ಕನ್ನಡ ಸುದ್ದಿ  /  ಕರ್ನಾಟಕ  /  ಲೈಂಗಿಕ ದೌರ್ಜನ್ಯಕ್ಕೊಳದ ಮಹಿಳೆ ಅಪಹರಣ ಆರೋಪ ಪ್ರಕರಣ; ಮೇ 20ಕ್ಕೆ ಹೆಚ್‌ಡಿ ರೇವಣ್ಣ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್

ಲೈಂಗಿಕ ದೌರ್ಜನ್ಯಕ್ಕೊಳದ ಮಹಿಳೆ ಅಪಹರಣ ಆರೋಪ ಪ್ರಕರಣ; ಮೇ 20ಕ್ಕೆ ಹೆಚ್‌ಡಿ ರೇವಣ್ಣ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್

ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಹೆಚ್‌ಡಿ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಎಸಿಎಂಎಂ ಕೋರ್ಟ್ ಮೇ 20ಕ್ಕೆ ಜಾಮೀನು ತೀರ್ಪು ಕಾಯ್ದಿರಿಸಿದೆ.

ಲೈಂಗಿಕ ದೌರ್ಜನ್ಯಕ್ಕೊಳದ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣ ಅವರ ಜಾಮೀನು ಕುರಿತ ತೀರ್ಪನ್ನು ಕೋರ್ಟ್ ಮೇ 20ಕ್ಕೆ ಕಾಯ್ದಿರಿಸಿದೆ.
ಲೈಂಗಿಕ ದೌರ್ಜನ್ಯಕ್ಕೊಳದ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣ ಅವರ ಜಾಮೀನು ಕುರಿತ ತೀರ್ಪನ್ನು ಕೋರ್ಟ್ ಮೇ 20ಕ್ಕೆ ಕಾಯ್ದಿರಿಸಿದೆ. (PTI)

ಬೆಂಗಳೂರು: ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ (Sexually Assaulted Case) ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪುತ್ರ, ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣಗೆ (JDS MLA HD Revanna) ಮತ್ತೆ ಸಂಕಷ್ಟ ಎದುರಾಗಿದೆ. ಇಂದು (ಮೇ 17, ಶುಕ್ರವಾರ) ಜಾಮೀನು ಕುರಿತ ಅರ್ಜಿಯ ವಿಚಾರಣೆ ನಡೆಸಿರುವ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮೆಜಿಸ್ಟ್ರೇಟ್ ಕೋರ್ಟ್ (ಎಸಿಎಂಎಂ) ಜಾಮೀನು ಅನ್ನು ಮೇ 20ರ ವರೆಗೆ ವಿಸ್ತರಿಸಿದೆ. ಆದರೆ ಅಲ್ಲಿಯ ವರೆಗೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪುವನ್ನು ಕಾಯ್ದಿರಿಸಿದೆ.

ಟ್ರೆಂಡಿಂಗ್​ ಸುದ್ದಿ

47 ವರ್ಷದ ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕೆಲವು ಅಶ್ಲೀಲ ವಿಡಿಯೊಗಳು ಹಾಸನ ಜಿಲ್ಲೆಯಾದ್ಯಂತ ಹರಿದಾಡಿದ್ದವು. ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ ಬಳಿಕ ತಲೆಮರೆಸಿಕೊಂಡಿದ್ದಾರೆ. ಶಾಸಕರ ನಿವಾಸದಲ್ಲಿ ತಂದೆ ಮತ್ತು ಮಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Congress Govt) ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಗೆ ಆದೇಶ ನೀಡಿತ್ತು. ಅದರಂತೆ ತನಿಖೆ ಕೈಗೊಂಡಿರುವ ಎಸ್ಐಟಿ (SIT) ರೇವಣ್ಣ ಅವರನ್ನು ವಶಕ್ಕೆ ಪಡೆದಿತ್ತು. ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಪರಿಣಾಮ ಇವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಷರತ್ತುಬದ್ಧ ಜಾಮೀನು ಪಡೆದು ಹೊರ ಬಂದಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊದಲ್ಲಿ ಇದ್ದವರು ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಹೆಚ್‌ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇ, ಕೋರ್ಟ್ ಸೋಮವಾರ (ಮೇ 13) ಜಾಮೀನು ಮಂಜೂರು ಮಾಡಿತ್ತು. ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಮೇ 4 ರಂದು ರೇವಣ್ಣ ಅವರನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದರು.

ಹೆಚ್‌ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ಸಂಬಂಧ ಕೆಲವು ಅಶ್ಲೀಲ ವಿಡಿಯೊಗಳನ್ನು ವೈರಲ್ ಆಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಬಾರಿ ಚರ್ಚೆಗೆ ವೇದಿಕೆ ಕಲ್ಪಿಸಿದೆ. ಈ ವಿಚಾರ ಸದ್ಯ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ. 33 ವರ್ಷದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಆತನನ್ನು ದೇಶಕ್ಕೆ ವಾಪಸ್ ಕರೆತರುವ ಪ್ರಯತ್ನ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲು ವಿಮಾನ ಬುಕ್ ಮಾಡಿ ಎರಡ್ಮೂರು ಬಾರಿ ಮತ್ತೆ ರದ್ದು ಮಾಡಿಕೊಂಡಿದ್ದಾರೆ.

ಟಿ20 ವರ್ಲ್ಡ್‌ಕಪ್ 2024