ಕನ್ನಡ ಸುದ್ದಿ  /  Karnataka  /  Bengaluru News Sexual Assault On Girl Fir Registered Against Former Chief Minister Bs Yediyurappa Rmy

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ದ ಎಫ್‌ಐಆರ್ ದಾಖಲು

BS Yediyurappa: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಾಲಕಿ ಮೇಲೆ ಲೌಂಕಿಗ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
ಬಾಲಕಿ ಮೇಲೆ ಲೌಂಕಿಗ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ (BS Yediyurappa) ಸಂಕಷ್ಟ ಎದುರಾಗಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಇಂದು (ಮಾರ್ಚ್ 15, ಶುಕ್ರವಾರ) ಬೆಳಗ್ಗೆ ಪೋಕ್ಸೋ ಕಾಯ್ದೆಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಫೆಬ್ರವರಿ 2 ರಂದು ಸಭೆಯ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 17 ವರ್ಷದ ಬಾಲಕಿಯ ತಾಯಿ ದೂರು ನೀಡಿದ್ದಾರೆ. ನಂತರ ಪೊಲೀಸರು ದೂರು ಸ್ವೀಕರಿಸಿ ಮಾಜಿ ಸಿಎಂ ವಿರುದ್ಧ ಪೋಕ್ಸೋ (ಲೈಂಕಿಗ ದೌರ್ನಜ್ಯ) ಸಕ್ಷೆನ್ 8 ಮತ್ತು ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ಈ ಪ್ರಕರಣ ಹೊಡೆತ ನೀಡುವ ಸಾಧ್ಯತೆ ಇದೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಸಹಾಯ ಕೋರಿ ಮಹಿಳೆ ಮತ್ತು ಆಕೆಯ ಪುತ್ರಿ ಬಂದಿದ್ದ ವೇಳೆ ಈ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

IPL_Entry_Point