ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಹೆಚ್ಚಿಸಲು ಸ್ಟಿಕ್ಕರ್; ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತರ ಆಗ್ರಹ

ಬೆಂಗಳೂರಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಹೆಚ್ಚಿಸಲು ಸ್ಟಿಕ್ಕರ್; ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತರ ಆಗ್ರಹ

ಬೆಂಗಳೂರಿನಲ್ಲಿ ಮತದಾನ ಹೆಚ್ಚಿಸಲು ಓಟರ್‌ ಸ್ಟಿಕರ್‌ ಅಂಟಿಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಚುನಾವಣಾ ಕೆಲಸಕ್ಕೆ ತೆರಳುವ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಿ ನಿಗದಿ ಮಾಡುವಂತೆ ಆಗ್ರಹ ವ್ಯಕ್ತವಾಗಿದೆ. (ವರದಿ-ಎಚ್. ಮಾರುತಿ, ಬೆಂಗಳೂರು)

ಕರ್ನಾಟಕ ಚುನಾವಣಾ ಆಯೋಗ (ಸಾಂದರ್ಭಿಕ ಚಿತ್ರ)
ಕರ್ನಾಟಕ ಚುನಾವಣಾ ಆಯೋಗ (ಸಾಂದರ್ಭಿಕ ಚಿತ್ರ)

ಬೆಂಗಳೂರು: ಹೆಸರಿಗೆ ಬೆಂಗಳೂರು ಮಾಹಿತಿ ತಂತ್ರಜ್ಞಾನ ರಾಜಧಾನಿ. ಆದರೆ ಐದು ವರ್ಷಕ್ಕೊಮ್ಮೆ ಬರುವ ಚುನಾವಣೆಯಲ್ಲಿ ಮತದಾನ ಮಾಡಲು ಇಲ್ಲಿನ ವಿದ್ಯಾವಂತರು ಮುಂದೆ ಬರುವದಿಲ್ಲ. ಗ್ರಾಮೀಣ ಜನರೇ ಎಷ್ಟೋ ವಾಸಿ. ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸುತ್ತಾರೆ.

ಟ್ರೆಂಡಿಂಗ್​ ಸುದ್ದಿ

ಪ್ರತಿ ಚುನಾವಣೆಯ ಸಂದರ್ಭದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸ್ಥಳೀಯ ಆಡಳಿತ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಬಾರಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯ ಮನೆಗಳ ಮುಂದೆ ಓಟರ್‌ ಸ್ಟಿಕರ್‌ ಅಂಟಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅವರು ಓಟರ್‌ ಸ್ಟಿಕರ್‌ ಅಂಟಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ವಿಷಯಗಳನ್ನು ಕುರಿತು ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಮತಪತ್ರ ಮತ ಮಾರ್ಗದರ್ಶಿಯನ್ನು ವಿತರಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ತಿಳಿಸಿದರು.

ಲೋಕಸಭಾ ಚುನಾವಣೆಗೆ ನಿಯೋಜನೆ ಮಾಡಲಾಗಿರುವ ಮತಗಟ್ಟೆ ಅಧಿಕಾರಿಗಳಿಗೆ ಇದೇ ತಿಂಗಳ 17 ರಂದು ಎರಡನೇ ಹಂತದ ತರಬೇತಿ ನಡೆಯಲಿದೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತೆ ಸೆಲ್ವಮಣಿ ತಿಳಿಸಿದರು. ತರಬೇತಿ ಸ್ಥಳದಲ್ಲಿ ಕುಡಿಯುವ ನೀರು, ಊಟ ಮತ್ತಿತರ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸಹಾಯಕ ಚುನಾವಣಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಬಿಡುಗಡೆಗೆ ಆಗ್ರಹ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಿದ್ದ ಆಶಾ ಕಾರ್ಯಕರ್ತೆಯರಿಗೆ ಬಾಕಿ ಉಳಿಸಿಕೊಂಡಿರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಗ್ರಹಪಡಿಸಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸುವವರಿಗೆ ಗೌರವಧನದ ಮೊತ್ತವನ್ನು ನಿಗದಿ ಮಾಡಬೇಕು ಎಂದು ಸಂಘದ ಅಧ್ಯಕ್ಷ ಕೆ. ಸೋಮಶೇಖರ್‌ ಯಾದಗಿರಿ ಒತ್ತಾಯಿಸಿದ್ದಾರೆ.

ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರು ಪ್ರೋತ್ಸಾಹಧನ ಮಾದರಿಯ ವೇತನದಲ್ಲಿ ಕೆಲಸ ಮಾಡುತ್ತಾರೆ. ಇವರು ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗೆ ಬರುವ ಮತದಾರರಿಗೆ ಒಆರ್‌ಎಸ್‌ ನೀಡುವುದು, ಆರೋಗ್ಯ ಸಮಸ್ಯೆಗಳು ಉಂಟಾದರೆ ಸಹಾಯ ಮಾಡುವುದು, ಮತದಾನ ಪೂರ್ವದಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ಅನೇಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಲು ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ರಾಜ್ಯದಲ್ಲಿ 15,000ಕ್ಕೂ ಅಧಿಕ ಕಾರ್ಯಕರ್ತೆಯರು ಚುನಾವಣಾ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಅವರಿಗೆ ಸೂಕ್ತ ಸಂಭಾವನೆ ನೀಡಬೇಕು. ಜೊತೆಗೆ ಊಟ, ತಿಂಡಿ, ಟಿಎ, ಡಿಎ ನೀಡಬೇಕು ಎಂದು ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ.

(ವರದಿ- ಎಚ್. ಮಾರುತಿ, ಬೆಂಗಳೂರು)

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

ಓದಬಹುದಾದ ಕೆಲವು ಸ್ಟೋರಿಗಳು

1) ಕರ್ನಾಟಕದಲ್ಲಿ ಮುಂಗಾರು 2024; ಜೂನ್‌ನಿಂದ ಸೆಪ್ಟೆಂಬರ್ ತನಕ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಮುನ್ಸೂಚನೆ - ವಿವರ ವರದಿಗೆ ಓದಿ

2) ಲೋಕಸಭೆ ಚುನಾವಣೆ; ಬೆಂಗಳೂರು ಪ್ರಚಾರ ಸಭೆಯಲ್ಲಿ ಪ್ರಶ್ನೆಗಳ ಸುರಿಮಳೆ, ತೇಜಸ್ವಿ ಸೂರ್ಯ ತುರ್ತು ನಿರ್ಗಮನ ವಿಡಿಯೋ ವೈರಲ್‌ - ಇಲ್ಲಿದೆ ವಿವರ

3) ಪತ್ನಿ ಜಾಹ್ನವಿ ಮೈ ಕೈ ಮುಟ್ಟಿದ ವೈದ್ಯನ ಕೈ ಲೊಟಕ್! ಸೈಕೋ ಜಯಂತನ ಮಾಸ್‌ ಅವತಾರ ಅನಾವರಣ -ಇಲ್ಲಿದೆ ವಿವರ

4) 549 ರನ್, ಅತಿ ಹೆಚ್ಚು ಬೌಂಡರಿ-ಸಿಕ್ಸರ್; ಆರ್‌ಸಿಬಿ vs ಎಸ್‌ಆರ್‌ಎಚ್ ಪಂದ್ಯದಲ್ಲಿ ದಾಖಲೆಗಳ ಆಗರ - ವರದಿ ಓದಿ

IPL_Entry_Point