ಕನ್ನಡ ಸುದ್ದಿ  /  ಕರ್ನಾಟಕ  /  ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ, ಇಂದೇ ಜಾಮೀನು ಅರ್ಜಿ ವಿಚಾರಣೆ

ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ, ಇಂದೇ ಜಾಮೀನು ಅರ್ಜಿ ವಿಚಾರಣೆ

ಜರ್ಮನಿಯಿಂದ ಬೆಂಗಳೂರಿಗೆ ಬಂದಿಳಿದ ಲೈಂಗಿಕ ದೌರ್ಜನ್ಯದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಪ್ರಜ್ವಲ್ ರೇವಣ್ಣ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಕೋರ್ಟ್‌ಗೆ ಹಾಜರು ಪಡಿಸುವ ಸಾಧ್ಯತೆ ಇದೆ.

ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಮತ್ತೊಂದೆಡೆ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಮತ್ತೊಂದೆಡೆ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಸಂಬಂಧ ಗುರುವಾರ (ಮೇ 30) ರಾತ್ರಿ 1.20ರ ಸುಮಾರಿಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Arrested) ಅವರನ್ನು ಎಸ್‌ಐಟಿ (SIT) ಅಧಿಕಾರಿಗಳು ಬಂಧಿಸಿದ್ದಾರೆ. ತಡರಾತ್ರಿಯೇ ಭದ್ರತೆಯಲ್ಲಿ ಎಸ್‌ಐಟಿ ಕಚೇರಿಗೆ ಕರೆತರಲಾಗಿದೆ. ಪ್ರಜ್ವಲ್ ರೇವಣ್ಣ ಇಡೀ ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ಕಳೆದಿದ್ದಾರೆ. ಇಂದು (ಮೇ 31) ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ವೈದಕೀಯ ಪರೀಕ್ಷೆ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಆಸ್ಪತ್ರೆ ಗೇಟ್‌ಗಳಿಗೆ ಬ್ಯಾರಿಕೇಡ್‌ಗಳನ್ನು ಹಾಕಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಅನಾರೋಗ್ಯ ಸಮಸ್ಯೆ ಏನಾದರೂ ಇದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತದೆ.

ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಬರಲಾಗುತ್ತದೆ. ಹೀಗಾಗಿ ವೈದ್ಯರ ತಂಡ ಸಿದ್ಧರಾಗಿ ಇರುವಂತೆ ಎಸ್ಐಟಿ ಅಧಿಕಾರಿಗಳು ಬೌರಿಂಗ್ ಆಸ್ಪತ್ರೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಪ್ರಜ್ವರ್ ರೇವಣ್ಣ ಅವರನ್ನು ಕರೆತರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಬಳಿ ಸಾಮಾನ್ಯ ರೋಗಿಗಳಿಗೆ ಸಮಸ್ಯೆಯಾಗಿದೆ ಎಂದು ವರದಿಯಾಗಿದೆ. ಆಸ್ಪತ್ರೆ ಸಿಬ್ಬಂದಿ ಸಾಮಾನ್ಯ ರೋಗಿಗಳನ್ನು ಒಳಗಡೆ ಬಿಡುತ್ತಿಲ್ಲ ಎಂದು ಕೆಲ ರೋಗಿಗಳು ಆರೋಪಿಸಿದ್ದಾರೆ.

ವೈದ್ಯಕೀಯ ಪರೀಕ್ಷೆಯ ನಂತರ ಇಂದು (ಮೇ 31, ಶುಕ್ರವಾರ) ಮಧ್ಯಾಹ್ನದೊಳಗೆ ಕೋರ್ಟ್‌ಗೆ ಹಾಜರು ಪಡಿಸಲಾಗುತ್ತದೆ. ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯೂ ನಡೆಯುತ್ತದೆ. ಪ್ರಜ್ವಲ್ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಬುಧವಾರ (ಮೇ 29) ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ವಜಾ ಮಾಡಿತ್ತು. ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ 2 ಅತ್ಯಾಚಾರ ಪ್ರಕಣಗಳು ದಾಖಲಾಗಿವೆ. ಒಂದೊಂದೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿಚಾರಣೆ ನಡೆಯಲಿದೆ. ಇವತ್ತು ಕೋರ್ಟ್‌ಗೆ ಹಾಜರು ಪಡಿಸಿದ ನಂತರ ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ತಮ್ಮ ಮನೆಯ ಮಾಜಿ ಮನೆಕೆಲಸದವರು ಲೈಂಗಿಕ ಕಿರುಕುಳದ ದೂರು ದಾಖಲಿಸಿದ ನಂತರ ಏಪ್ರಿಲ್ 27 ರಂದು ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿ ಆ ಬಳಿಕ ತಲೆಮರೆಸಿಕೊಂಡಿದ್ದರು. ಪ್ರಜ್ವಲ್ ಕುರಿತ ಲೈಂಗಿಕ ದೌರ್ಜನ್ಯ ಕುರಿತ ವಿಡಿಯೊಗಳು ಹಾಸನ ಸೇರಿದಂತೆ ರಾಜ್ಯಾದ್ಯಂತ ವೈರಲ್ ಆಗಿದ್ದವು.

ಈ ತಿಂಗಳ ಆರಂಭದಲ್ಲಿ ಹಾಸನ ಸಂಸದರ ತಂದೆ ಎಚ್.ಡಿ.ರೇವಣ್ಣ ಅವರು ತಮ್ಮ ಮಗನ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದವರು ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ಪ್ರಜ್ವಲ್ ರೇವಣ್ಣ ಮತ್ತು ಅವರ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಇಂದು (ಮೇ 31, ಶುಕ್ರವಾರ) ನಡೆಸಲಿದೆ. ಪ್ರಜ್ವಲ್ ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಏತನ್ಮಧ್ಯೆ, ಅಪಹರಣ ಪ್ರಕರಣದಲ್ಲಿ ಅವರ ತಾಯಿ ಭವಾನಿ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಅವರ ತಾಯಿ ಈ ಪ್ರಕರಣದಲ್ಲಿ ಆರೋಪಿಯಲ್ಲ, ಆದರೆ ಅವರ ಪಾತ್ರದ ಬಗ್ಗೆ ಎಸ್ಐಟಿ ತನಿಖೆ ನಡೆಸಬಹುದು.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024