ಕನ್ನಡ ಸುದ್ದಿ  /  Karnataka  /  Bengaluru Weather Today Partly Cloudy Sky Mist Likely During Early Hrs In Some Area Karnataka Weather Today Feb 22 Uks

ಕರ್ನಾಟಕ ಹವಾಮಾನ ಫೆ.22; ಬೆಂಗಳೂರು ನಗರ, ಗ್ರಾಮಾಂತರಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಳ

ಕರ್ನಾಟಕ ಹವಾಮಾನ ಫೆ.22 ರಂದು ಬಹುತೇಕ ಒಣಹವೆ ಇರಲಿದೆ. ಕರಾವಳಿ, ಒಳನಾಡುಗಳ ಗ್ರಾಮಾಂತರ ಪ್ರದೇಶಗಳಲ್ಲಿ ಮುಂಜಾನೆ ಮಂಜು, ಸ್ವಲ್ಪ ಚಳಿ ಕಾಣಬಹುದು. ಬೆಂಗಳೂರು ನಗರ, ಗ್ರಾಮಾಂತರಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ರಾಜ್ಯದಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್‌ ಹೆಚ್ಚಳ ನಿರೀಕ್ಷಿತ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಕರ್ನಾಟಕ ಹವಾಮಾನ ಫೆ.22; ಬೆಂಗಳೂರು ನಗರ, ಗ್ರಾಮಾಂತರಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನಾ ವರದಿ ತಿಳಿಸಿದೆ.
ಕರ್ನಾಟಕ ಹವಾಮಾನ ಫೆ.22; ಬೆಂಗಳೂರು ನಗರ, ಗ್ರಾಮಾಂತರಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು: ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮುಂಜಾನೆ ಮಂಜು ಕಾಡಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ರಾತ್ರಿ ಮತ್ತು ಮುಂಜಾನೆ ಸ್ವಲ್ಪ ಚಳಿ ಇರಲಿದೆ. ಉಳಿದಂತೆ ರಾಜ್ಯದಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್‌ ಹೆಚ್ಚಳವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಮಳೆ ಮುನ್ಸೂಚನೆ ನೀಡಿರುವ ಬೆಂಗಳೂರು ಹವಾಮಾನ ಕೇಂದ್ರ, ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹೇಳಿದೆ. ಬೇರೆ ಯಾವುದೇ ಮುನ್ನೆಚ್ಚರಿಕೆ ಇಲ್ಲ. ಅದೇ ರೀತಿ, ರಾಜ್ಯದ ಒಂದೆರಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.

ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಎಲ್ಲೂ ಮಳೆ ಬಿದ್ದ ವರದಿ ಇಲ್ಲ. ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶದಲ್ಲಿ 2.1 ಡಿಗ್ರಿ ಸೆಲ್ಶಿಯಸ್‌ನಿಂದ 4 ಡಿಗ್ರಿ ಸೆಲ್ಶಿಯಸ್ ತನಕ ಇಳಿಕೆಯಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆ ತಾಪಮಾನ 2.1 ಡಿಗ್ರಿ ಸೆಲ್ಶಿಯಸ್‌ನಿಂದ 4 ಡಿಗ್ರಿ ಸೆಲ್ಶಿಯಸ್ ತನಕ ಏರಿಕೆಯಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ. ಅತಿ ಕಡಿಮೆ ಉಷ್ಣಾಂಶ 14.9 ಡಿಗ್ರಿ ಸೆಲ್ಶಿಯಸ್‌ ವಿಜಯಪುರದಲ್ಲಿ ದಾಖಲಾಗಿದೆ ಎಂದು ವರದಿ ಹೇಳಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಹವಾಮಾನ ಇಂದು (ಫೆ. 22)

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಸುತ್ತಮುತ್ತ ಜಿಲ್ಲೆಗಳಲ್ಲಿ ಗುರುವಾರ (ಫೆ 22) ಕೆಲವೆಡೆ ಮುಂಜಾನೆ ಮಂಜು ಮುಸುಕಿದ ವಾತಾವರಣ ಇರಲಿದೆ. ಚಳಿಕೂಡ ಇರಲಿದ್ದು, ಕೆಲವು ಕಡೆ ಮೋಡ ಮುಸುಕಿದ ವಾತಾವರಣ ಇರಲಿದೆ.ಹಗಲು ನಿರ್ಮಲ ಆಕಾಶ ಕಾಣಬಹುದು ಎಂದು ವರದಿ ಹೇಳಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇಂದು (ಫೆ. 22) ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಶಿಯಸ್‌ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್ ಅನುಭವಕ್ಕೆ ಬರಲಿದೆ. ನಿನ್ನೆ (ಫೆ.21) 33 ಡಿಗ್ರಿ ಸೆಲ್ಶಿಯಸ್ ಮತ್ತುಕನಿಷ್ಠ 21.4 ಡಿಗ್ರಿ ಸೆಲ್ಶಿಯಸ್ ಇತ್ತು. ಅದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಶಿಯಸ್‌ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್ ಇರಲಿದೆ. ನಿನ್ನೆ (ಫೆ. 21) ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ನಗರಗಳಲ್ಲಿ ಈಗಿನ (ಫೆ. 22 ರ ಬೆಳಗ್ಗೆ 6 ಗಂಟೆಗೆ) ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಫೆ.22 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು - 27.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 51)

ಮಂಗಳೂರು - 27.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 58)

ಚಿತ್ರದುರ್ಗ - 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 26)

ಗದಗ – 28.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 29)

ಹೊನ್ನಾವರ - 30.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 56)

ಕಲಬುರಗಿ - 32.9 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 34)

ಬೆಳಗಾವಿ - 31.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 19)

ಕಾರವಾರ - 32 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 55)

----------------------

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point