ಕರ್ನಾಟಕ ಹವಾಮಾನ ಮಾರ್ಚ್ 13; ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣ; ಉಳಿದೆಡೆ ಒಣಹವೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 13; ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣ; ಉಳಿದೆಡೆ ಒಣಹವೆ

ಕರ್ನಾಟಕ ಹವಾಮಾನ ಮಾರ್ಚ್ 13; ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣ; ಉಳಿದೆಡೆ ಒಣಹವೆ

ಕರ್ನಾಟಕ ಹವಾಮಾನ ಮಾರ್ಚ್ 13: ಕರ್ನಾಟಕದಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಉಷ್ಣಾಂಶ ತಗ್ಗಿದರೂ, ಕಡುಬೇಸಿಗೆಯ ಅನುಭವ ಮುಂದುವರಿಯಲಿದೆ. ರಾಜ್ಯದ ಉಳಿದೆಡೆ ಒಣಹವೆ ಎಂದು ಬಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮಾರ್ಚ್ 13
ಕರ್ನಾಟಕ ಹವಾಮಾನ ಮಾರ್ಚ್ 13

ಬೆಂಗಳೂರು: ಕರ್ನಾಟಕದಲ್ಲಿ ಒಣಹವೆ ಇದ್ದು, ಬೇಸಿಗೆಯ ನಡುವೆ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣ ಕಂಡುಬರಲಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಉಷ್ಣಾಂಶ ಹೆಚ್ಚಳವಾಗಲಿದ್ದು, ಕೆಲವು ಕಡೆಗೆ ತಾಪಮಾನ 40 ಡಿಗ್ರಿ ಸೆಲ್ಶಿಯಸ್ ಆಸುಪಾಸಿನಲ್ಲಿದೆ ಎಂದು ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮುಂದಿನ 24 ಗಂಟೆ ಅವಧಿಗೆ ಅಂದರೆ ಮಾರ್ಚ್‌ 14ರ ಬೆಳಗ್ಗೆ 8.30ರ ತನಕ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸುಂದರ್ ಎಂ ಮೇತ್ರಿ ತಿಳಿಸಿದ್ದಾರೆ.

ಕರ್ನಾಟಕದ ತಾಪಮಾನ

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿಒಣಹವೆ ಇತ್ತು. ಹೆಚ್ಚಿನ ಬದಲಾವಣೆ ಏನೂ ಇರಲಿಲ್ಲ. ಆದಾಗ್ಯೂ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ವಿಚಲನೆ ಕೆಲವು ಕಡೆ ಆಗಿದೆ. ಈ ಪೈಕಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಅಂದರೆ 3.1 ಡಿಗ್ರಿ ಸೆಲ್ಶಿಯಸ್‌ನಿಂದ 5 ಡಿಗ್ರಿ ಸೆಲ್ಶಿಯಸ್ ತನಕ ತಾಪಮಾನ ಇಳಿದಿದೆ.

ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಅಂದರೆ 1.6 ಡಿಗ್ರಿ ಸೆಲ್ಶಿಯಸ್‌ನಿಂದ 3 ಡಿಗ್ರಿ ಸೆಲ್ಶಿಯಸ್‌ ತನಕ ತಾಪಮಾನ ಹೆಚ್ಚಳವಾಗಿದೆ. ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕಿಂತ ಕಡಿಮೆ ಅಂದರೆ 1.6 ಡಿಗ್ರಿ ಸೆಲ್ಶಿಯಸ್‌ನಿಂದ 3 ಡಿಗ್ರಿ ಸೆಲ್ಶಿಯಸ್‌ ತನಕ ತಾಪಮಾನ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಸಮತಟ್ಟು ಪ್ರದೇಶಗಳ ಪೈಕಿ ಗರಿಷ್ಠ ಉಷ್ಣಾಂಶ ಕಲಬುರಗಿಯಲ್ಲಿ 38.4 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ ಮಂಡ್ಯದಲ್ಲಿ 19.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.

ಬೆಂಗಳೂರು ಹವಾಮಾನ ಇಂದು (ಮಾ.14); ಭಾಗಶಃ ಮೋಡಕವಿದ ವಾತಾವರಣ

ಬೆಂಗಳೂರು ನಗರದಲ್ಲಿ ಆಕಾಶ ನಿರ್ಮಲವಾಗಿದ್ದು, ಮಳೆಯ ಲಕ್ಷಣಗಳಿಲ್ಲ. ಆದಾಗ್ಯೂ ಮೋಡಕವಿದ ವಾತಾವರಣ ಇರಲಿದೆ. ಮಾರ್ಚ್‌ 14ರ ಬೆಳಗ್ಗೆ 8.30ರ ತನಕ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಡು ಬೇಸಿಗೆ ವಾತಾವರಣ ಇದ್ದು, ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಳವಾಗಲಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಶಿಯಸ್‌, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸುಂದರ್ ಎಂ ಮೇತ್ರಿ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಮಳೆಯ ಲಕ್ಷಣಗಳಿಲ್ಲ. ಆದರೆ ಬಹುತೇಕ ಕಡೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು. ನಿನ್ನೆ (ಮಾ.12)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 12) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.1 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 14 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 51)

ಮಂಗಳೂರು – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78)

ಚಿತ್ರದುರ್ಗ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಗದಗ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 55)

ಹೊನ್ನಾವರ – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 67)

ಕಲಬುರಗಿ – 28.3 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 34)

ಬೆಳಗಾವಿ – 32.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 42)

ಕಾರವಾರ – 31.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 63 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner