ಕನ್ನಡ ಸುದ್ದಿ  /  Karnataka  /  Bhagavad Gita Is Not A Religious Book: Quran A Religious Book, Bhagavad Gita Is Not Clarified Karnataka Education Minister Bc Nagesh

Bhagavad Gita is not a religious book: ಖುರಾನ್‌ ಧಾರ್ಮಿಕ ಗ್ರಂಥ ಆದರೆ ಭಗವದ್ಗೀತೆ ಅಲ್ಲ; ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

Karnataka education minister BC Nagesh: ಭಗವದ್ಗೀತೆ ಧಾರ್ಮಿಕ ಪುಸ್ತಕವಲ್ಲ ಮತ್ತು ಇದು ಯಾವುದೇ ಧಾರ್ಮಿಕ ಆಚರಣೆಗಳನ್ನು ಉತ್ತೇಜಿಸುವುದಿಲ್ಲ. ಆದರೆ ಕುರಾನ್ ಧಾರ್ಮಿಕ ಗ್ರಂಥವಾಗಿದೆ ಎಂದು ರಾಜ್ಯದ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ.

ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (ANI)
ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (ANI)

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ನೈತಿಕ ಪಠ್ಯವಾಗಿ ಭಗವದ್ಗೀತೆಯನ್ನು ಪರಿಚಯಿಸುವ ಸರ್ಕಾರದ ಯೋಜನೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ.

ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ ಮತ್ತು ಯಾವುದೇ ಧಾರ್ಮಿಕ ಆಚರಣೆಗಳನ್ನು ಉತ್ತೇಜಿಸುವುದಿಲ್ಲ. ಆದರೆ ಕುರಾನ್ ಧಾರ್ಮಿಕ ಗ್ರಂಥವಾಗಿದೆ ಎಂದು ಸಚಿವರು ಹೇಳಿದರು.

ಭಗವದ್ಗೀತೆ ವಿದ್ಯಾರ್ಥಿಗಳಿಗೆ ನೈತಿಕ ಪಾಠಗಳನ್ನು ಪ್ರೇರೇಪಿಸುತ್ತದೆ. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಅನೇಕರನ್ನು ಅದು ಮುನ್ನಡೆಸಿದೆ ಎಂದು ಸಚಿವರು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

“ಕುರಾನ್ ಒಂದು ಧಾರ್ಮಿಕ ಗ್ರಂಥ. ಆದರೆ ಭಗವದ್‌ ಗೀತೆ ಅಲ್ಲ. ಇದು ದೇವರ ಪೂಜೆ ಅಥವಾ ಯಾವುದೇ ಧಾರ್ಮಿಕ ಆಚರಣೆಗಳ ಬಗ್ಗೆ ಮಾತನಾಡುವುದಿಲ್ಲ. ಇದು ನೈತಿಕ ವಿಷಯ ಮತ್ತು ವಿದ್ಯಾರ್ಥಿಗಳನ್ನು ಪ್ರೇರೇಪಿಸುತ್ತದೆ. ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿಯೂ ಜನರು ಸ್ಫೂರ್ತಿ ಪಡೆದರು ”ಎಂದು ನಾಗೇಶ್ ಅವರು ANI ಸುದ್ದಿ ಸಂಸ್ಥೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಚಿವ ನಾಗೇಶ್‌ ಅವರು ಸೋಮವಾರ, ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವು ಭಗವದ್ಗೀತೆಯನ್ನು ಶಾಲೆಗಳಲ್ಲಿ ನೈತಿಕ ಪಠ್ಯವಾಗಿ ಪರಿಚಯಿಸಲು ಚರ್ಚೆ ನಡೆಸುತ್ತಿದೆ. ಸಮಿತಿಯು ಈಗಾಗಲೇ ಅದರ ಮೇಲೆ ಕೆಲಸ ಮಾಡುತ್ತಿದೆ ಮತ್ತು ಈ ವರ್ಷದ ಡಿಸೆಂಬರ್‌ನಿಂದ ಅದನ್ನು ಕಾರ್ಯಗತಗೊಳಿಸಲು ನಾವು ಯೋಜಿಸಿದ್ದೇವೆ. ಆದಾಗ್ಯೂ, ಇದು ಪಠ್ಯಕ್ರಮದ ಭಾಗವಲ್ಲ ಮತ್ತು ಬೋಧನೆಗಳ ಆಧಾರದ ಮೇಲೆ ಯಾವುದೇ ಪರೀಕ್ಷೆ ಇರುವುದಿಲ್ಲ ಎಂದು ಹೇಳಿದ್ದರು.

ಕರ್ನಾಟಕದಾದ್ಯಂತ 6ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಭಾಗವಾಗಿ ಭಗವದ್ಗೀತೆಯನ್ನು ಸೇರಿಸಲು ಸರ್ಕಾರ ಪರಿಗಣಿಸುತ್ತಿದೆ ಎಂದು ಬೊಮ್ಮಾಯಿ ಈ ವರ್ಷ ಮಾರ್ಚ್‌ನಲ್ಲಿ ಹೇಳಿದ್ದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಸರಕಾರ ಗಮನಹರಿಸಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ, ಕುರಾನ್ ಅಥವಾ ಬೈಬಲ್ ಅನ್ನು ಕಲಿಸಬಹುದು ಆದರೆ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವಲ್ಲಿ ಸರ್ಕಾರದ ಆದ್ಯತೆ ಇರಬೇಕು. ಅದು ಪ್ರಾಥಮಿಕ ಧ್ಯೇಯವಾಗಬೇಕು. ಶಾಲೆಗಳಲ್ಲಿ ಪವಿತ್ರ ಗ್ರಂಥವನ್ನು ನೈತಿಕ ಶಿಕ್ಷಣವಾಗಿ ಕಲಿಸಲು ನಮ್ಮ ಪಕ್ಷಕ್ಕೆ ಯಾವುದೇ ಅಭ್ಯಂತರವಿಲ್ಲ. ಎಂದು ಕಾಂಗ್ರೆಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

IPL_Entry_Point