ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ; ಪೋಷಕರಲ್ಲಿ ಹೆಚ್ಚಿನ ಆತಂಕ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ; ಪೋಷಕರಲ್ಲಿ ಹೆಚ್ಚಿನ ಆತಂಕ

ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ; ಪೋಷಕರಲ್ಲಿ ಹೆಚ್ಚಿನ ಆತಂಕ

ಸಿಲಿಕಾನ್ ಸಿಟಿ ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೋಷಕರು ಆತಂಕಗೊಂಡಿದ್ದಾರೆ.

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಸುದ್ದಿ ವರದಿಯಾಗಿದೆ
ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಸುದ್ದಿ ವರದಿಯಾಗಿದೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸುಮಾರು 15 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ವರದಿಯಾಗಿದೆ. ಈ ಬೆಳವಣಿಗೆಯಿಂದ ಪೋಷಕರಲ್ಲಿ ಆಂತಕ ಮೂಡಿಸಿದ್ದು, ಶಾಲೆಗಳತ್ತ ದೌಡಾಯಿಸಿದ್ದಾರೆ.

15 ಶಾಲೆಗಳ ಆವರಣದಲ್ಲಿ ಬಾಂಬ್ ಇಡಲಾಗಿದೆ. ಅದು ಯಾವಾಗ ಬೇಕಾದರೂ ಸ್ಫೋಟಗೊಳ್ಳಬಹುದು ಎಂದು ಶಾಲೆಗಳ ಆಡಳಿತ ಸಿಬ್ಬಂದಿಗೆ ವರ್ಚವಲ್ ಪ್ರೈವೇಟ್ ನೆಟ್‌ವರ್ಕ್‌ ಮೂಲಕ ಮೇಲೆ ಬಂದಿರುವ ವರದಿ ಇದೆ.

ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಕಿಡಿಗೇಡಿಗಳ ಟಾರ್ಗೆಟ್ ಆಗಿದೆ. ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಕಳುಹಿಸಲಾಗುತ್ತಿದೆ.

ಬೆದರಿಕೆ ಬಂದಿರುವ ಎಲ್ಲಾ ಶಾಲೆಗಳಿಗೆ ಬಾಂಬ್ ಸ್ಕ್ವಾಡ್ ಆಗಮಿಸಿದ್ದು, ತಪಾಸಣೆ ನಡೆಸಲಾಗುತ್ತಿದೆ. ಪ್ರತಿಯೊಂದು ಕಡೆಯೂ ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿದು ಶಾಲೆಗಳ ಬಳಿಗೆ ಬಂದಿರುವ ಪೋಷಕರು ಶಾಲಾ ಆಡಳಿತ ಮಂಡಳಿಗಳ ಅನುಮತಿಯೊಂದಿಗೆ ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಸದ್ಯ ನಗರದಾದ್ಯಂತ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.

ಘಟನೆ ಸಂಬಂಧ ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ, ಕೆಲವು ಕಿಡಿಗೇಡಿ ತಂಡಗಳಿಂದ ಬೆದರಿಕೆ ಶಾಲೆಗಳಿಗೆ ಮೇಲ್ ಬಂದಿದೆ. ಶಾಲೆಯ ಆವರಣವನ್ನು ತಪಾಸಣೆ ಮಾಡಲಾಗುತ್ತಿದೆ. ಈವರೆಗೆ ಯಾವುದೇ ಅನುಮಾನಸ್ಪಾದ ವಸ್ತುಗಳು ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಂಬ್ ಬೆದರಿಕೆಯ ಇ-ಮೇಲ್‌ನಲ್ಲಿ ಏನಿದೆ?

ಅಲ್ಲಾಹನ ನೈಜ ಧರ್ಮ ಸ್ವೀಕರಿಸಬೇಕೆಂದು ಬೆದರಿಕೆ ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ಇಸ್ಲಾಂಗೆ ಮತಾಂತರಗೊಳ್ಳಿ ಇಲ್ಲ ಭಾರವಾದ ಖಡ್ಗಕ್ಕೆ ಸಿಲುಕಿ ಸಾಯಿರಿ. ನಾವು ನಿಮ್ಮ ಮೇಲೆ ದಾಳಿಕೋರರನ್ನು ಕಳುಹಿಸಿದ್ದೇವೆ ಎಂದು ವರ್ಚುಲ್ ಪ್ರೈವೇಟ್ ನೆಟ್‌ವರ್ಕ್ ಮೂಲಕ ಬಂದಿರುವ ಬೆದರಿಕೆ ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.

Whats_app_banner