Breaking News: ಮೈಸೂರು ಮುಡಾ ನಿವೇಶನ ಹಗರಣ, ಪ್ರಾಸಿಕ್ಯೂಷನ್ ರದ್ದಿಗೆ ಸಿಎಂ ಕಾನೂನು ಸಮರ ಶುರು, ಕೇವಿಯಟ್‌ಗೆ ಮುಂದಾದ ದೂರುದಾರ
Mysore Muda Scam ಮೈಸೂರು ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ರದ್ದಿಗೆ ಕೋರಿ ಸಿಎಂ ಸಿದ್ದರಾಮಯ್ಯ( CM Siddaramaiah) ಹೈಕೋರ್ಟ್ ಮೊರೆ ಹೋಗಿದ್ದಾರೆ.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಜಮೀನಿಗೆ ಪರ್ಯಾಯವಾಗಿ ಹದಿನಾಲ್ಕು ನಿವೇಶನ ಪಡೆದ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ತಮ್ಮ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನ ರದ್ದುಗೊಳಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪರ ವಕೀಲ ಶತಾಭಿಷ್ ಶಿವಣ್ಣ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಹಿರಿಯ ನ್ಯಾಯವಾದಿ ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ವಾದ ಮಂಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತುರ್ತು ವಿಚಾರಣೆ ಕೈಗೆತ್ತಿಕೊಳ್ಳಲು ಹೈಕೋರ್ಟ್ ಗೆ ಮನವಿ ಮಾಡಿದರು ನ್ಯಾಯವಾದಿ ಪ್ರೊ. ರವಿವರ್ಮ ಕುಮಾರ್. ನ್ಯಾ.ಹೇಮಂತ್ ಚಂದನ್ ಗೌಡರ್ ಅವರ ಮುಂದೆ ಸಿಎಂ ಪರ ವಕೀಲರು ಮೆಮೋ ಸಲ್ಲಿಸಿದರು. ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಿಗದಿ ಮಾಡಿ ನ್ಯಾಯಮೂರ್ತಿಗಳು ಸೂಚಿಸಿದರು.ಇದರಿಂದ ಕಾನೂನು ಹೋರಾಟ ಚುರುಕುಗೊಂಡಂತೆ ಆಗಿದೆ.
ಈ ನಡುವೆ ಇದೇ ಪ್ರಕರಣದಲ್ಲಿ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ತಡೆಗೆ ಅನುಮತಿ ನೀಡಬಾರದು ಎಂದು ಮುಡಾ ಹಗರಣದಲ್ಲಿ ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣಾಸುಪ್ರೀಂಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಲು ಮುಂದಾಗಿದ್ದಾರೆ. ಇಂದು ಸಂಜೆ ಒಳಗೆ ದೂರು ದಾಖಲಾಗಬಹುದು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 17 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರ ನಿರ್ಧಾರದ ವಿರುದ್ದ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿ ಬೀದಿಗೆ ಇಳಿದಿದೆ. ಇನ್ನೊಂದು ಕಡೆ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿಪಾರ್ವತಿ ಅವರ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ವಿಚಾರದಲ್ಲಿ ಅಕ್ರಮಗಳು ನಡೆದಿದ್ದು. ಸಿಎಂ ಪ್ರಭಾವ ಬಳಸಿ ಅಕ್ರಮವಾಗಿ ಬದಲಿ ನಿವೇಶನ ಪಡೆದುಕೊಂಡಿದ್ದಾರೆ. ಅವರ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರಾಸಿಕೂಷನ್‌ಗೆ ಅನುಮತಿ ನೀಡುವಂತೆ ಕೋರಲಾಗಿತ್ತು.