ರೇಣುಕಾಸ್ವಾಮಿ ಹತ್ಯೆ ಕೇಸ್‌: ನಟ ದರ್ಶನ್‌ ಮತ್ತಿತರ ಆರೋಪಿಗಳ ವಿರುದ್ಧ 1300 ಪುಟಗಳ ಚಾರ್ಜ್‌ ಶೀಟ್‌, ಈ ಸಾಕ್ಷ್ಯಾಧಾರದಲ್ಲಿ ಶಿಕ್ಷೆ ಸಾಧ್ಯತೆ
ಕನ್ನಡ ಸುದ್ದಿ  /  ಕರ್ನಾಟಕ  /  ರೇಣುಕಾಸ್ವಾಮಿ ಹತ್ಯೆ ಕೇಸ್‌: ನಟ ದರ್ಶನ್‌ ಮತ್ತಿತರ ಆರೋಪಿಗಳ ವಿರುದ್ಧ 1300 ಪುಟಗಳ ಚಾರ್ಜ್‌ ಶೀಟ್‌, ಈ ಸಾಕ್ಷ್ಯಾಧಾರದಲ್ಲಿ ಶಿಕ್ಷೆ ಸಾಧ್ಯತೆ

ರೇಣುಕಾಸ್ವಾಮಿ ಹತ್ಯೆ ಕೇಸ್‌: ನಟ ದರ್ಶನ್‌ ಮತ್ತಿತರ ಆರೋಪಿಗಳ ವಿರುದ್ಧ 1300 ಪುಟಗಳ ಚಾರ್ಜ್‌ ಶೀಟ್‌, ಈ ಸಾಕ್ಷ್ಯಾಧಾರದಲ್ಲಿ ಶಿಕ್ಷೆ ಸಾಧ್ಯತೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಮತ್ತಿತರ ಆರೋಪಿಗಳ ವಿರುದ್ಧ 1300 ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದ್ದು, ಈ ಸಾಕ್ಷ್ಯಗಳ ಆಧಾರದಲ್ಲಿ ಶಿಕ್ಷೆ ಖಚಿತವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯೇಕ ಪ್ರಕರಣದಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ ಇಬ್ಬರ ಬಂಧನವಾಗಿದೆ. (ವರದಿ- ಎಚ್.ಮಾರುತಿ, ಬೆಂಗಳೂರು)

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್‌ ಮತ್ತಿತರ ಆರೋಪಿಗಳ ವಿರುದ್ಧ 1300 ಪುಟಗಳ ಚಾರ್ಜ್‌ ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಈ ಸಾಕ್ಷ್ಯಾಧಾರದಲ್ಲಿ ಶಿಕ್ಷೆ ಸಾಧ್ಯತೆ ಇದೆ ಎನ್ನುತ್ತಿವೆ ಪೊಲೀಸ್ ಮೂಲಗಳು.
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್‌ ಮತ್ತಿತರ ಆರೋಪಿಗಳ ವಿರುದ್ಧ 1300 ಪುಟಗಳ ಚಾರ್ಜ್‌ ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಈ ಸಾಕ್ಷ್ಯಾಧಾರದಲ್ಲಿ ಶಿಕ್ಷೆ ಸಾಧ್ಯತೆ ಇದೆ ಎನ್ನುತ್ತಿವೆ ಪೊಲೀಸ್ ಮೂಲಗಳು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಪ್ರಕರಣದ ಆರೋಪಿ-2 ದರ್ಶನ್‌ ತೂಗುದೀಪ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಶನಿವಾರ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಜತೆಗೆ ಆರೋಪಿಗಳು ಕೃತ್ಯ ಎಸಗಿದ್ದಕ್ಕೆ ಸಾಕ್ಷಿಯಾಗಿ ಎಂಟು ಪೋಟೊಗಳನ್ನು ಲಗತ್ತಿಸಿದ್ದಾರೆ.

ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಪೊಲೀಸರು ಸುಮಾರು 1,300 ಪುಟಗಳ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ದರ್ಶನ್‌ ಹಾಗೂ ಇತರರು ರೇಣುಕಾಸ್ವಾಮಿ ಹತ್ಯೆ ನಡೆಸಿರುವುದಕ್ಕೆ ಪೂರಕವಾಗಿ ಡಿಜಿಟಲ್‌ ಸಾಕ್ಷ್ಯಾಧಾರಗಳು, ಎಫ್‌ಎಸ್‌ಎಲ್‌ ವರದಿ ಹಾಗೂ ಕರೆಗಳ ವಿವರ (ಸಿಡಿಆರ್‌) ಸೇರಿದಂತೆ ಹಲವು ದಾಖಲೆಗಳನ್ನು ಸೇರ್ಪಡೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್‌ 8ರಂದು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದು ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿ ಹತ್ಯೆ ಮಾಡಲಾಗಿತ್ತು. ದರ್ಶನ್‌, ಪವಿತ್ರಾಗೌಡ ಸೇರಿದಂತೆ ಎಲ್ಲ 17 ಮಂದಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಹತ್ಯೆ ನಡೆದಾಗ ದರ್ಶನ್‌ ಶೆಡ್‌ ನಲ್ಲಿ ಇರಲಿಲ್ಲ ಎಂದು ವಾದಿಸಲಾಗಿತ್ತು. ಇದ್ದರು ಎನ್ನುವುದಕ್ಕೆ ಪೂರಕವಾಗಿ ಫೋಟೋಗಳ ಸಾಕ್ಷ್ಯವನ್ನು ಒದಗಿಸಲಾಗಿದೆ. ಕೆಲವು ಆರೋಪಿಗಳು ದರ್ಶನ್‌ ಜತೆ ಫೋಟೋ ತೆಗೆಸಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಎಲ್ಲರ ಮೊಬೈಲ್‌ ನಿಂದಲೂ ಫೋಟೋಗಳನ್ನು ಅಳಿಸಿ ಹಾಕಲಾಗಿತ್ತು. ಇದೀಗ ಎಲ್ಲ ಫೊಟೋಗಳನ್ನು ರಿಟ್ರೀವ್‌ ಮಾಡಲಾಗಿದೆ. ಪುನೀತ್, ತನ್ನ ಮೊಬೈಲ್‌ನಿಂದ ದರ್ಶನ್ ಮತ್ತು ರಾಘವೇಂದ್ರ ಹಾಗೂ ಇತರರ ಫೋಟೋ ತೆಗೆದಿದ್ದ ಎಂದು ಮೂಲಗಳು ತಿಳಿಸಿವೆ.

ಹತ್ಯೆ ನಡೆದ ಮರುದಿನ ದರ್ಶನ್‌ ಇತರ ಆರೋಪಿಗಳ ಜತೆ ವ್ಯಾಟ್ಸಾಪ್‌ ಹಾಗೂ ಸಾಮಾನ್ಯ ಕರೆಗಳಲ್ಲಿ ನಿರಂತರವಾಗಿ ಮಾತುಕತೆ ನಡೆಸಿದ್ದರು. ಇದಕ್ಕೆ ಪೂರಕವಾಗಿ ಆರೋಪಿಗಳ 650 ದೂರವಾಣಿ ಕರೆಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿದ್ದ ಆರೋಪಿ ಧನರಾಜ್‌ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ. ಗೋವಾಗೆ ತೆರಳಿ ತಲೆ ಮರೆಸಿಕೊಂಡಿದ್ದ ಧನರಾಜ್‌ ನನ್ನು ಬಂಧಿಸಲು ತಡವಾಗಿತ್ತು ಎಂಬ ಅಂಶವನ್ನೂ ಸೇರ್ಪಡೆ ಮಾಡಲಾಗಿದೆ.

ನಟ ದರ್ಶನ್‌, ನಟಿ ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಜೂನ್‌ 10ರಂದು ಪೊಲೀಸರು ಬಂಧಿಸಿದ್ದರು. ಆರೋಪಿಗಳ ವಿರುದ್ಧ ಸೆಪ್ಟೆಂಬರ್‌ ಮೊದಲ ವಾರದಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್‌ ಗೆ ಅನಾರೋಗ್ಯದ ಕಾರಣ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು.

ಬಿಎಂಟಿಸಿ ಬಸ್‌ ಗಳಲ್ಲಿ ಮೊಬೈಲ್‌ ಕದಿಯುತ್ತಿದ ಇಬ್ಬರ ಬಂಧನ; 60 ಮೊಬೈಲ್‌ ಜಪ್ತಿ

ಪ್ರಯಾಣಿಕರಂತೆ ಬಿಎಂಟಿಸಿ ಬಸ್‌ ಗಳಲಿ ಪ್ರಯಾಣಿಸುತ್ತಾ ಮೊಬೈಲ್‌ ಫನ್‌ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಹಾಲಕ್ಷ್ಮೀ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಇವರಿಂದ 60 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಚಾಕಲಿ ಮನೋಹರ್ ಹಾಗೂ ಕೊಮ್ಮು ಪ್ರಶಾಂತ್ ಬಂಧಿತ ಆರೋಪಿಗಳು. ಕೆಲವು ದಿನಗಳ ಹಿಂದೆ ಮಹಾಲಕ್ಷ್ಮೀ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನವಾಗಿದೆ ಎಂದು ಒಬ್ಬರು ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ವ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಮೈಸೂರು ಸೋಪ್‌ ಫ್ಯಾಕ್ಟರಿ ಬಳಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದರು. ವಿಚಾರಣೆ ಸಂದರ್ಭದಲ್ಲಿ ಇವರು ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ತೆರಳಿ ಮೊಬೈಲ್‌ಗಳನ್ನು ಕಳವು ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳ ಬಂಧನದಿಂದ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯ ಒಂದು ಪ್ರಕರಣ ಪತ್ತೆಯಾಗಿದೆ.

ಸಾಮಾನ್ಯವಾಗಿ ಮೊಬೈಲ್ ಕಳೆದುಕೊಂಡವರು ದೂರು ನೀಡುವುದಿಲ್ಲ. ಹಗಾಗಿ 59 ಮೊಬೈಲ್ ಫೋನ್ ವಾರಸುದಾರರ ಪತ್ತೆಯಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ದ ಮೊಬೈಲ್‌ಗಳನ್ನು ಇವರು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು.

(ವರದಿ- ಎಚ್.ಮಾರುತಿ, ಬೆಂಗಳೂರು)

Whats_app_banner