ಬೆಂಗಳೂರು: 2026ನೇ ಸಾಲಿನ ಪದ್ಮ ಶ್ರೇಣಿಯ ಪುರಸ್ಕಾರಗಳಿಗೆ ಹೆಸರುಗಳ ಶಿಫಾರಸಿಗೆ ಆಹ್ವಾನ; ಜುಲೈ 31 ಡೆಡ್‌ಲೈನ್
2026ನೇ ಸಾಲಿನ ಪದ್ಮ ಪುರಸ್ಕಾರಗಳಿಗೆ ಅರ್ಹರನ್ನು ಶಿಫಾರಸು ಮಾಡುವಂತೆ ಸರ್ಕಾರಗಳು ಸಾರ್ವಜನಿಕರನ್ನು ಕೋರಿವೆ. ವಿವಿಧ ಕ್ಷೇತ್ರಗಳ ಅತ್ಯುತ್ತಮ ಸಾಧಕರನ್ನು ಗುರುತಿಸಿ ಗೌರವಿಸುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿದ್ದು, ಶಿಫಾರಸು ಮಾಡುವುದಕ್ಕೆ ಸಂಬಂಧಿಸಿದ ವಿವರ ಇಲ್ಲಿದೆ.

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2026ನೇ ಸಾಲಿನ ಪುದ್ಮ ಪುರಸ್ಕಾರಕ್ಕೆ ನಾಮನಿರ್ದೇಶನ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಆಹ್ವಾನಿಸಿದೆ. ಈ ನಾಮ ನಿರ್ದೇಶನ ಸಲ್ಲಿಸುವುದಕ್ಕೆ ಜುಲೈ 31 ಕೊನೇ ದಿನವಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರವು ತಾನು ಕೂಡ ಪದ್ಮ ಪುರಸ್ಕಾರಕ್ಕೆ ಅರ್ಹರನ್ನು ಶಿಫಾರಸು ಮಾಡುವುದಕ್ಕೆ ನಾಮನಿರ್ದೇಶನವನ್ನು ಜುಲೈ 15ರ ಒಳಗೆ ಶಿಫಾರಸು ಮಾಡುವಂತೆ ಸಾರ್ವಜನಿಕರನ್ನು ಕೋರಿದೆ.
2026ನೇ ಸಾಲಿನ ಪದ್ಮ ಶ್ರೇಣಿಯ ಪುರಸ್ಕಾರಗಳಿಗೆ ಹೆಸರುಗಳ ಶಿಫಾರಸಿಗೆ ಆಹ್ವಾನ
ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ, ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2026ನೇ ಸಾಲಿನ ಪುದ್ಮ ಪುರಸ್ಕಾರಗಳಾದ 'ಪದ್ಮ ವಿಭೂಷಣ', ಪದ್ಮ ಭೂಷಣ' ಮತ್ತು 'ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನ ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ.
2026ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಅನ್ವಯಿಸುವ ನಿಯಮಾವಳಿ https://padmaawards.gov.in ರಲ್ಲಿ ಲಭ್ಯವಿದ್ದು, ಅರ್ಹ ಹೆಸರುಗಳನ್ನು ಶಿಫಾರಸ್ಸು ಮಾಡುವಾಗ ಕೇಂದ್ರ ಸರ್ಕಾರ ಸೂಚಿಸಿರುವ ಅಂಶಗಳನ್ನು ಪರಿಗಣಿಸಬೇಕು ಎಂದು ಕರ್ನಾಟಕ ಸರ್ಕಾರದ ಪ್ರಕಟಣೆ ತಿಳಿಸಿದೆ.
ಮೇಲೆ ಸೂಚಿಸಿದ ಕ್ಷೇತ್ರಗಳಲ್ಲಿ ನೀಡಬಹುದಾದ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಸಂಬಂಧಿಸಿದ ಶಿಫಾರಸ್ಸಿನ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯು 2025 ನೇ ಜುಲೈ 31 ರಂದು ಮುಕ್ತಾಯಗೊಳ್ಳುತ್ತದೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.
ರಾಜ್ಯ ಸರ್ಕಾರಕ್ಕೆ ಜುಲೈ 15ರ ಒಳಗೆ ನಾಮನಿರ್ದೇಶನ ಸಲ್ಲಿಸಿ
ಕರ್ನಾಟಕ ಸರ್ಕಾರವು ಪ್ರಸ್ತಾವನೆಗಳು ಪರಿಶೀಲಿಸಿ2025ನೇ ಜುಲೈ 31 ರೊಳಗಾಗಿ ಭಾರತ ಸರ್ಕಾರಕ್ಕೆ ಆನ್‍ಲೈನ್ ಮೂಲಕ ಮಾತ್ರ ಕಳುಹಿಸಬೇಕಾಗಿರುವುದರಿಂದ ಪದ್ಮ ಪ್ರಶಸ್ತಿಗಳಿಗೆ ಶಿಫಾರಸು ಮಾಡುವ ಪ್ರಸ್ತಾವನೆಗಳನ್ನು ಸಂಬಂಧಿಸಿದ ಇಲಾಖೆಗಳು 2025ನೇ ಜುಲೈ 15 ರೊಳಗೆ ಸಲ್ಲಿಸುವುದು ಹಾಗೂ ಸಾಫ್ಟ್ ಪ್ರತಿಗಳನ್ನು ಇ-ಮೇಲ್ ವಿಳಾಸ: uspolitical-dpar@kamataka.gov.in ಕ್ಕೆ ಕಳುಹಿಸುವುದು. 2025ನೇ ಜುಲೈ 15 ರ ನಂತರ ಬರುವ ಯಾವುದೇ ಪ್ರಸ್ತಾವನೆ /ಮನವಿಗಳನ್ನು ಪರಿಗಣಿಸಲು ಸಾಧ್ಯವಾಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ.