Bangalore Rose Onion: ಬೆಂಗಳೂರಿನ ಗುಲಾಬಿ ಈರುಳ್ಳಿ ರಫ್ತಿಗೆ ಸುಂಕ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ-business news central govt exempts bangalore rose onion from export duty onion export bengaluru onion mgb ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Bangalore Rose Onion: ಬೆಂಗಳೂರಿನ ಗುಲಾಬಿ ಈರುಳ್ಳಿ ರಫ್ತಿಗೆ ಸುಂಕ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ

Bangalore Rose Onion: ಬೆಂಗಳೂರಿನ ಗುಲಾಬಿ ಈರುಳ್ಳಿ ರಫ್ತಿಗೆ ಸುಂಕ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ

Bangalore Rose Onion: ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರವು ಈರುಳ್ಳಿ ರಫ್ತು ಮೇಲೆ ಶೇ.40 ರಷ್ಟು ಸುಂಕ ವಿಧಿಸಿತ್ತು. ಇದೀಗ ಬೆಂಗಳೂರಿನ ಗುಲಾಬಿ ಈರುಳ್ಳಿ ರಫ್ತಿಗೆ ವಿಧಿಸಿದ್ದ ಸುಂಕದಿಂದ ವಿನಾಯಿತಿ ನೀಡಿದೆ.

ಬೆಂಗಳೂರಿನ ಗುಲಾಬಿ ಈರುಳ್ಳಿ
ಬೆಂಗಳೂರಿನ ಗುಲಾಬಿ ಈರುಳ್ಳಿ

ಬೆಂಗಳೂರು: ಬೆಂಗಳೂರಿನ ಗುಲಾಬಿ ಈರುಳ್ಳಿ ರಫ್ತಿಗೆ ವಿಧಿಸಿದ್ದ ಸುಂಕದಿಂದ ಕೇಂದ್ರ ಸರ್ಕಾರ ವಿನಾಯಿತಿ ನೀಡಿದೆ. ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರವು ಈರುಳ್ಳಿ ರಫ್ತು ಮೇಲೆ ಶೇ.40 ರಷ್ಟು ಸುಂಕ ವಿಧಿಸಿತ್ತು.

ರಫ್ತು ಮಾಡಲು ಉದ್ದೇಶಿಸಿರುವ ಸರಕುಗಳಿಗೆ ಅನುಮತಿ ನೀಡಲಾಗುತ್ತದೆ, ಇದಕ್ಕಾಗಿ ರಫ್ತುದಾರರು ಕರ್ನಾಟಕ ಸರ್ಕಾರದ ತೋಟಗಾರಿಕಾ ಇಲಾಖೆಯ ಆಯುಕ್ತರಿಂದ ಪ್ರಮಾಣಪತ್ರವನ್ನು ಪಡೆಯಬೇಕಿರುತ್ತದೆ. ಈ ರಫ್ತುದಾರರು ವಿನಾಯಿತಿ ಪಡೆಯಬಹುದಾಗಿದೆ ಎಂದು ಹಣಕಾಸು ಸಚಿವಾಲಯದ ಅಧಿಕೃತ ಅಧಿಸೂಚನೆ ತಿಳಿಸಿದೆ. ಅಧಿಸೂಚನೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ.

ಬೆಂಗಳೂರು ಗುಲಾಬಿ ಈರುಳ್ಳಿ ಕರ್ನಾಟಕದ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆಯುವ ಒಂದು ಬಗೆಯ ಈರುಳ್ಳಿ. ಇದು 2015 ರಲ್ಲಿ ಭೌಗೋಳಿಕ ಸೂಚಕ ಟ್ಯಾಗ್ ಅನ್ನು ಪಡೆದುಕೊಂಡಿತ್ತು. ಈ ವರ್ಷ ಆಗಸ್ಟ್‌ನಲ್ಲಿ, ಬೆಲೆ ಏರಿಕೆಯನ್ನು ಪರಿಶೀಲಿಸಲು ಮತ್ತು ಡಿಸೆಂಬರ್ 31 ರವರೆಗೆ ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಯನ್ನು ಸುಧಾರಿಸಲು ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರವು 40 ಪ್ರತಿಶತ ಸುಂಕವನ್ನು ವಿಧಿಸಿತ್ತು.

ಅಲ್ಲೇ ಕೇಂದ್ರ ಸರ್ಕಾರವು ತನ್ನ ಬಫರ್ ಸ್ಟಾಕ್‌ನಿಂದ ಪ್ರಧಾನ ತರಕಾರಿಯನ್ನು ಬಿಡುಗಡೆ ಮಾಡಲು ಪ್ರಾರಂಭಿಸಿತ್ತು. 2023-24ರಲ್ಲಿ 3 ಲಕ್ಷ ಟನ್ ಈರುಳ್ಳಿಯನ್ನು ಬಫರ್ ಸ್ಟಾಕ್ ಆಗಿ ಬಳಸಲು ಕೇಂದ್ರ ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. 2022-23 ರಲ್ಲಿ, ಸರ್ಕಾರವು 2.51 ಲಕ್ಷ ಟನ್ ಈರುಳ್ಳಿಯನ್ನು ಬಫರ್ ಸ್ಟಾಕ್ ಆಗಿ ಬಳಸಿತ್ತು.

ಪೂರೈಕೆ ಕಡಿಮೆ ಇರುವ ಸೀಸನ್​​ನಲ್ಲಿ ದರಗಳು ಗಣನೀಯವಾಗಿ ಹೆಚ್ಚಾದರೆ, ಯಾವುದೇ ಅಗತ್ಯತೆಗಳನ್ನು ಪೂರೈಸಲು ಮತ್ತು ಬೆಲೆ ಸ್ಥಿರೀಕರಣಕ್ಕಾಗಿ ಬಫರ್ ಸ್ಟಾಕ್ ವ್ಯವಸ್ಥೆ ಬಳಸಲಾಗುತ್ತದೆ. ಏಪ್ರಿಲ್-ಜೂನ್ ಅವಧಿಯಲ್ಲಿ ಕೊಯ್ಲು ಮಾಡಿದ ರಬಿ ಈರುಳ್ಳಿ ಭಾರತದ ಈರುಳ್ಳಿ ಉತ್ಪಾದನೆಯ 65 ಪ್ರತಿಶತವನ್ನು ಹೊಂದಿದೆ ಮತ್ತು ಅಕ್ಟೋಬರ್-ನವೆಂಬರ್‌ನಲ್ಲಿ ಖಾರಿಫ್ ಬೆಳೆ ಕೊಯ್ಲು ಮಾಡುವವರೆಗೆ ಗ್ರಾಹಕರ ಬೇಡಿಕೆಯನ್ನು ಪೂರೈಸುತ್ತದೆ.