15ಕ್ಕೂ ಹೆಚ್ಚು ಕೆಎಎಸ್‌ ಅಧಿಕಾರಿಗಳ ವರ್ಗಾವಣೆ, ಐಎಎಸ್ ಅಧಿಕಾರಿಗೆ ಸ್ಥಳ ನಿಯೋಜನೆ ಮಾಡಿದ ಕರ್ನಾಟಕ ಸರ್ಕಾರ-bengaluru news transfer of more than 15 kas officers ias officer posting by karnataka govt uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  15ಕ್ಕೂ ಹೆಚ್ಚು ಕೆಎಎಸ್‌ ಅಧಿಕಾರಿಗಳ ವರ್ಗಾವಣೆ, ಐಎಎಸ್ ಅಧಿಕಾರಿಗೆ ಸ್ಥಳ ನಿಯೋಜನೆ ಮಾಡಿದ ಕರ್ನಾಟಕ ಸರ್ಕಾರ

15ಕ್ಕೂ ಹೆಚ್ಚು ಕೆಎಎಸ್‌ ಅಧಿಕಾರಿಗಳ ವರ್ಗಾವಣೆ, ಐಎಎಸ್ ಅಧಿಕಾರಿಗೆ ಸ್ಥಳ ನಿಯೋಜನೆ ಮಾಡಿದ ಕರ್ನಾಟಕ ಸರ್ಕಾರ

KAS IAS Transfer and Postings; ಕರ್ನಾಟಕದಲ್ಲಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ ರಾಜ್ಯ ಸರ್ಕಾರ ಇಂದು 15ಕ್ಕೂ ಹೆಚ್ಚು 15ಕ್ಕೂ ಹೆಚ್ಚು ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆ ಮಾಡಿದ್ದು, ಒಬ್ಬ ಐಎಎಸ್ ಅಧಿಕಾರಿಗೆ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

ಕೆಎಎಸ್, ಐಎಎಎಸ್ ವರ್ಗಾವಣೆ ಮತ್ತು ಸ್ಥಳ ನಿಯೋಜನೆ (ಸಾಂಕೇತಿಕ ಚಿತ್ರ)
ಕೆಎಎಸ್, ಐಎಎಎಸ್ ವರ್ಗಾವಣೆ ಮತ್ತು ಸ್ಥಳ ನಿಯೋಜನೆ (ಸಾಂಕೇತಿಕ ಚಿತ್ರ)

ಬೆಂಗಳೂರು: ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವಂತೆ ಕರ್ನಾಟಕ ಸರ್ಕಾರ ಇಂದು 15ಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳು ಮತ್ತು ಒಬ್ಬ ಐಎಎಸ್ ಅಧಿಕಾರಿಯ ವರ್ಗಾವಣೆ, ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

ನಿನ್ನೆಯಷ್ಟೇ 15ಕ್ಕೂ ಹೆಚ್ಚು ಐಐಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯೋಜನೆ ಮಾಡಿದ್ದ ಸರ್ಕಾರ ಇಂದು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವುದು ಗಮನಸೆಳೆದಿದೆ.

ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯೋಜನೆ

ಬೆಂಗಳೂರಿನ ವಿಕಾಸ ಸೌಧದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಆಪ್ತ ಕಾರ್ಯದರ್ಶಿಯಾಗಿರುವ ಕೆಎಎಸ್ (ಸೀನಿಯರ್ ಸೂಪರ್ ಟೈಂ ಸ್ಕೇಲ್‌ ) ಅಧಿಕಾರಿ ವೀರಭದ್ರ ಹಂಚಿನಾಳ ಅವರನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ( ಡಾ ಜಿ ವಿಶ್ವನಾಥ್ ಇವರ ಸ್ಥಾನಕ್ಕೆ) ವರ್ಗಾವಣೆ ಮಾಡಿ ನಿಯೋಜಿಸಲಾಗಿದೆ.

ಸ್ಥಳ ನಿರೀಕ್ಷಣೆಯಲ್ಲಿದ್ದ ಕೆಎಎಸ್ (ಸೂಪರ್ ಟೈಂ ಸ್ಕೇಲ್‌) ಅಧಿಕಾರಿ ದಿನೇಶ್ ಕುಮಾರ್ ಜಿಟಿ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರ (ಆಡಳಿತ) ಹುದ್ದೆಗೆ ನಿಯೋಜಿಸಲಾಗಿದೆ.

ಸ್ಥಳ ನಿರೀಕ್ಷಣೆಯಲ್ಲಿದ್ದ ಕೆಎಎಸ್ (ಸೂಪರ್ ಟೈಂ ಸ್ಕೇಲ್‌) ಅಧಿಕಾರಿ, ಅನುರಾಧ ಜಿ ಅವರನ್ನು ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ ನಿಯೋಜಿಸಲಾಗಿದೆ.

ಸ್ಥಳ ನಿಯುಕ್ತಿ ಆದೇಶದಲ್ಲಿರುವ ಮಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಸಂಶೋಧನಾ ನಿರ್ದೇಶಕರಾಗಿರುವ ಕೆಎಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ ರಾಘವೇಂದ್ರ ಟಿ ಅವರನ್ನು ಬೆಂಗಳೂರಿನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಿ ನಿಯೋಜಿಸಲಾಗಿದೆ.

ಸ್ಥಳ ನಿರೀಕ್ಷಣೆಯಲ್ಲಿದ್ದ ಕೆಎಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ ಚಿದಾನಂದ ಸದಾಶಿವ ವಟಾರ ಅವರನ್ನು ಮಹಾದೇವ ಎ ಮುರಗಿ ಅವರ ವರ್ಗಾವಣೆಯಿಂದ ತೆರವಾಗುವ ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಆಂಡ್‌ ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ನ ಮುಖ್ಯ ಆಡಳಿತಾಧಿಕಾರಿ ಸ್ಥಾನಕ್ಕೆ ನಿಯೋಜಿಸಲಾಗಿದೆ.

ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಆಂಡ್‌ ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ನ ಮುಖ್ಯ ಆಡಳಿತಾಧಿಕಾರಿಯಾಗಿರುವ ಕೆಎಎಸ್‌ (ಆಯ್ಕೆ ಶ್ರೇಣಿ) ಅಧಿಕಾರಿ ಮಹಾದೇವ ಎ ಮುರಗಿ ಅವರನ್ನು ಬಾಗಲಕೋಟೆ ತೋಟಗಾರಿಕೆ ವಿವಿ ಆಡಳಿತ ವಿಭಾಗದ ಕುಲಸಚಿವರಾಗಿ ಮತ್ತು ಕೂಡಲ ಸಂಗಮ ಅಭಿವೃದ್ಧಿ ಮಂಡಳಿಯ ಪ್ರಭಾರ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸ್ಥಳ ನಿರೀಕ್ಷಣೆಯಲ್ಲಿದ್ದ ಕೆಎಎಸ್‌ (ಆಯ್ಕೆ ಶ್ರೇಣಿ) ಅಧಿಕಾರಿ ರವಿ ಕುಮಾರ್ ಪಿ ಅವರನ್ನು ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಆಡಳಿತ ವಿಭಾಗದ ಪ್ರಧಾನ ನಿರ್ದೇಶಕರಾಗಿ ಡಾ. ಎನ್‌ ಎನ್ ಮಧು ಅವರ ಜಾಗಕ್ಕೆ ನಿಯೋಜಿಸಲಾಗಿದೆ.

ಸ್ಥಳ ನಿರೀಕ್ಷಣೆಯಲ್ಲಿದ್ದ ಕೆಎಎಸ್‌ (ಆಯ್ಕೆ ಶ್ರೇಣಿ) ಅಧಿಕಾರಿ ಡಾ. ಶಂಕರಪ್ಪ ವಣಿಕ್ಯಾಳ್‌ ಅವರನ್ನು ರಾಯಚೂರು ವಿವಿ ಆಡಳಿತ ವಿಭಾಗದ ಕುಲಸಚಿವರನ್ನಾಗಿ ನಿಯೋಜಿಸಲಾಗಿದೆ.

ಬೆಳಗಾವಿ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಬೃಹತ್ ನೀರಾವರಿ ಯೋಜನೆ ವಿಶೇಷ ಜಿಲ್ಲಾಧಿಕಾರಿಯಾಗಿರುವ ಸ್ಥಳ ನಿರೀಕ್ಷಣೆಯಲ್ಲಿದ್ದ ಕೆಎಎಸ್‌ (ಆಯ್ಕೆ ಶ್ರೇಣಿ) ಅಧಿಕಾರಿ ಗೀತಾ ಈ ಕೌಲಗಿ ಅವರನ್ನು ಬಾಗಲಕೋಟೆ ವಿವಿಯ ಆಡಳಿತ ವಿಭಾಗದ ಕುಲಸಚಿವರನ್ನಾಗಿ ನಿಯೋಜಿಸಲಾಗಿದೆ.

ಎಎಸ್‌ (ಆಯ್ಕೆ ಶ್ರೇಣಿ) ಅಧಿಕಾರಿ ಗೀತಾ ಈ ಕೌಲಗಿ ಅವರ ವರ್ಗಾವಣೆಯಿಂದ ತೆರವಾಗುವ ಬೆಳಗಾವಿ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಬೃಹತ್ ನೀರಾವರಿ ಯೋಜನೆ ವಿಶೇಷ ಜಿಲ್ಲಾಧಿಕಾರಿ ಸ್ಥಾನಕ್ಕೆ (ಸ್ಥಳ ನಿಯುಕ್ತಿ ಆದೇಶದಲ್ಲಿರುವ) ಬೆಂಗಳೂರಿನ ಕೆ ಶಿಫ್‌ನ ವಿಶೇಷ ಜಿಲ್ಲಾಧಿಕಾರಿ ಕೆ.ಎ.ಎಸ್ (ಆಯ್ಕೆ ಶ್ರೇಣಿ) ಅಧಿಕಾರಿ ಶ್ರೀಹರ್ಷ ಎಸ್ ಶೆಟ್ಟಿ ಅವರನ್ನು ನಿಯೋಜಿಸಿದೆ.

ಸ್ಥಳ ನಿರೀಕ್ಷಣೆಯಲ್ಲಿರುವ ಕೆ.ಎ.ಎಸ್ (ಹಿ.ಶ್ರೇ) ಅಧಿಕಾರಿ ಶೇಖರ್ ಜಿ.ಡಿ ಅವರನ್ನು ಬೆಂಗಳೂರಿನ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಂಜೀವಿನಿಯ ಉಪನಿರ್ದೇಶಕ ಸ್ಥಾನಕ್ಕೆ ನಿಯೋಜಿಸಲಾಗಿದೆ.

ಸ್ಥಳ ನಿರೀಕ್ಷಣೆಯಲ್ಲಿರುವ ಕೆ.ಎ.ಎಸ್ (ಹಿ.ಶ್ರೇ) ಅಧಿಕಾರಿ ಮಂಜುನಾಥ್ ಎಂ.ಎನ್ ಅವರನ್ನು ಬೆಂಗಳೂರಿನ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ನಿಯೋಜಿಸಲಾಗಿದೆ.

ದಾವಣಗೆರೆ ಹರಿಹರದ ಕೊಟ್ಟೂರು ಹರಿಹರ ರೈಲ್ವೆ ಬ್ರಾಡ್-ಗೇಜ್ ನಿರ್ಮಾಣ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಕೆಎಎಸ್ (ಕಿ.ಶ್ರೇ) ಅಧಿಕಾರಿ ಉದಯ ವಿ ಕುಂಬಾರ ಅವರನ್ನು ಬಾಗಲಕೋಟೆ ಜಿಲ್ಲೆ ಬೀಳಗಿಯ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಕೆ- ಶಿಫ್‌ನ ಸಹಾಯಕ ಆಯುಕ್ತ ಕೆಎಎಸ್ (ಕಿ.ಶ್ರೇ) ಅಧಿಕಾರಿ ಬಿ.ಆರ್ ದಯಾನಂದ ಅವರನ್ನು ಬೆಂಗಳೂರಿನ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ನಿಯೋಜಿಸಲಾಗಿದೆ.

ಸ್ಥಳ ನಿರೀಕ್ಷಣೆಯಲ್ಲಿದ್ದ ಕೆಎಎಸ್ (ಕಿ.ಶ್ರೇ) ಅಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರನ್ನು ಚಿತ್ರದುರ್ಗದಲ್ಲಿರುವ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನಿಯೋಜಿಸಲಾಗಿದೆ.

ಬೆಂಗಳೂರು ಕೆಯುಐಡಿಎಫ್‌ಸಿಯ ಉಪ ಪ್ರಧಾನ ವ್ಯವಸ್ಥಾಪಕರಾಗಿರುವ ಕೆಎಎಸ್ (ಕಿ.ಶ್ರೇ) ಅಧಿಕಾರಿ ನಿತಿನ್ ಚಕ್ಕಿ ಅವರನ್ನು ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನದ ಭಾಲಭವನ ಸೊಸೈಟಿಯ ಆಡಳಿತಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಉಪ ಕಾರ್ಯದರ್ಶಿ ಹಡಗಲಿ ಅರುಣ್ ಕುಮಾರ್ ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಐಐಎಸ್‌ ಅಧಿಕಾರಿ ವರ್ಗಾವಣೆ

ಕರ್ನಾಟಕ ಕೆಡರ್‌ನ 2016ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪೂವಿತಾ ಎಸ್ ಅವರನ್ನು ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಯವರ ವಿಶೇಷ ಅಧಿಕಾರಿಯಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.