ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್; ಬೆಂಗಳೂರಿನಲ್ಲಿ ಇಂದು, ನಾಳೆ ಮಳೆಯ ಮುನ್ಸೂಚನೆ -Bengaluru Weather Update
ಕನ್ನಡ ಸುದ್ದಿ  /  ಕರ್ನಾಟಕ  /  ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್; ಬೆಂಗಳೂರಿನಲ್ಲಿ ಇಂದು, ನಾಳೆ ಮಳೆಯ ಮುನ್ಸೂಚನೆ -Bengaluru Weather Update

ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್; ಬೆಂಗಳೂರಿನಲ್ಲಿ ಇಂದು, ನಾಳೆ ಮಳೆಯ ಮುನ್ಸೂಚನೆ -Bengaluru Weather Update

ಬರೋಬ್ಬರಿ 146 ದಿನಗಳ ಬಳಿಕ ಬೆಂಗಳೂರಿಗೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಏಪ್ರಿಲ್ 19ರ ಶುಕ್ರವಾರ ಮತ್ತು 20ರ ಶನಿವಾರ ನಗರಕ್ಕೆ ವರುಣ ಆಗಮಿಸುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಏಪ್ರಿಲ್ 19 ಶುಕ್ರವಾರ ಮತ್ತು ಏಪ್ರಿಲ್ 20 ಶನಿವಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ಹೇಳಿದೆ.
ಬೆಂಗಳೂರಿನಲ್ಲಿ ಏಪ್ರಿಲ್ 19 ಶುಕ್ರವಾರ ಮತ್ತು ಏಪ್ರಿಲ್ 20 ಶನಿವಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ಹೇಳಿದೆ.

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ (Bengaluru Weather) ಇಂದು (ಏಪ್ರಿಲ್ 19, ಶುಕ್ರವಾರ) ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಇದ್ದ ಒಣಹವೆ ಕೊನೆಗೂ ಕೊನೆಗೊಳ್ಳಲಿದೆ ಎಂಬ ಸಿಹಿ ಸುದ್ದಿ ಸಿಕ್ಕಿದೆ. ಮನೆಗಳಿಗೆ ಹವಾನಿಯಂತ್ರಣಗಳು (ಎಸಿ) ಮತ್ತು ಕೂಲರ್‌ಗಳಿಗೆ ಬೇಡಿಕೆಯಿರುವ "ಗಾರ್ಡನ್ ಸಿಟಿ" ಯಲ್ಲಿ ಸುಡುವ ಶಾಖ ಮತ್ತು ತಾಪಮಾನದಿಂದ ತತ್ತರಿಸಿರುವ ಜನರಿಗೆ ಇವತ್ತು ವರುಣನ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಹೊಸ ಅಪ್ಡೇಟ್ ಪ್ರಕಾರ, ಮುಂಬರುವ ದಿನಗಳಲ್ಲಿ, ಅಂದರೆ ಶುಕ್ರವಾರದಿಂದ ಮಂಗಳವಾರದವರೆಗೆ (ಏಪ್ರಿಲ್ 19 - 23) ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ರಾಯಚೂರು, ವಿಜಯಪುರ, ಬೀದರ್, ವಿಜಯಪುರದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರ (ಏಪ್ರಿಲ್ 19) ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಏಪ್ರಿಲ್ 19 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಐಎಂಡಿ ದೈನಂದಿನ ಬುಲೆಟಿನ್ ತಿಳಿಸಿದೆ. ಮಾರ್ಚ್ 21 ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಹಲವೆಡೆ ಕೆಳೆದೊಂದು ವಾರದಿಂದ ಮಳೆಯಾಗುತ್ತಿದೆ. ಗುರುವಾರ (ಏಪ್ರಿಲ್ 18) ರಾತ್ರಿ 7.45ಕ್ಕೆ ದಾಖಲಾಗಿರುವ ವರದಿಯಂತೆ 24 ಗಂಟೆಗಳಲ್ಲಿ ಕೆಲವು ಜಿಲ್ಲೆಯಗಳಲ್ಲಿ ಭಾರಿ ಮಳೆಯಾಗಿದೆ. ಬೆಳಗಾವಿಯ ಅಥಣಿಯಲ್ಲಿ 6 ಸೆಂಟಿ ಮೀಟರ್ ಮಳೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ 4 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಉತ್ತರ ಕನ್ನಡದ ಹೊನ್ನಾವರ, ಗದಗ, ಚಿಕ್ಕೋಜಿ,ಬೆಳಗಾವಿಯ ಸೇಡಬಾಳ, ವಿಜಯಪುರದ ಟಿಕ್ಕೋಟ, ಶಿವಮೊಗ್ಗದ ಹುಂಚದಕಟ್ಟೆ, ಹಾಸನದ ಬೇಳೂರು, ಶಿವಮೊಗ್ಗದ ತ್ಯಾಗರ್ತಿಯಲ್ಲಿ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ.

ಏಪ್ರಿಲ್ 21ರ ಭಾನುವಾರದ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಏಪ್ರಿಲ್ 19 ರಿಂದ 21 ರವರೆಗೆ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಸಾಗುವ ಜೊತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆ ಇರುತ್ತದೆ ಎಂದು ಹೇಳಿದೆ.

Whats_app_banner