ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಕರ್ನಾಟಕದ ಉತ್ತರ ಒಳನಾಡಲ್ಲಿ ಕನಿಷ್ಠ ಉಷ್ಣಾಂಶ, ತೇವಾಂಶ ಕುಸಿತ, ಮೈ ನಡುಕದ ಚಳಿ- ಕರ್ನಾಟಕ ಹವಾಮಾನ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಕರ್ನಾಟಕದ ಉತ್ತರ ಒಳನಾಡಲ್ಲಿ ಕನಿಷ್ಠ ಉಷ್ಣಾಂಶ, ತೇವಾಂಶ ಕುಸಿತ, ಮೈ ನಡುಕದ ಚಳಿ- ಕರ್ನಾಟಕ ಹವಾಮಾನ

ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಕರ್ನಾಟಕದ ಉತ್ತರ ಒಳನಾಡಲ್ಲಿ ಕನಿಷ್ಠ ಉಷ್ಣಾಂಶ, ತೇವಾಂಶ ಕುಸಿತ, ಮೈ ನಡುಕದ ಚಳಿ- ಕರ್ನಾಟಕ ಹವಾಮಾನ

Karantaka Weather Today: ಕರ್ನಾಟಕದಲ್ಲಿ ಚಳಿಗಾಲದ ಚಳಿಯ ಅನುಭವ ಬಹುತೇಕ ಸ್ಥಳಗಳಲ್ಲಿ ತೀವ್ರಗೊಂಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಕುಸಿದಿದೆ. ಅನೇಕ ಕಡೆಗಳಲ್ಲಿ ತೇವಾಂಶ ಕುಸಿತವಾಗಿ ಒಣಹವೆ ತೀವ್ರಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಕರ್ನಾಟಕ ಹವಾಮಾನ ಮುನ್ಸೂಚನೆ ವಿವರ ಇಲ್ಲಿದೆ.

ಕರ್ನಾಟಕ ಹವಾಮಾನ: ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಕರ್ನಾಟಕದ ಉತ್ತರ ಒಳನಾಡಲ್ಲಿ ಕನಿಷ್ಠ ಉಷ್ಣಾಂಶ, ತೇವಾಂಶ ಕುಸಿತ, ಮೈ ನಡುಕದ ಚಳಿ ಅನುಭವ ಮುಂದುವರಿಯಲಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ: ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಕರ್ನಾಟಕದ ಉತ್ತರ ಒಳನಾಡಲ್ಲಿ ಕನಿಷ್ಠ ಉಷ್ಣಾಂಶ, ತೇವಾಂಶ ಕುಸಿತ, ಮೈ ನಡುಕದ ಚಳಿ ಅನುಭವ ಮುಂದುವರಿಯಲಿದೆ. (ಸಾಂಕೇತಿಕ ಚಿತ್ರ) (HT Photo)

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚಳಿಗಾಲದ ಮೈನಡುಕದ ಚಳಿಯ ಅನುಭವ ಇಂದು (ನವೆಂಬರ್ 25) ಕೂಡ ಮುಂದುವರಿಯಲಿದೆ. ಬೆಂಗಳೂರು ಸುತ್ತಮುತ್ತ ಅನೇಕ ಕಡೆಗಳಲ್ಲಿ ಚಳಿ ಹೆಚ್ಚಾಗಲಿದೆ. ರಾಜ್ಯದಲ್ಲಿ ಮಳೆ ಮುನ್ಸೂಚನೆ ಇಲ್ಲವಾದರೂ ಕೆಲವು ಕಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೆಲವು ಕಡೆ ತೇವಾಂಶ ಕುಸಿತವಾಗಿದ್ದು, ಒಣ ಹವೆ ಇರಲಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ನಿನ್ನೆ ಅಪರಾಹ್ನ ಪ್ರಕಟಿಸಿರುವ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಗರಿಷ್ಠ ಉಷ್ಣಾಂಶ 35.4 ಡಿಗ್ರಿ ಸೆಲ್ಶಿಯಸ್ ಕಾರವಾರದಲ್ಲಿ ಮತ್ತು ಕನಿಷ್ಠ ಉಷ್ಣಾಂಶ 12.6 ಡಿಗ್ರಿ ಸೆಲ್ಶಿಯಸ್‌ ವಿಜಯಪುರದಲ್ಲಿ ದಾಖಲಾಗಿತ್ತು. ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಕರ್ನಾಟಕ ಹವಾಮಾನ ಇಂದು (ನವೆಂಬರ್ 25) ಹೇಗಿದೆ ನೋಡೋಣ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಹವಾಮಾನ ಇಂದು; ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚಳಿ, ತೇವಾಂಶ ಕುಸಿತ, ಒಣಹವೆ

ಕರ್ನಾಟಕದ ಉದ್ದಗಲಕ್ಕೂ ಇಂದು (ನವೆಂಬರ್ 25) ಒಣಹವೆ ಇರುವ ಸಾಧ್ಯತೆ ಇದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ಮಂಜು/ ದಟ್ಟಮಂಜು ಹೆಚ್ಚಾಗಿ ಕಂಡುಬರುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಮೇಲೆ ಪ್ರತ್ಯೇಕವಾದ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1-3 ಡಿಗ್ರಿ ಸೆಲ್ಶಿಯಸ್‌) ಕಡಿಮೆ ಇರುತ್ತದೆ. ಇದು ಉತ್ತರ ಒಳನಾಡು ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ (2-4 ಡಿಗ್ರಿ ಸೆಲ್ಶಿಯಸ್‌) ಕಡಿಮೆ ಇರುತ್ತದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ. ಎನ್‌ ಪುವಿಯರಸನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆಲವು ಕಡೆಗಳಲ್ಲಿ ತೇವಾಂಶ ಕುಸಿತವಾಗಿದ್ದು, ಒಣಹವೆಯ ತೀವ್ರತೆ ಹೆಚ್ಚಿದೆ.

ಅದೇ ರೀತಿ ನಾಳೆ (ನವೆಂಬರ್ 26) ರಾಜ್ಯದಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ಮಂಜು/ ದಟ್ಟಮಂಜು ಹೆಚ್ಚಾಗಿ ಕಂಡುಬರುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಮೇಲೆ ಪ್ರತ್ಯೇಕವಾದ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1-3 ಡಿಗ್ರಿ ಸೆಲ್ಶಿಯಸ್‌) ಕಡಿಮೆ ಇರುತ್ತದೆ; ಮತ್ತು ಇದು ಉತ್ತರ ಒಳನಾಡು ಮೇಲೆ ಪ್ರತ್ಯೇಕವಾದ ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ (2-4 ಡಿಗ್ರಿ ಸೆಲ್ಶಿಯಸ್‌) ಇರಬಹುದು ಎಂದು ಪುವಿಯರಸನ್‌ ಹೇಳಿದ್ದಾರೆ.

ಬೆಂಗಳೂರು ನಗರ, ಗ್ರಾಮಾಂತರಗಳಲ್ಲಿ ಚಳಿ ಹೆಚ್ಚಳ, ಕನಿಷ್ಠ ತಾಪಮಾನ ಇಳಿಕೆ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಇಂದು (ನವೆಂಬರ್ 25) ನೀಲಾಕಾಶ ಇರಲಿದ್ದು, ಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಗೋಚರಿಸಲಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ಮಂಜು/ ದಟ್ಟಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ನಾಳೆಯೂ ಇದೇ ರೀತಿ ಹವಾಮಾನ ಮುಂದುವರಿಯಲಿದ್ದು, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಶಿಯಸ್‌ಗೆ ಇಳಿಯುವ ಸಾಧ್ಯತೆ ಇದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಹೇಳಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ನಿನ್ನೆ (ನವೆಂಬರ್ 24) ಗರಿಷ್ಠ ಉಷ್ಣಾಂಶ 28.3 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 18.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಇದೇ ರೀತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 28.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 18.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಮುಂಜಾನೆ ಮಂಜು, ಇಬ್ಬನಿ ಮತ್ತು ಚಳಿ ಅನೇಕ ಕಡೆಗಳಲ್ಲಿ ಅನುಭವಕ್ಕೆ ಬಂದಿತ್ತು.

ಹವಾಮಾನ ಲಕ್ಷಣ; ಇನ್ನೊಂದು ವಾರಕ್ಕಿಲ್ಲ ಮಳೆಯ ಲಕ್ಷಣ

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ಪ್ರಕಟಿಸಿದ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಸಿನೊಪ್ಟಿಕ್ ಹವಾಮಾನ ಲಕ್ಷಣದ ವಿವರ ಹೀಗಿದೆ. “ಪೂರ್ವ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ಅಗ್ನಿಯ ಬಂಗಾಳ ಕೊಲ್ಲಿಯ ಮೇಲಿನ ನಿನ್ನೆಯ ಕಡಿಮೆ ಒತ್ತಡದ ಪ್ರದೇಶವು ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಿತು. ಚೆನ್ನಾಗಿ ಗುರುತಿಸಲ್ಪಟ್ಟಿತು. ನವೆಂಬರ್ 24 ರಂದು ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಪೂರ್ವ ಸಮಭಾಜಕದಲ್ಲಿ ಕೇಂದ್ರೀಕೃತವಾಗಿದೆ. ಇದು ನವೆಂಬರ್ 25 ರಂದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತವಾಗಿ ತೀವ್ರಗೊಳ್ಳುತ್ತದೆ. ನಂತರ, ಮುಂದಿನ 2 ದಿನಗಳಲ್ಲಿ ಇದು ವಾಯುವ್ಯ ದಿಕ್ಕಿನಲ್ಲಿ ತಮಿಳುನಾಡು-ಶ್ರೀಲಂಕಾ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಆಗ್ನೆಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಪೂರ್ವ ಸಮಭಾಜಕ ಹಿಂದೂ ಮಹಾಸಾಗರದಿಂದ ಕೊಮೊರಿನ್ ಪ್ರದೇಶದ ಮೇಲೆ ಚೆನ್ನಾಗಿ ಗುರುತಿಸಲಾದ ಕಡಿಮೆ ಒತ್ತಡದ ವ್ಯವಸ್ಥೆಗೆ ಸಂಬಂಧಿಸಿದ ಸೈಕ್ಲೋನಿಕ್ ಪರಿಚಲನೆಯಿಂದ ಟ್ರಫ್ ಕಡಿಮೆ ಗುರುತಿಸಲ್ಪಟ್ಟಿದೆ."

ಹವಾಮಾನ ಇಲಾಖೆ ನವೆಂಬರ್‌ 23ರಂದು ಪ್ರಕಟಿಸಿದ ಕರ್ನಾಟಕ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದಾಗಿ 27ರಿಂದ ಮೂರ್ನಾಲ್ಕು ದಿನ ಕರ್ನಾಟಕ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಸದ್ಯ ಇದು ತಮಿಳುನಾಡು, ಕೇರಳ ಭಾಗದಲ್ಲಿ ಹೆಚ್ಚು ಮಳೆ ಸುರಿಯಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

Whats_app_banner