ಕನ್ನಡ ಸುದ್ದಿ  /  Karnataka  /  Bjp Karnataka In-charge Arun Singh Hospitalised In Mangaluru

Arun Singh hospitalised: ಜೆಪಿ ನಡ್ಡಾ ಜತೆ ಮಂಗಳೂರಿಗೆ ಆಗಮಿಸಿದ್ದ ಅರುಣ್‌ ಸಿಂಗ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ (Arun Singh) ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Arun Singh hospitalised: ಜೆಪಿ ನಡ್ಡಾ ಜತೆ ಮಂಗಳೂರಿಗೆ ಆಗಮಿಸಿದ್ದ ಅರುಣ್‌ ಸಿಂಗ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು
Arun Singh hospitalised: ಜೆಪಿ ನಡ್ಡಾ ಜತೆ ಮಂಗಳೂರಿಗೆ ಆಗಮಿಸಿದ್ದ ಅರುಣ್‌ ಸಿಂಗ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಮಂಗಳೂರು: ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಜೆಪಿ ನಡ್ಡಾ ಆಗಮಿಸಿದ್ದು, ಅವರೊಂದಿಗೆ ಕರಾವಳಿಗೆ ಭೇಟಿ ನೀಡಿದ್ದ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಲವೊಂದು ವರದಿಗಳ ಪ್ರಕಾರ ಅವರು ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಅವರು ಕೈ ನೋವಿನ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ನಿನ್ನೆ ರಾತ್ರಿಯೇ ಜೆಪಿ ನಡ್ಡಾ ಅವರು ಮಂಗಳೂರಿಗೆ ಆಗಮಿಸಿದ್ದರು. ನಿನ್ನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅರುಣ್‌ ಸಿಂಗ್‌ ಸ್ವಾಗತಿಸಿದ್ದರು. ಜೆಪಿ ನಡ್ಡಾ ಜತೆಗೆ ಅರುಣ್‌ ಸಿಂಗ್‌ ಅವರು ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು.

ಇಂದು ಅರುಣ್‌ ಸಿಂಗ್‌ ಅವರಿಗೆ ಒಮ್ಮಿಂದೊಮ್ಮೆಲೆ ಅನಾರೋಗ್ಯ ಕಾಡಿದ್ದು, ತಕ್ಷಣ ಅವರನ್ನು ಅಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೊದಲು ಇವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಕೊಂಡಿದ್ದಾರೆ. ಬಳಿಕ ಆದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ಕರ್ನಾಟಕಕ್ಕೆ ಜೆಪಿ ನಡ್ಡಾ ಎರಡು ದಿನದ ಭೇಟಿ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಕರ್ನಾಟಕ ಇರುವುದರಿಂದ ರಾಜ್ಯಕ್ಕೆ ಕೇಂದ್ರ ನಾಯಕರು ಪದೇಪದೇ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಕರ್ನಾಟಕ ಪ್ರವಾಸ ಹಮ್ಮಿಕೊಂಡಿದ್ದಾರೆ.

ಎರಡು ದಿನಗಳ ಕಾಲ ಜೆಪಿ ನಡ್ಡಾ ಅವರು ಉಡುಪಿ, ಚಿಕ್ಕಮಗಳೂರು, ಬೇಲೂರು ಪ್ರವಾಸ ಕೈಗೊಂಡಿದ್ದಾರೆ. ನಿನ್ನೆ ಸಂಜೆ ಜೆಪಿ ನಡ್ಡಾ ಅವರು ಮಂಗಳೂರಿಗೆ ಆಗಮಿಸಿದ್ದರು. ಇಂದು ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದಾರೆ. ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಇವರು ಪಕ್ಷದ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಸಮಯದಲ್ಲಿ ಇವರು ರಾಜ್ಯದ ಬಿಜೆಪಿ ಮುಖಂಡರ ಜತೆ ಸಭೆ ನಡೆಸಲಿದ್ದು, ಚುನಾವಣೆಯಲ್ಲಿ ಗೆಲ್ಲಲು ಸಲಹೆ, ಸೂಚನೆಗಳನ್ನು ನೀಡಲಿದ್ದಾರೆ.

ಇಂದು ಉಡುಪಿ ಮತ್ತು ಬೈಂದೂರಿನ ಮುಳ್ಳಿಕಟ್ಟೆ ಗ್ರಾಮದಲ್ಲಿ ಭೂತ್‌ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಯಕರ್ತರ ಸಮಾವೇಶ ಇತ್ಯಾದಿಗಳನ್ನು ಇಂದು ಮುಗಿಸಿ, ನಾಳೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಕೊಪ್ಪದಲ್ಲಿ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಇಂದು ಬೆಳಗ್ಗೆ ಜೆಪಿ ನಡ್ಡಾ ಅವರು ಉಡುಪಿಯ ಕೃಷ್ಣಾ ಮಠಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಗಿದೆ ಎಂದು ಜೆಪಿ ನಡ್ಡಾ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಜೆಪಿ ನಡ್ಡಾ ಅವರ ಬಳಿ ಪೇಜಾವರ ಶ್ರೀಗಳು ಮತನಾಡಿದ್ದಾರೆ. ತುಳುಭಾಷೆಗೆ ಸೂಕ್ತ ಮಾನ್ಯತೆ ನೀಡಬೇಕು, ಹಿಂದು ಸಂಸ್ಕೃತಿಗೆ ಮನ್ನಣೆ ನೀಡಬೇಕು ಇತ್ಯಾದಿ ಬೇಡಿಕೆಗಳನ್ನು ಜೆಪಿ ನಡ್ಡಾ ಮುಂದಿಟ್ಟಿರುವುದಾಗಿ ಶ್ರೀಗಳು ಹೇಳಿದ್ದಾರೆ. ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು ಎಂಬ ಬೇಡಿಕೆ ಇಟ್ಟಿರುವುದಾಗಿಯೂ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

IPL_Entry_Point