Betta Kuruba: ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ, ಒಟ್ಟು 12 ಜಾತಿಗಳನ್ನು ಎಸ್‌ಟಿ ವರ್ಗಕ್ಕೆ ಸೇರಿಸಿದ ಕೇಂದ್ರ ಸರಕಾರ
ಕನ್ನಡ ಸುದ್ದಿ  /  ಕರ್ನಾಟಕ  /  Betta Kuruba: ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ, ಒಟ್ಟು 12 ಜಾತಿಗಳನ್ನು ಎಸ್‌ಟಿ ವರ್ಗಕ್ಕೆ ಸೇರಿಸಿದ ಕೇಂದ್ರ ಸರಕಾರ

Betta Kuruba: ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ, ಒಟ್ಟು 12 ಜಾತಿಗಳನ್ನು ಎಸ್‌ಟಿ ವರ್ಗಕ್ಕೆ ಸೇರಿಸಿದ ಕೇಂದ್ರ ಸರಕಾರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ರಾಜ್ಯದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು ಹನ್ನೆರಡು ಜಾತಿಗಳನ್ನು ಪರಿಶಿಷ್ಟಪಂಗಡಗಳ ವರ್ಗಕ್ಕೆ ಸೇರಿಸಲಾಗಿದೆ.

<p>ಕರ್ನಾಟಕದ ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ, ಒಟ್ಟು 12 ಜಾತಿಗಳ ಸೇರ್ಪಡೆ</p>
ಕರ್ನಾಟಕದ ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ, ಒಟ್ಟು 12 ಜಾತಿಗಳ ಸೇರ್ಪಡೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ರಾಜ್ಯದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು ಹನ್ನೆರಡು ಜಾತಿಗಳನ್ನು ಪರಿಶಿಷ್ಟಪಂಗಡಗಳ ವರ್ಗಕ್ಕೆ ಸೇರಿಸಲಾಗಿದೆ.

ಈ ಕುರಿತು ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಟ್ವಿಟ್‌ ಮಾಡಿದ್ದಾರೆ. "ಪ್ರಧಾನಿ ಶ್ರೀ @narendramodi ಜೀ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ" ಎಂದು ಪ್ರಹ್ಲಾದ್‌ ಜೋಶಿ ಟ್ವಿಟ್‌ ಮಾಡಿದ್ದಾರೆ.

ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು.‌ ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು. ಈ ಸಂಬಂಧ ಕರ್ನಾಟಕ ಸರ್ಕಾರ ಮಾಡಿದ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟ ಇದೀಗ ಅನುಮೋದಿಸಿದೆ ಎಂದು ಪ್ರಹ್ಲಾದ್‌ ಜೋಶಿ ಟ್ವಿಟ್‌ ಮಾಡಿದ್ದಾರೆ.

ಬಿಎಸ್‌ವೈ ಅಭಿನಂದನೆ

ಇಂದು ಪ್ರಧಾನಿ ಶ್ರೀ @narendramodiರವರ ನೇತೃತ್ವದ ಸಂಪುಟ ಸಭೆಯಲ್ಲಿ ನಮ್ಮ ರಾಜ್ಯದ ಬೆಟ್ಟಕುರುಬ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿರುವುದು ಸ್ವಾಗತಾರ್ಹ. ಆಮೂಲಕ ಸಮುದಾಯಗಳ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗಿದ್ದು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಟ್ವಿಟ್‌ ಮಾಡಿದ್ದಾರೆ.

Whats_app_banner