Power Cut In Bengaluru: ಅಕ್ಟೋಬರ್ 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್, ನಿಮ್ಮ ಏರಿಯಾನೂ ಇರಬಹುದು
BESCOM Power Cut: ಅಕ್ಟೋಬರ್ 19ರ ಶನಿವಾರ ಬೆಂಗಳೂರಿನ ಈ ಪ್ರದೇಶಗಳಲ್ಲಿ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆವರೆಗೆ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕೃತ ಮಾಹಿತಿ ನೀಡಿದೆ.
ಬೆಂಗಳೂರು: ಅಕ್ಟೋಬರ್ 19ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶನಿವಾರ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಕಡಿತವಾಗಲಿದ್ದು, ಜನ ಸಹಕರಿಸುವಂತೆ ಬೆಸ್ಕಾಂ ತಿಳಿಸಿದೆ. ಹಾಗಾದರೆ ಯಾವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ.
66/11ಕೆವಿ ಬ್ರಿಗೇಡ್ ಮೆಟ್ರೋ ಪೋಲಿಸ್ ಸ್ಟೇಷನ್ನಲ್ಲಿ 31.5 ಎಂವಿಎ ಶಕ್ತಿ ಪರಿವರ್ತಕ- 2ರಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಕಾರಣ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ದೊಡ್ಡನೆಕ್ಕುಂಡಿ ಇಂಡಸ್ಟ್ರಿಯಲ್ ಏರಿಯಾ, ಆಲ್ಫೈನ್ ಇಕೋ ರೋಡ್, ಫ್ರೆಂಡ್ಸ್ ಲೇಔಟ್, ಬ್ರಿಗೇಡ್ ಮೆಟ್ರೋ ಪೋಲಿಸ್ ಕಾಮನ್ ಏರಿಯಾ ಔಟ್, ಕುಂದನಹಳ್ಳಿ ಮುಖ್ಯ ರಸ್ತೆ, ಆಶ್ರಯ ಲೇಔಟ್, ಸರ್ ಎಂ ವಿಶ್ವೇಶ್ವರಯ್ಯ ಕೈಗಾರಿಕಾ ಪ್ರದೇಶ, ಯುನೈಟೆಡ್ ಆಕ್ಸಿಜನ್ ಅಪಾರ್ಟ್ಮೆಂಟ್ ಕಾವೇರಿ ನಗರ ಪ್ರವೇಶ, ಪ್ರೆಸ್ಟೀಜ್ ಟೆಕ್ನೋ ಸ್ಟಾರ್ ಐಟಿ ಪಾರ್ಕ್.
ಅಕ್ಟೋಬರ್ 19ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ 66/11 ಕೆವಿ ಶೋಭಾ ಸಿಟಿ ಉಪ-ಕೇಂದ್ರದಲ್ಲಿ ತುರ್ತುನಿರ್ವಹಣಾ ಕೆಲಸ ಕಾರಣ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ಶೊಭಾ ಸಿಟಿ, ಚೊಕ್ಕನಹಳ್ಳಿ, ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೊಲೀಸ್ ಕ್ವಾಟ್ರಸ್, ಆರ್ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ಬಾಲಾಜಿ ಲೇಔಟ್, ನಾಗೇನಹಳ್ಳಿ, ಅರ್ಕಾವತಿ ಲೇಔಟ್ ಥಣಿಸಂದ್ರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ, ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್ ಸುತ್ತಮುತ್ತಲಿನ ಪ್ರದೇಶಗಳು.