ಕನ್ನಡ ಸುದ್ದಿ  /  ಕರ್ನಾಟಕ  /  ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ; ಎಲ್ಲಾಕಡೆ ಉತ್ತಮ ಪ್ರತಿಕ್ರಿಯೆ

ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ; ಎಲ್ಲಾಕಡೆ ಉತ್ತಮ ಪ್ರತಿಕ್ರಿಯೆ

Janata Darshan: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ಸಲುವಾಗಿ ಮೊಟ್ಟಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿಯೇ ಜನತಾ ದರ್ಶನ ನಡೆಸಲಾಗಿದೆ.

ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ; ಎಲ್ಲಾಕಡೆ ಉತ್ತಮ ಪ್ರತಿಕ್ರಿಯೆ (ಸಾಂದರ್ಭಿಕ ಚಿತ್ರ, HT PHOTO)
ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ; ಎಲ್ಲಾಕಡೆ ಉತ್ತಮ ಪ್ರತಿಕ್ರಿಯೆ (ಸಾಂದರ್ಭಿಕ ಚಿತ್ರ, HT PHOTO)

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ಸಲುವಾಗಿ ಮೊಟ್ಟಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿಯೇ ಸೋಮವಾರ ಹಮ್ಮಿಕೊಂಡಿದ್ದ ಜನತಾ ದರ್ಶನಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದು ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆಯುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಬೆಂಗಳೂರಿಗೆ ಬಂದು ತಮ್ಮ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುತ್ತಿದ್ದರು. ಇದಕ್ಕೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಜನರ ಅಹವಾಲುಗಳನ್ನು ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ಸಲುವಾಗಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಏನಿದು ಜನತಾ ದರ್ಶನ ಮತ್ತು ಹೇಗೆ ನಡೆಯಲಿದೆ?

ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅದಕ್ಕೆ ಸೂಕ್ತ ಪರಿಹಾರ ಒದಗಿಸುವ ಸಲುವಾಗಿ ಜನತಾ ದರ್ಶನ ನಡೆಸಲಾಗುತ್ತದೆ. ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿದ್ದ ಜನತಾ ದರ್ಶನ ಪ್ರಥಮ ಬಾರಿಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಿಗೂ ಏಕಕಾಲಕ್ಕೆ ವಿಸ್ತರಣೆಯಾಗಿದೆ. ಜಿಲ್ಲಾ ಉಸ್ತುವಾರಿ ನೇತೃತ್ವದಲ್ಲಿ ನಡೆಯಲಿರುವ ಜನತಾ ದರ್ಶನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಮೊದಲ ಬಾರಿಗೆ ಜಿಲ್ಲಾಮಟ್ಟದಲ್ಲಿ ಹಮ್ಮಿಕೊಳ್ಳಲಾದ ಜನತಾ ದರ್ಶನವನ್ನು ಸದರಿ ದಿನದಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ರೂಪುರೇಷೆಗಳ ಪ್ರಕಾರ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿ ಅಥವಾ ಮನವಿಗಳಿಗೆ ಕಾಲ ಮಿತಿಯಲ್ಲಿ ಪರಿಹಾರ ಒದಗಿಸುವುದು ಜಿಲ್ಲಾಡಳಿತದ ಮೇಲಿರುತ್ತದೆ.

ಜನತಾ ದರ್ಶನದಂದು ಸ್ವೀಕೃತವಾದ ಅರ್ಜಿ ಅಥವಾ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ ತಂತ್ರಾಂಶ (ಐಪಿಜಿಆರ್‌ಎಸ್‌)ದಲ್ಲಿ ದಾಖಲಿಸಲಾಗುವುದು. ಸಂಬಂಧಿಸಿದ ಇಲಾಖೆಗೆ ಅರ್ಜಿಗಳು ವಿಲೇವಾರಿಯಾಗಿ ಬಹಳ ಜಾಗೃತೆಯಿಂದ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರ ಒದಗಿಸಲು ಕ್ರಮ ವಹಿಸಬೇಕೆಂಬ ಸೂಚನೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರವಾನೆಯಾಗಿದೆ.

ಟಿ20 ವರ್ಲ್ಡ್‌ಕಪ್ 2024