮಯ್ಯ ಮತ್ತು ಇತರೆ ಕಾಂಗ್ರೆಸ್ ನಾಯಕರಿಗೆ 10000 ರೂ ದಂಡ ವಿಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಸಂತೋಷ್ ಪಾಟೀಲ್ ಕೇಸ್‌ ಸಂಬಂಧಿಸಿ 2022ರಲ್ಲಿ ರಸ್ತೆ ತಡೆ ನಡೆಸಿದ್ದಕ್ಕಾಗಿ ಸಿದ್ದರಾಮಯ್ಯ ಮತ್ತು ಇತರೆ ಕಾಂಗ್ರೆಸ್ ನಾಯಕರಿಗೆ 10000 ರೂ ದಂಡ ವಿಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ಸಂತೋಷ್ ಪಾಟೀಲ್ ಕೇಸ್‌ ಸಂಬಂಧಿಸಿ 2022ರಲ್ಲಿ ರಸ್ತೆ ತಡೆ ನಡೆಸಿದ್ದಕ್ಕಾಗಿ ಸಿದ್ದರಾಮಯ್ಯ ಮತ್ತು ಇತರೆ ಕಾಂಗ್ರೆಸ್ ನಾಯಕರಿಗೆ 10000 ರೂ ದಂಡ ವಿಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಬೆಂಗಳೂರು: ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸಂಪುಟದ ಇಬ್ಬರು ಸಹೋದ್ಯೋಗಿಗಳು, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ (ಫೆ.6) ತಲಾ 10,000 ರೂಪಾಯಿ ದಂಡ ವಿಧಿಸಿದೆ.

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಕೇಸ್‌ ಸಂಬಂಧ ಅಂದು ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದರು. ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿತ್ತು. ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದರು. ಅಂದು ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದ್ದಕ್ಕಾಗಿ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಎಂ ಬಿ ಪಾಟೀಲ್, ರಣದೀಪ್ ಸುರ್ಜೇವಾಲಾ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣ ಸಂಬಂಧ ಪೊಲೀಸರು ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದ್ದರು. ಈ ಪ್ರಕರಣದ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು (ಫೆ.6) ವಜಾಗೊಳಿಸಿದೆ.

ಪಿಎಸ್‌ಐ ಜಹೀದಾರನ್ನು ಪ್ರತಿವಾದಿಯನ್ನಾಗಿಸಿದ ಸಿಎಂ ಸಿದ್ದರಾಮಯ್ಯ ಸಂಗಡಿಗರು

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್​. ದೀಕ್ಷಿತ್​ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಲು ನ್ಯಾಯಪೀಠ ಸೂಚಿಸಿದೆ. ಮಾರ್ಚ್​ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸಿಂಗ್​ ಸುರ್ಜೇವಾಲಾ, ಮಾರ್ಚ್ 15 ರಂದು ಎಂ.ಬಿ.ಪಾಟೀಲ್​ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಪೀಠ ಆದೇಶ ನೀಡಿದೆ.

ಅಷ್ಟೇ ಅಲ್ಲ, ಈ ಕೇಸ್‌ನಲ್ಲಿ ಅನಗತ್ಯವಾಗಿ ಪಿಎಸ್​ಐ ಕು.ಜಹಿದಾ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿತ್ತು. ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಮತ್ತಿತರರಿಗೆ ತಲಾ 10,000 ರೂ. ದಂಡವನ್ನೂ ಕೋರ್ಟ್ ವಿಧಿಸಿದ್ದು, ಇದನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಜಮೆ ಮಾಡುವಂತೆ ಸೂಚಿಸಿದೆ.

ಜನಪ್ರತಿನಿಧಿಗಳು ಕಾನೂನು ಪಾಲಿಸದೇ ಇದ್ದರೆ ಜನ ಪಾಲಿಸುತ್ತಾರಾ..

ಕಾನೂನನ್ನು ಚುನಾಯಿತ ಜನಪ್ರತಿನಿಧಿಗಳೇ ಪಾಲಿಸದೇ ಇದ್ದರೆ ಜನರು ಪಾಲಿಸುತ್ತಾರೆಯೇ ಎಂದು ಪ್ರಶ್ನಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ, ನಗರ ಜೀವನಕ್ಕೆ ಸಮಸ್ಯೆ ಆಗುತ್ತದೆ. ಸಂಚಾರ ಅಸ್ತವ್ಯಸ್ತವಾಗುತ್ತದೆ. ಇದು ಸಾಮಾನ್ಯರ ವಿವೇಚನೆಗೂ ಬರುವಂತಹ ವಿಚಾರ. ಹೀಗಾಗಿ, ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ಪೀಠ ತನ್ನ ತೀರ್ಪಿನಲ್ಲಿ ಹೇಳಿದೆ.

ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಇದ್ದಾಗ, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು 2022ರ ಏಪ್ರಿಲ್ 14ರಂದು ರೇಸ್‌ಕೋರ್ಸ್‌ ರಸ್ತೆಯ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ್ದರು.

ಬೆಂಗಳೂರಿನಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸುವುದಕ್ಕಾಗಿ ಜಾರಿಗೆ ತರಲಾದ ನಿಯಮಗಳ ಪ್ರಕಾರ, ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರು ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಬಹುದು. ಉಳಿದಂತೆ ನಗರದ ಯಾವುದೇ ಭಾಗದಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇಲ್ಲ. ಬೇರೆಡೆ ಪ್ರತಿಭಟನೆ ನಡೆಸಿದರೆ, ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಪೊಲೀಸರು ಕೇಸ್ ದಾಖಲಿಸುತ್ತಾರೆ.

Whats_app_banner