ಕನ್ನಡ ಸುದ್ದಿ  /  ಕರ್ನಾಟಕ  /  ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಬೆಂಗಳೂರಿನಲ್ಲಿ ಸಾವು

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಬೆಂಗಳೂರಿನಲ್ಲಿ ಸಾವು

ಬಿಎಸ್ ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಮೃತಪಟ್ಟಿದ್ದಾಳೆ. ಆದರೆ ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯರು ಆಕೆ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ (ವರದಿ: ಎಚ್ ಮಾರುತಿ).

ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.
ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. (PTI)

ಬೆಂಗಳೂರು: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ 81 ವರ್ಷದ ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ (BS Yediyuppa Sexual Assault Accused Case) ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. 53 ವರ್ಷದ ಈ ಮಹಿಳೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹುಳಿಮಾವಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಒಂದೂವರೆ ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಸಹಾಯ ಕೇಳಲು ಹೋದಾಗ ಯಡಿಯೂರಪ್ಪ ಅವರು ತಮ್ಮ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಈ ಮಹಿಳೆ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಸಭಾ ಚುನಾವಣೆ ಘೋಷಣೆಯಾಗಿದ್ದರಿಂದ ಈ ಪ್ರಕರಣ ಕೆಲವು ದಿನಗಳ ಮಟ್ಟಿಗೆ ರಾಜಕೀಯವಾಗಿ ಕೋಲಾಹಲ ಸೃಷ್ಟಿಸಿತ್ತು.

ಏನಿದು ಪ್ರಕರಣ?

ಫೆಬ್ರವರಿ 4 ರಂದು ನೆರವು ಕೇಳಲು ಹೋಗಿದ್ದಾಗ ಯಡಿಯೂರಪ್ಪ ಅವರು ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಈ ಮಹಿಳೆ ದೂರು ನೀಡಿದ್ದರು. ಇದೇ ರೀತಿ ಈಕೆ ಹಲವಾರು ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಉದ್ಯಮಿಗಳು ಸೇರಿದಂತೆ 50 ಕ್ಕೂ ಹೆಚ್ಚು ಗಣ್ಯರ ವಿರುದ್ಧ ದೂರು ಸಲ್ಲಿಸಿದ್ದರು. ಉಪಕಾರ ಮಾಡಿದ್ದರೂ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಪೋಕ್ಸೋ ಅಡಿ ಪ್ರಕರಣ ದಾಖಲಾಗಿರುವ ಈ ದೂರನ್ನು ಕಾನೂನು ರೀತ್ಯಾ ಎದುರಿಸುತ್ತೇನೆ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದ್ದರು. ಇದರಲ್ಲಿ ರಾಜಕೀಯ ಪಿತೂರಿ ಇದೆ ಎಂದು ಹೇಳುವುದಿಲ್ಲ ಎಂದೂ ಹೇಳಿದ್ದರು.

ಒಂದೂವರೆ ತಿಂಗಳ ಹಿಂದಷ್ಟೇ ನಡೆದಿದ್ದ ಘಟನೆ

ನನ್ನ ಬಳಿ ಬಂದ ತಾಯಿ ಮಗಳು ಕಣ್ಣೀರು ಹಾಕುತ್ತಿದ್ದರು. ಅವರು ಹಲವು ಬಾರಿ ಬಂದಿದ್ದರೂ ಹತ್ತಿರ ಸೇರಿಸಿರಲಿಲ್ಲ. ಆದರೆ ಅವರು ಅಳುವುದನ್ನು ನೋಡಿ ಒಂದು ಬಾರಿ ಒಳಗೆ ಕರೆದು ಕೂರಿಸಿ ಸಮಸ್ಯೆಯನ್ನ ಕೇಳಿದ್ದೆ. ನಂತರ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ಇವರಿಗೆ ನ್ಯಾಯ ಒದಗಿಸಿ ಎಂದು ಕಳುಹಿಸಿ ಕೊಟ್ಟಿದ್ದೆ ಎಂದರು.

ನಂತರ ಈಕೆ ಮಾರ್ಚ್ 24ರಂದು ದೂರು ದಾಖಲಿಸಿದ್ದರು. ದೂರು ದಾಖಲಾದ ನಂತರ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಮೃತ ಮಹಿಳೆಗೆ ಓರ್ವ ಪುತ್ರಿ ಮತ್ತು ಪುತ್ರ ಇದ್ದಾರೆ. ತಮ್ಮ ಪುತ್ರಿಯ ಮೇಲೆ ಸಂಬಂಧಿಯೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು 2015 ರಲ್ಲಿಯೂ ದೂರು ನೀಡಿದ್ದರು (ವರದಿ: ಎಚ್ ಮಾರುತಿ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024