ಕರ್ನಾಟಕ ಹವಾಮಾನ ಫೆ 27; ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ , ರಾಜ್ಯದಲ್ಲಿ ಒಣಹವೆ, ಉಷ್ಣಾಂಶ ಹೆಚ್ಚಳ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಫೆ 27; ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ , ರಾಜ್ಯದಲ್ಲಿ ಒಣಹವೆ, ಉಷ್ಣಾಂಶ ಹೆಚ್ಚಳ

ಕರ್ನಾಟಕ ಹವಾಮಾನ ಫೆ 27; ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ , ರಾಜ್ಯದಲ್ಲಿ ಒಣಹವೆ, ಉಷ್ಣಾಂಶ ಹೆಚ್ಚಳ

ಕರ್ನಾಟಕ ಹವಾಮಾನ ಫೆ.27 ರಂದು ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದಲ್ಲಿ ಒಣಹವೆ, ಉಷ್ಣಾಂಶ ಹೆಚ್ಚಳ ನಿರೀಕ್ಷಿತ. ರಾಜ್ಯದಲ್ಲಿ ಹಲವೆಡೆ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ಫೆ 27; ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ , ರಾಜ್ಯದಲ್ಲಿ ಒಣಹವೆ, ಉಷ್ಣಾಂಶ ಹೆಚ್ಚಳ ನಿರೀಕ್ಷಿತ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.
ಕರ್ನಾಟಕ ಹವಾಮಾನ ಫೆ 27; ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ , ರಾಜ್ಯದಲ್ಲಿ ಒಣಹವೆ, ಉಷ್ಣಾಂಶ ಹೆಚ್ಚಳ ನಿರೀಕ್ಷಿತ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಬೆಂಗಳೂರು: ಮುಂದಿನ 24 ಗಂಟೆಗಳ ಹವಾಮಾನ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು, ಬೆಂಗಳೂರು ಸುತ್ತಮುತ್ತಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ. ಅದೇ ರೀತಿ, ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಗುಡುಗು, ಮಳೆಯ ಸುಳಿವು ಇಲ್ಲ ಎಂದು ಮುನ್ಸೂಚನೆ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಅವಧಿಗೆ ಮಳೆ ಮುನ್ಸೂಚನೆ ಇಲ್ಲ. ತಾಪಮಾನದ ಮುನ್ಸೂಚನೆ ಪ್ರಕಾರ, ರಾಜ್ಯದಾದ್ಯಂತ ಒಂದೆರಡು ಕಡೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗಿರಲಿದೆ. ಇನ್ನು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುಖ್ಯಸ್ಥರಾದ ಸುಂದರ್ ಎಂ ಮೇತ್ರಿ ತಿಳಿಸಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಹೀಗಿತ್ತು ಹವಾಮಾನ

ಕರ್ನಾಟಕದಲ್ಲಿ ಒಣಹವೆ ಮುಂದುವರಿದಿತ್ತು. ಮುಖ್ಯವೆನಿಸುವ ಮಳೆಯ ಪ್ರಮಾಣ ಇಲ್ಲ. ತಾಪಮಾನ ಗಮನಿಸುವುದಾದರೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ತಾಪಮಾನ ಗಮನಾರ್ಹ ಇಳಿಕೆ ಅಂದರೆ 2.1 ಡಿಗ್ರಿ ಸೆಲ್ಶಿಯಸ್‌ನಿಂದ 4 ಡಿಗ್ರಿ ಸೆಲ್ಶಿಯಸ್‌ನಷ್ಟು ಕಡಿಮೆಯಾಗಿದೆ.

ಕರಾವಳಿಯಲ್ಲಿ, ಒಳನಾಡಿನ ಕೆಲವು ಕಡೆಗಳಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. ಇನ್ನು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗಮನಾರ್ಹವಾದ ಏರಿಕೆ ಅಂದರೆ ಅಂದರೆ 2.1 ಡಿಗ್ರಿ ಸೆಲ್ಶಿಯಸ್‌ನಿಂದ 4 ಡಿಗ್ರಿ ಸೆಲ್ಶಿಯಸ್‌ನಷ್ಟು ಹೆಚ್ಚಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀಕಡಿಮೆ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಶಿಯಸ್‌ ದಾವಣಗೆರೆಯಲ್ಲಿ ದಾಖಲಾಯಿತು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಹವಾಮಾನ ಇಂದು (ಫೆ. 27) ಮತ್ತು ನಾಳೆ (ಫೆ.28)

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಸುತ್ತಮುತ್ತ ಮಂಗಳವಾರ (ಫೆ 27) ಅಂದರೆ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಮುಂಜಾನೆ ಸ್ವಲ್ಪ ತಂಪಿನ ವಾತಾವರಣ ಅನುಭವಕ್ಕೆ ಬರಲಿದೆ. ನಾಳೆ (ಫೆ.28) ಕೂಡ ಇದೇ ವಾತಾವರಣ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ಹೇಳಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇಂದು (ಫೆ. 27) ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಶಿಯಸ್‌ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಶಿಯಸ್ ಅನುಭವಕ್ಕೆ ಬರಲಿದೆ. ನಿನ್ನೆ (ಫೆ.26) 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಶಿಯಸ್‌ ಇತ್ತು. ಅದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಶಿಯಸ್‌ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಶಿಯಸ್ ಇರಲಿದೆ. ನಿನ್ನೆ (ಫೆ. 26) ಗರಿಷ್ಠ ತಾಪಮಾನ 33 ಮತ್ತು ಕನಿಷ್ಠ ತಾಪಮಾನ 18.5 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ನಗರಗಳಲ್ಲಿ ಈಗಿನ (ಫೆ. 27 ರ ಬೆಳಗ್ಗೆ 6 ಗಂಟೆಗೆ) ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಫೆ.27 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 72)

ಮಂಗಳೂರು - 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಚಿತ್ರದುರ್ಗ – 25.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 68)

ಗದಗ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 40)

ಹೊನ್ನಾವರ – 31.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 44)

ಕಲಬುರಗಿ – 27.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 59)

ಬೆಳಗಾವಿ - 32.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 28)

ಕಾರವಾರ – 33.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 51)

----------------------

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner