ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 7: ಬಳ್ಳಾರಿಗಿಂತಲೂ ಹೆಚ್ಚು ಬಿಸಿಲು ಬೆಂಗಳೂರಲ್ಲಿ; ಕಲಬುರಗಿ, ರಾಯಚೂರಲ್ಲೇ ಗರಿಷ್ಠ ಉಷ್ಣಾಂಶ

ಕರ್ನಾಟಕ ಹವಾಮಾನ ಮಾರ್ಚ್ 7: ಬಳ್ಳಾರಿಗಿಂತಲೂ ಹೆಚ್ಚು ಬಿಸಿಲು ಬೆಂಗಳೂರಲ್ಲಿ; ಕಲಬುರಗಿ, ರಾಯಚೂರಲ್ಲೇ ಗರಿಷ್ಠ ಉಷ್ಣಾಂಶ

ಕರ್ನಾಟಕ ಹವಾಮಾನ ಮಾರ್ಚ್ 7: ಕರ್ನಾಟಕದಲ್ಲಿ ಕಡುಬೇಸಿಗೆ ಅನುಭವ ಫೆಬ್ರವರಿಯಲ್ಲೇ ಆಗತೊಡಗಿದೆ. ರಾಜಧಾನಿ ಬೆಂಗಳೂರಲ್ಲಿ ಬಳ್ಳಾರಿಗಿಂತಲೂ ಹೆಚ್ಚು ಬಿಸಿಲಿನ ಬೇಗೆ ಅನುಭವಕ್ಕೆ ಬಂದಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮಾರ್ಚ್ 7
ಕರ್ನಾಟಕ ಹವಾಮಾನ ಮಾರ್ಚ್ 7

ಬೆಂಗಳೂರು: ಮಳೆಯ ಕೊರತೆ ಕಾರಣ ಕರ್ನಾಟಕದಲ್ಲಿ ಅವಧಿಗೂ ಮೊದಲೇ ಬೇಸಿಗೆ ಬಂದಿದೆ. ಇಂದು ಕೂಡ ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ವಿವಿಧೆಡೆ ಬೇಸಗೆಯ ಬೇಗೆ ಕಾಡತೊಡಗಿದೆ. ರಾಜಧಾನಿ ಬೆಂಗಳೂರಲ್ಲಿ ಬಳ್ಳಾರಿಗಿಂತಲೂ ಹೆಚ್ಚು ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ ಇದ್ದು, ಇಂದು ಕೂಡ ಇದೇ ವಾತಾವರಣ ಮುಂದುವರಿಯಬಹುದು.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಮಾರ್ಚ್ 10 ರ ತನಕ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಬೀಳುವ ಸಾಧ್ಯತೆಯೇ ಇಲ್ಲ. ಒಣ ಹವೆ ಮುಂದುವರಿಯಲಿದೆ. ಕನಿಷ್ಠ ಉಷ್ಣಾಂಶ ಸಾಮಾನ್ಯವಾಗಿದ್ದರೂ, ಗರಿಷ್ಠ ಉಷ್ಣಾಂಶ ಸಾಮಾನ್ಯ ಇರುವುದಕ್ಕಿಂತ ಹೆಚ್ಚೇ ದಾಖಲಾಗಲಿದೆ ಎಂದು ಹವಾಮಾನ ಮುನ್ಸೂಚನಾ ವರದಿ ತಿಳಿಸಿದೆ.

ಕರಾವಳಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿರುವುದಕ್ಕಿಂತ 2 ಡಿಗ್ರಿ ಸೆಲ್ಶಿಯಸ್ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.

ಬಳ್ಳಾರಿಗಿಂತ ಹೆಚ್ಚು, ಕಲಬುರಗಿ, ರಾಯಚೂರಿಗಿಂತ ಸ್ವಲ್ಪ ಕಡಿಮೆ ಬೆಂಗಳೂರು ಉಷ್ಣಾಂಶ

ಬೆಂಗಳೂರು ನಗರದಲ್ಲಿ ಆಕಾಶ ನಿರ್ಮಲವಾಗಿದ್ದು, ಮಳೆಯ ಲಕ್ಷಣಗಳಿಲ್ಲ. ಮಾರ್ಚ್‌ 8 ಬೆಳಗ್ಗೆ 8.30ರ ತನಕ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ನಿನ್ನೆ (ಮಾ.6) ಬಳ್ಳಾರಿಯಲ್ಲಿ 35 ಡಿಗ್ರಿ ಸೆಲ್ಶಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 38 ಡಿಗ್ರಿ ಸೆಲ್ಶಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 38.4 ಡಿಗ್ರಿ ಸೆಲ್ಶಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 36 ಡಿಗ್ರಿ ಸೆಲ್ಶಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. 2018ರ ಬಳಿಕ ಇದೇ ಮೊದಲ ಸಲ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ದಾಖಲಾಗಿರುವುದಾಗಿ ವರದಿ ಹೇಳಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಇಂದಿನ (ಮಾರ್ಚ್ 07) ಹವಾಮಾನ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಡು ಬೇಸಿಗೆ ವಾತಾವರಣ ಇದ್ದು, ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಳವಾಗಲಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಶಿಯಸ್‌, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಎನ್‌ ಪುವಿಯರಸನ್‌ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಮಳೆಯ ಲಕ್ಷಣಗಳಿಲ್ಲ. ಉಷ್ಣಾಂಶ ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು. ನಿನ್ನೆ (ಮಾ.6)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 6) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 07 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 51)

ಮಂಗಳೂರು – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70)

ಚಿತ್ರದುರ್ಗ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 60)

ಗದಗ – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 57)

ಹೊನ್ನಾವರ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 67)

ಕಲಬುರಗಿ – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 35)

ಬೆಳಗಾವಿ – 32.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 21)

ಕಾರವಾರ – 32.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 54 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point