ಕರ್ನಾಟಕದ ಉತ್ತರ ಒಳನಾಡಿನಲ್ಲಿ ಉಷ್ಣಮಾರುತ, ಬೆಂಗಳೂರಲ್ಲಿ ಮಾರ್ಚ್‌ 21 ರ ತನಕ ಗರಿಷ್ಠ ತಾಪಮಾನದ ಸಂಕಷ್ಟ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದ ಉತ್ತರ ಒಳನಾಡಿನಲ್ಲಿ ಉಷ್ಣಮಾರುತ, ಬೆಂಗಳೂರಲ್ಲಿ ಮಾರ್ಚ್‌ 21 ರ ತನಕ ಗರಿಷ್ಠ ತಾಪಮಾನದ ಸಂಕಷ್ಟ

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಉಷ್ಣಮಾರುತ, ಬೆಂಗಳೂರಲ್ಲಿ ಮಾರ್ಚ್‌ 21 ರ ತನಕ ಗರಿಷ್ಠ ತಾಪಮಾನದ ಸಂಕಷ್ಟ

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಜೊತೆಗೆ ಇನ್ನೊಂದು ವಾರ ತಾಪಮಾನದ ಏರಿಕೆಯ ಸಂಕಷ್ಟವೂ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಕರ್ನಾಟಕದ ಉತ್ತರ ಒಳನಾಡಿಗೆ ಉಷ್ಣ ಮಾರುತದ ಎಚ್ಚರಿಕೆಯನ್ನೂ ನೀಡಿದೆ. ಅದರ ವಿವರ ಇಲ್ಲಿದೆ.

ಬೆಂಗಳೂರಲ್ಲಿ ಮಾರ್ಚ್‌ 21ರ ತನಕ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್‌ (ಸಾಂಕೇತಿಕ ಚಿತ್ರ)
ಬೆಂಗಳೂರಲ್ಲಿ ಮಾರ್ಚ್‌ 21ರ ತನಕ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್‌ (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಉಷ್ಣಮಾರುತದ ಎಚ್ಚರಿಕೆ ನೀಡಿರುವ ಭಾರತದ ಹವಾಮಾನ ಇಲಾಖೆ, ಬೆಂಗಳೂರಿನಲ್ಲಿ ಈ ವಾರ ತಾಪಮಾನ 35 ಡಿಗ್ರಿ ಸೆಲ್ಶಿಯಸ್‌ ಆಸುಪಾಸಿನಲ್ಲಿರುವ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ನೀರಿನ ಸಮಸ್ಯೆಯ ನಡುವೆ ತಾಪಮಾನ ಏರಿಕೆಯ ಸಂಕಷ್ಟ ಎದುರಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಈಗಾಗಲೇ ಬೆಂಗಳೂರು ಸುತ್ತಮುತ್ತ ಕಳೆದ ಎರಡು ದಿನಗಳಿಂದ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬಿಸಿಲಿನ ಬೇಗೆ ಜನರ ಮೇಲೆ ಪರಿಣಾಮ ಬೀರತೊಡಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದಲ್ಲಿ ನಿನ್ನೆ (ಮಾರ್ಚ್‌ 15) ಉಷ್ಣಾಂಶ 35.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ವರದಿ ಹೇಳಿದೆ.

ಹವಾಮಾನ ಕೇಂದ್ರದ ಮುನ್ಸೂಚನೆ ವರದಿ ಪ್ರಕಾರ, ಮಾರ್ಚ್‌ 21ರ ತನಕ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಶಿಯಸ್ ಮತ್ತು ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು.

ಬೆಂಗಳೂರಿನಲ್ಲಿ ಮಾರ್ಚ್‌ 21ರ ತನಕ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಮಾರ್ಚ್ 21ರ ತನಕ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್‌
ಬೆಂಗಳೂರು ನಗರದಲ್ಲಿ ಮಾರ್ಚ್ 21ರ ತನಕ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್‌ (IMD)

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಉಷ್ಣಮಾರುತದ ಎಚ್ಚರಿಕೆ

ಇದೇ ವೇಳೆ, ಕರ್ನಾಟಕದ ಉತ್ತರ ಒಳನಾಡಿನಲ್ಲಿ ಉಷ್ಣಮಾರುತದ ಎಚ್ಚರಿಕೆಯನ್ನು ಹವಾಮಾನ ಕೇಂದ್ರ ನೀಡಿದೆ. ಈ ಬೇಸಿಗೆಯಲ್ಲಿ ಕರ್ನಾಟಕವು 35 ಡಿಗ್ರಿ ಸೆಲ್ಸಿಯಸ್ ಮೀರದಿದ್ದರೂ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಎದುರಿಸಲಿದೆ ಎಂದು ಈ ಹಿಂದಿನ ಮುನ್ಸೂಚನೆಗಳು ಸೂಚಿಸಿದ್ದವು.

ಕರ್ನಾಟಕದ ವಿಜಯಪುರ, ಕಲಬುರಗಿ ಮತ್ತು ರಾಯಚೂರಿನಂತಹ ಪ್ರದೇಶಗಳಲ್ಲಿ ಹಗಲಿನಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಬಹುದು. ಬೆಂಗಳೂರು, ಮೈಸೂರು, ತುಮಕೂರು ಮತ್ತು ಹಾಸನದಂತಹ ಪ್ರದೇಶಗಳಲ್ಲಿ 34-35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.

ಮುಂದಿನ ನಾಲ್ಕೈದು ದಿನ ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಹೆಚ್ಚಳ

ಯಾದಗಿರಿ ಜಿಲ್ಲೆಯ ಹತ್ತಿಕುಣಿ ಹೋಬಳಿಯಲ್ಲಿ ರಾಜ್ಯದಲ್ಲಿಯೇ ಅತಿಹೆಚ್ಚು ಅಂದರೆ 42.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಮಾರ್ಚ್‌ 15ರಂದು ದಾಖಲಾಗಿದೆ. ರಾಯಚೂರು ಜಿಲ್ಲೆಯ ಹೆಚ್ಚಿನ ಸ್ಥಳಗಳು, ಕಲಬುರಗಿ ಜಿಲ್ಲೆಯ ಹಲವು ಸ್ಥಳಗಳು, ಯಾದಗಿರಿ ಜಿಲ್ಲೆಯ ಕೆಲವು ಸ್ಥಳಗಳು ಮತ್ತು ಬಳ್ಳಾರಿ, ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿನ್ನೆ(ಮಾರ್ಚ್‌ 15) ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಶಿಯಸ್‌ನಿಂದ 42.7 ಡಿಗ್ರಿ ಸೆಲ್ಶಿಯಸ್‌ ತಾಪಮಾನದ ತನಕ ಉಷ್ಣಾಂಶ ದಾಖಲಾಗಿದೆ.

ಕೆಎಸ್‌ಎನ್‌ಡಿಎಂಸಿ ಹವಾಮಾನ ಮೇಲ್ವಿಚಾರಣಾ ಜಾಲದ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ 15 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 12 ಸ್ಥಳಗಳು, ಯಾದಗಿರಿ ಜಿಲ್ಲೆಯಲ್ಲಿ 6 ಸ್ಥಳಗಳು, ಬಳ್ಳಾರಿ ಜಿಲ್ಲೆಯಲ್ಲಿ 3 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 2 ಸ್ಥಳಗಳು, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ತಲಾ 1 ಸ್ಥಳಗಳಲ್ಲಿ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸಿವೆ.

ಅದೇ ರೀತಿ ನಿನ್ನೆ (ಮಾರ್ಚ್ 15) ಕರ್ನಾಟಕದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1.6 ° C ನಿಂದ 3.0 ° C) ಹೆಚ್ಚಾಗಿದೆ. ಕರ್ನಾಟಕದ ದಕ್ಷಿಣ ಒಳಭಾಗದ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಸಾಮಾನ್ಯವಾಗಿತ್ತು ಎಂದು ವರದಿ ತಿಳಿಸಿದೆ.

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner