Prahlad Joshi on Jagdish Shettar: ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ಪರಿಶೀಲನೆಯಲ್ಲಿದೆ: ಪ್ರಹ್ಲಾದ್ ಜೋಶಿ
ಕನ್ನಡ ಸುದ್ದಿ  /  ಕರ್ನಾಟಕ  /  Prahlad Joshi On Jagdish Shettar: ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ಪರಿಶೀಲನೆಯಲ್ಲಿದೆ: ಪ್ರಹ್ಲಾದ್ ಜೋಶಿ

Prahlad Joshi on Jagdish Shettar: ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ಪರಿಶೀಲನೆಯಲ್ಲಿದೆ: ಪ್ರಹ್ಲಾದ್ ಜೋಶಿ

ಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕತ್ವದ ಪರಿಶೀಲನೆಯಲ್ಲಿದೆ. ಟಿಕೆಟ್‌ ನೀಡಬೇಕು ಎಂದು ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ ಅಂತ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ನಾಯಕರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ನಾಯಕರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Assembly Election 2023) ಬಿಜೆಪಿ ಹೈಕಮಾಂಡ್ (BJP High Command) ಕೆಲವು ಕ್ಷೇತ್ರಗಳಿಗೆ ಅಳೆದು ತೂಗಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದೆ.

ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ (Hubli-Dharwad Central Constituency) ಇನ್ನೂ ಟಿಕೆಟ್ ಘೋಷಣೆ ಮಾಡದಿರುವುದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shetter) ಇಂದು ಬೆಳಗ್ಗೆ 11 ಗಂಟೆಗೆ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ.

ಬಿಜೆಪಿ ಹೈಕಮಾಂಡ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುತ್ತಾ ಇಲ್ವಾ ಎಂಬುದು ಇನ್ನೂ ಸ್ಪಷ್ಟವಾಗದಿದ್ರೂ ಮೂಲಗಳ ಪ್ರಕಾರ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್ ನೀಡಲು ಪಕ್ಷದ ಹಿರಿಯ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡುತ್ತದೆಯೇ ಎಂಬ ಅನಿಶ್ಚಿತತೆಯ ನಡುವೆಯೇ ಈ ವಿಷಯ ಪಕ್ಷದ ಹೈಕಮಾಂಡ್‌ನ ಪರಿಶೀಲನೆಯಲ್ಲಿದೆ. ಈ ವಿಷಯವನ್ನು ಸುಗಮವಾಗಿ ಪರಿಹರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕತ್ವದ ಪರಿಶೀಲನೆಯಲ್ಲಿದೆ. ಶೆಟ್ಟರ್‌ಗೆ ಟಿಕೆಟ್‌ ನೀಡಬೇಕು ಎಂದು ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ. ಶೆಟ್ಟರ್ ಮತ್ತು ನಾನು ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆವು. ಎಲ್ಲವೂ ಸುಸೂತ್ರವಾಗಿ ಬಗೆಹರಿಯಲಿದೆ ಎಂದು ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಮುನ್ನ ಬಿಜೆಪಿ ವರಿಷ್ಠರು, ಬೇರೆಯವರಿಗೆ ಅವಕಾಶ ಮಾಡಿಕೊಡುವಂತೆ ಶೆಟ್ಟರ್‌ಗೆ ಕೇಳಿದ್ದಾರೆ. ಆದರೆ ಕೊನೆಯ ಬಾರಿಗೆ ಸ್ಪರ್ಧಿಸಲು ಬಯಸುವುದಾಗಿ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಅಂತ ಹೇಳಲಾಗಿದೆ.

ಸ್ಪರ್ಧೆ ಮಾಡಿಯೇ ತೀರುತ್ತೇನೆ

ಬಿಜೆಪಿ ಹೈಕಮಾಂಡ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜಗದೀಶ್ ಶೆಟ್ಟರ್, ಹೊಸಬರಿಗೆ ಅವಕಾಶ ನೀಡುವುದಕ್ಕಾಗಿ ಟಿಕೆಟ್ ನೀಡಲಾಗುವುದಿಲ್ಲ ಎಂದು ಹೈಕಮಾಂಡ್ ಹೇಳ್ತಿದೆ. ಆದ್ರೆ ಸ್ಪರ್ಧೆ ಮಾಡಿಯೇ ತೀರುತ್ತೇನೆ ಅಂತ ಘೋಷಿಸಿದ್ದಾರೆ. ನಾನು ಸತತ ಆರು ಬಾರಿ ಗೆದ್ದು ಬಂದಿದ್ದೇನೆ. 21,000 ಹೆಚ್ಚು ಮತಗಳ ಅಂತರದಲ್ಲಿ ಗೆದ್ದಿದ್ದೇನೆ. ಪ್ರತಿ ಬಾರಿಯೂ ನನ್ನ ಗೆಲುವಿನ ಅಂತರ ದೊಡ್ಡದಿದೆ. ಆದರೂ ನನಗ್ಯಾಕೆ ಟಿಕೆಟ್ ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಶೆಟ್ಟರ್ ಅವರ ಟಿಕೆಟ್ ವಿಚಾರದ ಅಸಮಾಧಾನವನ್ನು ತಣಿಸಲು ಪ್ರಯತ್ನಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಶೇ.99 ರಷ್ಟು ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ 52 ಮಂದಿ ಹೊಸಬರಿಗೆ ಟಿಕೆಟ್ ನೀಡಿತ್ತು. ಬೇರೆ ಪಕ್ಷದಿಂದ ವಲಸೆ ಬಂದಿದ್ದ ಕೆಲವರಿಗೆ ಕೇಸರಿ ನಾಯಕರು ಮಣೆ ಹಾಕಿದ್ದಾರೆ. ಇದು ಪಕ್ಷದ ಮುಖಂಡರು, ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಹಾಲಿ ಶಾಸಕರಾಗಿದ್ದ ಎಂಪಿ ಕುಮಾರಸ್ವಾಮಿ ಕೂಡ ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಬೆಳಗಾವಿ ಉತ್ತರದ ಬಿಜೆಪಿ ಶಾಸಕರಾದ ಅನಿಲ್ ಬೆನಕೆ ಮತ್ತು ಬೆಳಗಾವಿಯ ರಾಮದುರ್ಗ ಕ್ಷೇತ್ರದ ಮಹದೇವಪ್ಪ ಯಾದವಾಡ ಅವರ ಬೆಂಬಲಿಗರು ಕೂಡ ತಮ್ಮ ನಾಯಕರಿಗೆ ಟಿಕೆಟ್ ನೀಡದಿದ್ದಕ್ಕೆ ರೊಚ್ಚಿಗೆದಿದ್ದಾರೆ. ಪಕ್ಷದಲ್ಲಿ ಅಸಮಾಧಾನವನ್ನು ಬಿಜೆಪಿ ನಾಯಕರು ಹೇಗೆ ಬಗೆ ಹರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Whats_app_banner