Bidar News: ಸಿನಿಮೀಯ ರೀತಿಯಲ್ಲಿ ಪೊಲೀಸ್ ಕಾರ್ಯಾಚರಣೆ; ಒಂದು ಕೋಟಿಗೂ ಅಧಿಕ ಮೌಲ್ಯದ ಗಾಂಜಾ ವಶ
ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ಸಿನಿಮಯ ರೀತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬರೋಬರಿ 1.18 ಕೋಟಿ ರೂ. ಮೌಲ್ಯದ 118 ಕೆಜಿ ಗಾಂಜಾ ಮತ್ತು 8 ಲಕ್ಷ ರೂ. ಮೌಲ್ಯದ ಕಾರು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬೀದರ್: ಜಿಲ್ಲೆಯಲ್ಲಿ ಕಳೆದ ಹಲವಾರು ತಿಂಗಳಿಂದ ಅಕ್ರಮ ಚಟುವಟಿಕೆಗಳು ವ್ಯಾಪಕವಾಗಿ ನಡೆಯುತ್ತಿದ್ದು, ಅದರಲ್ಲೂ ಅಕ್ರಮ ಗಾಂಜಾ ಸಾಗಾಟ ನಡೆಯುತ್ತಿದೆ. ಬುಧವಾರ ಸಹ ಅಕ್ರಮ ಗಾಂಜಾ ಸಾಗಾಟ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಬೀದರ್ ಪೊಲೀಸರು ಸಿನಿಮಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ರೂ.ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.
ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ಸಿನಿಮಯ ರೀತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬರೋಬರಿ 1.18 ಕೋಟಿ ರೂ. ಮೌಲ್ಯದ 118 ಕೆಜಿ ಗಾಂಜಾ ಮತ್ತು 8 ಲಕ್ಷ ರೂ. ಮೌಲ್ಯದ ಕಾರು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಾಷ್ಟ್ರಿಯ ಹೆದ್ದಾರಿ 9 ರಲ್ಲಿ ಬರುವ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮಂಗಲಿ ಟೋಲ್ ಬಳಿ ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳು ಓಡಿ ಹೋಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಸಿನಿಮಯ ರೀತಿಯಲ್ಲಿ ಕಾರು ಚೇಸ್ ಮಾಡಿದ್ದಾರೆ. ಆದರೆ, ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಇಬ್ಬರು ಆರೋಪಿಗಳಿದ್ದರು. ಇಬ್ಬರೂ ಪರಾರಿಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಗಾಂಜಾ ಜಪ್ತಿ ಮಾಡಿದ ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಮೆಚ್ಚುಗೆ ವ್ಯಕ್ತಪಡಿಸಿ, ಬಹುಮಾನ ಘೋಷಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 65 ಮಹಾರಾಷ್ಟ್ರ ಮತ್ತು ತೆಲಂಗಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ಇದು ಅಕ್ರಮ ಸಾಗಾಟಕ್ಕೆ ಬಳಕೆಯಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದುವರೆಗೆ ಒಟ್ಟು 13 ಕೋಟಿ ಗೂ ಅಧಿಕ ಮೌಲ್ಯದ 1,200 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಈ ಹೆದ್ದಾರಿಯಲ್ಲಿ ಗಸ್ತು ಹೆಚ್ಚಿಸಲಾಗಿದೆ. ಟೋಲ್ ಪ್ಲಾಜಾ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಇಂಟೆಲಿಜೆನ್ಸ್ ಬಲಪಡಿಸಲಾಗಿದೆ. ನೆರೆ ರಾಜ್ಯಗಳ ಪೊಲೀಸರೊಂದಿಗೆ ನಿರಂತರ ಸಂಪರ್ಕ ಹೊಂದಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
(ವರದಿ: ಎಸ್.ಬಿ.ರೆಡ್ಡಿ, ಕಲಬುರಗಿ)