ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು ನೇಮಕ: ಕರ್ನಾಟಕದ 6 ರಂಗಾಯಣ ನಿರ್ದೇಶಕರ ವಿವರ ಇಲ್ಲಿದೆ-bengaluru news satish tipaturu appointed as director of mysuru rangayana mallikarjuna kadakola to davanagere dmg ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು ನೇಮಕ: ಕರ್ನಾಟಕದ 6 ರಂಗಾಯಣ ನಿರ್ದೇಶಕರ ವಿವರ ಇಲ್ಲಿದೆ

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು ನೇಮಕ: ಕರ್ನಾಟಕದ 6 ರಂಗಾಯಣ ನಿರ್ದೇಶಕರ ವಿವರ ಇಲ್ಲಿದೆ

ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ, ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ ಸುಜಾತ ಜಂಗಮ ಶೆಟ್ಟಿ ಅವರನ್ನು ನೇಮಿಸಲಾಗಿದೆ.

ಮೈಸೂರು ರಂಗಾಯಣ ನಿರ್ದೇಶಕರಾಗಿ ಸತೀಶ್ ತಿಪಟೂರು, ಕಲಬುರ್ಗಿ ರಂಗಾಯಣ ನಿರ್ದೇಶಕರಾಗಿ ಡಾ ಸುಜಾತಾ ಜಂಗಮ ಶೆಟ್ಟಿ, ದಾವಣಗೆರೆ ರಂಗಾಣಯ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಿಸಲಾಗಿದೆ.
ಮೈಸೂರು ರಂಗಾಯಣ ನಿರ್ದೇಶಕರಾಗಿ ಸತೀಶ್ ತಿಪಟೂರು, ಕಲಬುರ್ಗಿ ರಂಗಾಯಣ ನಿರ್ದೇಶಕರಾಗಿ ಡಾ ಸುಜಾತಾ ಜಂಗಮ ಶೆಟ್ಟಿ, ದಾವಣಗೆರೆ ರಂಗಾಣಯ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಿಸಲಾಗಿದೆ.

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ. ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು, ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ, ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ ಸುಜಾತ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ, ಯಕ್ಷ ರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲ್ಯಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳಿಗೆ ವೇಗ ಕೊಡಲು, ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.