ಬೆಂಗಳೂರು ಎರಡನೇ ವಿಮಾನ ನಿಲ್ದಾಣ; ಏಪ್ರಿಲ್ 7-9ರ ನಡುವೆ ಕಾರ್ಯಸಾಧ್ಯತೆ ಪರಿಶೀಲನೆಗೆ ಬರಲಿದೆ ಎಎಐ ತಂಡ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಎರಡನೇ ವಿಮಾನ ನಿಲ್ದಾಣ; ಏಪ್ರಿಲ್ 7-9ರ ನಡುವೆ ಕಾರ್ಯಸಾಧ್ಯತೆ ಪರಿಶೀಲನೆಗೆ ಬರಲಿದೆ ಎಎಐ ತಂಡ

ಬೆಂಗಳೂರು ಎರಡನೇ ವಿಮಾನ ನಿಲ್ದಾಣ; ಏಪ್ರಿಲ್ 7-9ರ ನಡುವೆ ಕಾರ್ಯಸಾಧ್ಯತೆ ಪರಿಶೀಲನೆಗೆ ಬರಲಿದೆ ಎಎಐ ತಂಡ

Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ಗುರುತಿಸುವ ಕೆಲಸ ಪ್ರಗತಿಯಲ್ಲಿದ್ದು, ಏಪ್ರಿಲ್ 7 ರಿಂದ 9ರ ಒಳಗೆ ಎಎಐ ತಂಡ ಕಾರ್ಯಸಾಧ್ಯತೆ ಪರಿಶೀಲನೆಗೆ ಬರಲಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. 3 ಸ್ಥಳಗಳನ್ನು ಗುರುತಿಸಿದ್ದು, ಅವುಗಳ ವಿವರನ್ನೂ ಕೊಟ್ಟಿದ್ಧಾರೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣ; ಏಪ್ರಿಲ್ 7-9ರ ನಡುವೆ ಕಾರ್ಯಸಾಧ್ಯತೆ ಪರಿಶೀಲನೆಗೆ ಬರಲಿದೆ ಎಎಐ ತಂಡ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣ; ಏಪ್ರಿಲ್ 7-9ರ ನಡುವೆ ಕಾರ್ಯಸಾಧ್ಯತೆ ಪರಿಶೀಲನೆಗೆ ಬರಲಿದೆ ಎಎಐ ತಂಡ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

Bengaluru Second Airport: ಬೆಂಗಳೂರು ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೇ ಏಪ್ರಿಲ್‌ನಲ್ಲಿ ಅವುಗಳ ಪರಿಶೀಲನೆಗೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಅಧಿಕಾರಿಗಳು ಬರಲಿದ್ದಾರೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಬೆಂಗಳೂರು 2ನೇ ವಿಮಾನ ನಿಲ್ದಾಣ; ಏ 7-9ರ ನಡುವೆ ಕಾರ್ಯಸಾಧ್ಯತೆ ಪರಿಶೀಲನೆಗೆ ಬರಲಿದೆ ಎಎಐ ತಂಡ

ಬೆಂಗಳೂರು ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ–ಹಾಸನ ಹೆದ್ದಾರಿಯಲ್ಲಿ ಒಂದು ಸ್ಥಳವನ್ನು 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಕರ್ನಾಟಕದ ತಜ್ಞರ ತಂಡ ಈಗಾಗಲೇ ಅವುಗಳ ಪರಿಶೀಲನೆ ನಡೆಸಿದೆ. ಇದರಂತೆ, ಮಾರ್ಚ್ 5 ರಂದು ಬೆಂಗಳೂರು ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಗುರುತಿಸಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಅವುಗಳನ್ನು ಪರಿಶೀಲಿಸಿರುವ ಎಎಐ ತಂಡ ಏಪ್ರಿಲ್ 7 ರಿಂದ 9ರ ನಡುವೆ ಸ್ಥಳ ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂಬಿ ಪಾಟೀಲ್ ವಿವರಿಸಿದರು.

ಸ್ಥಳ ಪರಿಶೀಲನೆ ನಡೆಸಬೇಕು ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಈಗಾಗಲೇ 1.2 ಕೋಟಿ ರೂಪಾಯಿ ಶುಲ್ಕ ಪಾವತಿಸಲಾಗಿದೆ. ಪ್ರಾಧಿಕಾರ ನೀಡಿದ ಸೂಚನೆ ಪ್ರಕಾರ, ಮೂರು ಸ್ಥಳಗಳ ಕಂದಾಯ ನಕಾಶೆ, ಹವಾಮಾನ ದಾಖಲೆ, ಜ್ಯಾಮಿತಿಯ ಲಕ್ಷಣ ಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ ಮತ್ತು ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ ತಿಳಿಸುವ ವರದಿಗಳನ್ನು ಸಿದ್ಧಪಡಿಸಿಟ್ಟುಕೊಂಡಿದ್ದೇವೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಗುರುತಿಸಲಾದ 3 ಸ್ಥಳಗಳಿವು

1) ಕನಕಪುರ ರಸ್ತೆ–ನೈಸ್‌ರಸ್ತೆ ಜಂಕ್ಷನ್‌ನಿಂದ 5.ಕಿ.ಮೀ. ದೂರ

2) ಕನಕಪುರ ರಸ್ತೆ–ನೈಸ್‌ರಸ್ತೆ ಜಂಕ್ಷನ್‌ನಿಂದ 10.ಕಿ.ಮೀ. ದೂರ

3) ನೆಲಮಂಗಲ–ಹಾಸನ ಹೆದ್ದಾರಿಯಲ್ಲಿ ನೆಲಮಂಗಲದಿಂದ 10 ಕಿ.ಮೀ. ದೂರ

ಶಿರಾ ಬಳಿ ವಿಮಾನ ನಿಲ್ದಾಣ ಕಾರ್ಯಸಾಧುವಲ್ಲ

ತುಮಕೂರು ಶಿರಾ ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಕೆಲವರು ಮನವಿ ಸಲ್ಲಿಸಿದ್ದರು. ಅದರೆ, ಅದು ಕಾರ್ಯಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಶುರುಮಾಡಿದರೆ, ಅದು ಶಿವಮೊಗ್ಗ, ವಿಜಯಪುರ ಮಾದರಿಯಲ್ಲಿ ಜಿಲ್ಲಾ ವಿಮಾನ ನಿಲ್ದಾಣವಾಗುವುದಷ್ಟೆ ಎಂದು ಹೇಳಿದ ಸಚಿವ ಎಂಬಿ ಪಾಟೀಲ್ ಅವರು ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಅಗತ್ಯವನ್ನು ವಿವರಿಸಿದರು.

ಬೆಂಗಳೂರಿನ ಈಗಿನ ವಿಮಾನ ನಿಲ್ದಾಣದ ಮೇಲೆ ವಿಪರೀತ ಒತ್ತಡ ಇದೆ. ಆ ವಿಮಾನ ನಿಲ್ದಾಣದಿಂದ 150 ಕಿ.ಮೀ.ವ್ಯಾಪ್ತಿಯಲ್ಲಿ 2033ರವರೆಗೆ ಮತ್ತೊಂದು ನಿಲ್ದಾಣ ಮಾಡುವಂತಿಲ್ಲ ಎಂಬ ಷರತ್ತು ಇದೆ. ಈಗಿನಿಂದಲೇ ಸಿದ್ಧತೆ ಮತ್ತು ನಿರ್ಮಾಣ ಆರಂಭಿಸಿದರೆ 2033ರ ವೇಳೆಗೆ ಮತ್ತೊಂದು ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಬಹುದು. ಬೆಂಗಳೂರಿನ ಜನರಿಗೆ‌ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ ಎಂದು ಸಚಿವ ಎಂಬಿ ಪಾಟೀಲ್ ವಿವರಿಸಿದರು.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner