ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಿನಲ್ಲಿ ಏಪ್ರಿಲ್ 5 ರಂದು ದಾಖಲೆಯ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಯುಗಾದಿವರೆಗೆ ಬಿಸಿಗಾಳಿ ಮುಂದುವರಿಕೆ: ವರದಿ

ಬೆಂಗಳೂರಿನಲ್ಲಿ ಏಪ್ರಿಲ್ 5 ರಂದು ದಾಖಲೆಯ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಯುಗಾದಿವರೆಗೆ ಬಿಸಿಗಾಳಿ ಮುಂದುವರಿಕೆ: ವರದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳವರೆಗೆ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಹೆಚ್ಚಿನ ತಾಪಮಾನ ಇರಲಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ (ಏಪ್ರಿಲ್ 5) ದಾಖಲೆಯ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಯುಗಾದಿ ವರೆಗೆ ಬಿಸಿಗಾಳಿ ಹೆಚ್ಚಾಗಿರಲಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಶುಕ್ರವಾರ (ಏಪ್ರಿಲ್ 5) ದಾಖಲೆಯ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಯುಗಾದಿ ವರೆಗೆ ಬಿಸಿಗಾಳಿ ಹೆಚ್ಚಾಗಿರಲಿದೆ ಎಂದು ವರದಿಯಾಗಿದೆ. (HT)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru Temperature) ರಣ ಬಿಸಿಲು ಮುಂದುವರಿದಿದ್ದು, ತಾಪಮಾನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ (ಏಪ್ರಿಲ್ 5) ಗರಿಷ್ಠ ಉಷ್ಣಾಂಶ 38.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರು ನಗರ ಮತ್ತು ಎಚ್ಎಎಲ್ ವಿಮಾನ ನಿಲ್ದಾಣಗಳಲ್ಲಿ ತಲಾ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. 2016ರಲ್ಲಿ 39.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಏಪ್ರಿಲ್‌ನಲ್ಲಿ ಸರಾಸರಿ 34.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತದೆ. ಉದ್ಯಾನ ನಗರಿಯಲ್ಲಿ ಕೆಲವು ದಿನಗಳವರೆಗೆ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನಲ್ಲಿ ಬಿಸಿಗಾಳಿ ಹೆಚ್ಚಾಗುವುದರ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಸೆಂಟರ್ (ಕೆಎಸ್ಎನ್‌ಡಿಎಂಸಿ) ಸೇರಿದಂತೆ ಹವಾಮಾನ ಸಂಸ್ಥೆಗಳು ಶುಕ್ರವಾರ ರಾಜ್ಯದಲ್ಲಿ ಗರಿಷ್ಠ ತಾಪಮಾನ 42.8 ಡಿಗ್ರಿ ಸೆಲ್ಸಿಯಸ್ ದಾಖಲಿಸಿದ್ದರೆ, ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ತಾಪಮಾನ 43.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿಸಿವೆ.

ಕೊಡಗು, ಮಂಡ್ಯ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಒಂದು ಕಡೆ ಬಿಸಿ ಹೆಚ್ಚಾಗುತ್ತಿದ್ದರೆ ಮತ್ತೊಂದು ಕಡೆ ವರುಣ ಕೃಪೆ ತೋರುವ ಸಾಧ್ಯತೆ ಇದೆ. ಕೊಡಗು, ಮಂಡ್ಯ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಂಗಳವಾರದ (ಏಪ್ರಿಲ್ 9) ನಂತರ ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್ಎನ್‌ಡಿಎಂಸಿ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳು ಹೊರತುಪಡಿಸಿ ಯುಗಾದಿಯ ನಂತರ, ರಾಜ್ಯದ ಹಲವಾರು ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 10 ಮತ್ತು 11 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಕಲಬುರಗಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಮಂಡ್ಯ, ವಿಜಯನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಣ ಬಿಲಿಸಿನಿಂದ ಹೈರಾಣವಾಗಿರುವ ಜನರಿಗೆ ಮಳೆಯ ಮುನ್ಸೂಚನೆ ಕೊಂಚ ನಿಟ್ಟುಸಿರು ಬಿಟ್ಟಂತಾಗಿದೆ.

IPL_Entry_Point