Aero India 2023: ಬೆಂಗಳೂರಿನಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ 'ಏರೋ ಇಂಡಿಯಾ'ಗೆ ಡೇಟ್ ಫಿಕ್ಸ್
ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವಾದ 'ಏರೋ ಇಂಡಿಯಾ' ಕಳೆದ ಕೆಲವು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ. ಈ ವರ್ಷ 2023 ರ ಫೆಬ್ರವರಿ 13 ರಿಂದ 17 ರವೆಗೆ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ.
ಬೆಂಗಳೂರು: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವಾದ 'ಏರೋ ಇಂಡಿಯಾ' ಕಳೆದ ಕೆಲವು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ. ಈ ವರ್ಷ 2023 ರ ಫೆಬ್ರವರಿ 13 ರಿಂದ 17 ರವೆಗೆ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ.
ರಕ್ಷಣಾ ಸಚಿವಾಲಯ ಈ ಬಗ್ಗೆ ಅಧಿಕೃತವಾಗಿ ದಿನಾಂಕ ಪ್ರಕಟಿಸಿರುವುದರಿಂದ ಉತ್ತರ ಪ್ರದೇಶ, ಗೋವಾಗೆ ವೈಮಾನಿಕ ಪ್ರದರ್ಶನ ಸ್ಥಳಾಂತರಗೊಳ್ಳಲಿದೆ ಎನ್ನುವ ಎಲ್ಲಾ ಅನುಮಾನಗಳಿಗೆ ತೆರೆ ಬಿದ್ದಿದೆ. ದೇಶ ವಿದೇಶಗಳ ನೂರಾರು ರಕ್ಷಣಾ ಉಪಕರಣ ತಯಾರಿಕಾ ಕಂಪನಿಗಳು ತಮ್ಮ ಉತ್ಪನ್ನ ಪ್ರದರ್ಶಿಸಲಿವೆ. ಅಷ್ಟೆ ಅಲ್ಲ ಜಗತ್ತಿನ ದೇಶಗಳ ಎದುರು ತಮ್ಮ ದೇಶದಲ್ಲಿರುವ ರಕ್ಷಣಾ ಸಾಮರ್ಥ್ಯವನ್ನು ಅನಾವರಣ ಮಾಡಲು ಸೂಕ್ತ ವೇದಿಕೆ ಇದಾಗಿದೆ.
ಎರಡು ವರ್ಷಗಳಿಗೊಮ್ಮೆ ನಡೆಯುವ ವೈಮಾನಿಕ ಪ್ರರ್ದಶನ ಕಳೆದ ಬಾರಿ ಅಂದರೆ 2021ರಲ್ಲಿ ಕೋವಿಡ್ ಸಾಂಕ್ರಾಮಿಕ ಇದ್ದ ಕಾರಣ ಹೈಬ್ರಿಡ್ ಮಾದರಿಯಲ್ಲಿ ಸೀಮಿತ ಸಂಖ್ಯೆಯಲ್ಲಿ ಕೇವಲ ಮೂರೇ ದಿನಗಳ ಕಾಲ ನಡೆದಿತ್ತು. ಆದರೆ ಬಾರಿ ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ವೈಮಾನಿಕ ಪ್ರದರ್ಶನ ನಡೆಸಲು ಯಲಹಂಕದ ವಾಯು ನೆಲೆ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಈ ವರ್ಷ ವೈಮಾನಿಕ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇದೆ.
ವೈಮಾನಿಕ ಪ್ರದರ್ಶನವನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಆಯೋಜಿಸುತ್ತದೆ. ಏರ್ ಶೋ ಐದು ದಿನಗಳ ಕಾಲ ನಡೆಯಲಿದೆ, ಆದರೆ ಮೊದಲ ಮೂರು ದಿನಗಳನ್ನು ಬ್ಯುಸಿನೆಸ್ ವಿಸಿಟರ್ಸ್ಗೆ ಕಾಯ್ದಿರಿಸಲಾಗುತ್ತದೆ. ಅಂತಿಮ ಎರಡು ದಿನಗಳಲ್ಲಿ ಸಾರ್ವಜನಿಕರಿಗೆ ಏರ್ ಶೋ ನೋಡಲು ಅವಕಾಶ ನೀಡಲಾಗುತ್ತದೆ.
ಗಮನಿಸಬಹುದಾದ ಇತರ ಸುದ್ದಿ
ಮಲ್ಲೇಶ್ವರಂನಲ್ಲಿ 11.75 ಕೋಟಿ ರೂ. ವೆಚ್ಚದ ಸರ್ಕಾರಿ ಪ್ರಾಥಮಿಕ ಶಾಲೆಗೆ ಶಂಕುಸ್ಥಾಪನೆ
ಮಲ್ಲೇಶ್ವರಂ 4ನೇ ಮುಖ್ಯರಸ್ತೆಯಲ್ಲಿ ಇರುವ ಸರ್ಕಾರಿ ಬಾಲಕಿಯರ ಕಾಲೇಜು ಆವರಣದಲ್ಲಿ 11.75 ಕೋಟಿ ರೂಪಾಯಿ ವೆಚ್ಚದ ನಾಲ್ಕು ಮಹಡಿಗಳ ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಸ್ಥಳೀಯ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ