ಕನ್ನಡ ಸುದ್ದಿ  /  ಕರ್ನಾಟಕ  /  Bjp Raitha Morcha: ರೈತಪರ, ಜನಪರ ಬಿಜೆಪಿ ಸರ್ಕಾರ ಎಂದ ಬಿಎಸ್‌ವೈ; ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ

BJP Raitha Morcha: ರೈತಪರ, ಜನಪರ ಬಿಜೆಪಿ ಸರ್ಕಾರ ಎಂದ ಬಿಎಸ್‌ವೈ; ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ

BJP Raitha Morcha: ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಮತ್ತು ನಾಳೆ ಬೆಳಗಾವಿಯಲ್ಲಿ ನಡೆಯಲಿದೆ. ಇದಕ್ಕೆ ಮಾಜಿ ಸಿಎಂ ಬಿ.ಎಸ್.‌ಯಡಿಯೂರಪ್ಪ ಚಾಲನೆ ನೀಡಿದರು.

ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸಂದರ್ಭದಲ್ಲಿ ಎತ್ತಿನ ಗಾಡಿಯಲ್ಲಿ ಪ್ರಯಾಣಿಸಿದ ಬಿ.ಎಸ್.ವೈ.
ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸಂದರ್ಭದಲ್ಲಿ ಎತ್ತಿನ ಗಾಡಿಯಲ್ಲಿ ಪ್ರಯಾಣಿಸಿದ ಬಿ.ಎಸ್.ವೈ. (BJP)

ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ರೈತಪರ ಮತ್ತು ಜನಪರವಾಗಿ ಕೆಲಸ ಮಾಡುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಟ್ರೆಂಡಿಂಗ್​ ಸುದ್ದಿ

ಅವರು, ಬೆಳಗಾವಿ ನಗರದ ಮಯೂರ ಪ್ರೆಸಿಡೆನ್ಸಿ ಕ್ಲಬ್‍ನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಇಂದು ಚಾಲನೆ ನೀಡಿದ ಮಾತನಾಡಿದರು.

ಕರ್ನಾಟಕದಲ್ಲಿ ಈ ವರ್ಷ ಅಸೆಂಬ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಇದು ಅತ್ಯಂತ ಮಹತ್ವದ ಸಭೆ ಎಂದು ಹೇಳಿದ ಅವರು, ನಾನು ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಕಳೆದ 5 ದಶಕಗಳಿಂದ ಹೋರಾಟ ಮಾಡುತ್ತಿದ್ದೇನೆ ಎಂದ ಅವರು, ತಾವು ರೈತರಿಗಾಗಿ ಬಜೆಟ್ ಮಂಡಿಸಿದ್ದೆ ಎಂಬುದನ್ನು ನೆನಪಿಸಿಕೊಟ್ಟರು.

ಕಿಸಾನ್ ಸಮ್ಮಾನ್ ನಿಧಿಯಡಿ ಕೇಂದ್ರದ 6,000 ರೂಪಾಯಿ ಜತೆಗೆ ರಾಜ್ಯದಿಂದ 4,000 ರೂಪಾಯಿ ನೀಡುವುದನ್ನು ಆರಂಭಿಸಲಾಗಿದೆ. ರಾಜ್ಯದಲ್ಲಿ ಮನೆಮನೆಗೆ ನಳ್ಳಿನೀರಿನ ಯೋಜನೆಯನ್ನು ಜಾರಿಗೊಳಿಸಿದ್ದು, ರೈತ ವಿದ್ಯಾನಿಧಿ ಯೋಜನೆ ಅನುಷ್ಠಾನವನ್ನು ನೆನಪಿಸಿದ ಅವರು, ಬಿಜೆಪಿ ಸದಾ ಜನಪರವಾಗಿದೆ. ರೈತರ ಪರವಾಗಿದೆ ಎಂದು ತಿಳಿಸಿದರು.

ದೇಶವು ವಿಶ್ವದ 5ನೇ ಬೃಹತ್ ಅರ್ಥವ್ಯವಸ್ಥೆಯನ್ನು ಹೊಂದಿರುವುದರ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರ ವಹಿಸಿದ ಶ್ರಮವನ್ನು ಅವರು ಪ್ರಶಂಸಿಸಿದರು.

ರಾಷ್ಟ್ರೀಯ ರೈತ ಮೋರ್ಚಾದ ಅಧ್ಯಕ್ಷ ರಾಜಕುಮಾರ ಚಹರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ರಾಜ್ಯ ರೈತ ಮೋರ್ಚಾವು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರಲ್ಲದೆ, ಬಿಜೆಪಿಯ ರೈತಪರ ಕೆಲಸಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ವಿಶ್ವಗುರು ಆಗುವ ನಿಟ್ಟಿನಲ್ಲಿ ಮುನ್ನಡೆಯುತ್ತಿದೆ. 370ನೇ ವಿಧಿ ರದ್ದು ಮಾಡಿ, ರಾಮಮಂದಿರವನ್ನು ಅಯೋಧ್ಯೆಯಲ್ಲೇ ನಿರ್ಮಿಸಿ ಎಂದು ನಾವು ಹಿಂದೆ ಘೋಷಣೆ ಕೂಗುತ್ತಿದ್ದೆವು. ಆ ಘೋಷಣೆಗಳು ಇದೀಗ ಜಾರಿಯಾಗಿವೆ ಎಂದು ಸಂತಸ ಸೂಚಿಸಿದರು. 370ನೇ ವಿಧಿ ರದ್ದು ಮಾಡಲು ಮೋದಿಜಿ ಮತ್ತು ಅಮಿತ್ ಶಾ ಅವರು ಕಾರಣಕರ್ತರಾಗಿದ್ದಾರೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವೂ ನಡೆದಿದೆ ಎಂದು ವಿವರಿಸಿದರು.

ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ, ಮೋರ್ಚಾದ ಎಲ್ಲ ಪದಾಧಿಕಾರಿಗಳನ್ನು ವೀರಭೂಮಿ ಬೆಳಗಾವಿಗೆ ಸ್ವಾಗತಿಸಿದರು. ರೈತರ ಅಭಿವೃದ್ಧಿಗಾಗಿ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳು ನಿರಂತರವಾಗಿ ಶ್ರಮಿಸುತ್ತಿವೆ ಎಂದು ಅವರು ವಿವರಿಸಿದರು. ಕೋವಿಡ್ ಮಹಾಮಾರಿಯ ಸಂದರ್ಭದಲ್ಲೂ ದೇಶವು ವಿಕಾಸದ ಪ್ರಮಾಣದಲ್ಲಿ ಕುಸಿತ ಆಗಲಿಲ್ಲ. ಇದು ಪ್ರಧಾನಿ ಮೋದಿ ಅವರ ದೂರದೃಷ್ಟಿಯಿಂದ ಸಾಧ್ಯವಾಗಿದೆ ಎಂದು ಕಡಾಡಿ ಹೇಳಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವೆ ಶಶಿಕಲಾ ಜೊಲ್ಲೆ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದೆ ಮಂಗಲಾ ಅಂಗಡಿ, ಮೋರ್ಚಾ ಪದಾಧಿಕಾರಿಗಳು, ಅಪೇಕ್ಷಿತರು ಭಾಗವಹಿಸಿದ್ದರು.

ಗಮನಿಸಬಹುದಾದ ಸುದ್ದಿ

ಬೆಳಗಾವಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್‌.ವೈ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ವಯಸ್ಸು 80 ಆಗ್ತಿದೆ. ಹೀಗಾಗಿ ಚುನಾವಣಾ ಸ್ಪರ್ಧೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದರು. ವಿವರ ಓದಿಗೆ ಇಲ್ಲಿ ಕ್ಲಿಕ್‌ ಮಾಡಿ

IPL_Entry_Point