ಕನ್ನಡ ಸುದ್ದಿ  /  Karnataka  /  Business News Karnataka Budget 2023 To Be Presented On July 7 Says Cm Siddaramaiah In Davangere News In Kannada Uks

Karnataka Budget 2023: ಜುಲೈ 7ಕ್ಕೆ ಕರ್ನಾಟಕ ಬಜೆಟ್; ಸಿಎಂ ಸಿದ್ದರಾಮಯ್ಯ

Karnataka Budget 2023 Date: ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಜುಲೈ 7ರಂದು ಈ ವರ್ಷಕ್ಕೆ ಸಂಬಂಧಿಸಿದ ಮಧ್ಯಂತರ ಪೂರ್ಣಕಾಲಿಕ ಬಜೆಟ್‌ ಅನ್ನು ಮಂಡಿಸಲಿದೆ. ಜು.3ರಂದು ವಿಧಾನಮಂಡಲದ ಬಜೆಟ್‌ ಅಧಿವೇಶನ ಶುರುವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿವರಕ್ಕೆ ಮುಂದೆ ಓದಿ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ (PTI)

ದಾವಣಗೆರೆ: ಮುಂದಿನ ತಿಂಗಳು 3 (July̳ ) ರಿಂದ ಕರ್ನಾಟಕ ರಾಜ್ಯ ವಿಧಾನಮಂಡಲಬಜೆಟ್ ಅಧಿವೇಶನ (Karnataka Budget Session 2023) ಆರಂಭವಾಗಲಿದ್ದು, ಜು.7 ಕ್ಕೆ ರಾಜ್ಯ ಬಜೆಟ್ (Karnataka Budget 2023) ಮಂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಚಟುವಟಿಕೆಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ, ಕೀಟ ನಾಶಕಗಳನ್ನು ಪೂರೈಸುವಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯಿತಿ ಸಿಇಓಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಪ್ರವಾಹ ಬರದಿರಲಿ ಎಂದೇ ಹಾರೈಸುತ್ತೇವೆ. ಆದರೆ, ಹಾಗೊಂದು ವೇಳೆ ಪ್ರವಾಹ ಬಂದರೆ ಎದುರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಆಯಾ ಜಿಲ್ಲೆಯ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಿದ್ದರಾಮಯ್ಯ, 1964 ರಲ್ಲಿಯೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಆ ಪ್ರಕಾರ 12 ವರ್ಷ ತುಂಬಿದ ರಾಸುಗಳು ಮತ್ತು ವ್ಯವಸಾಯಕ್ಕೆ ಅನುಕೂಲಕ್ಕೆ ಬಾರದ ರಾಸು ಮುಕ್ತಗೊಳಿಸಲಾಗಿತ್ತು. ಬಿಜೆಪಿ ಸರ್ಕಾರ ಕಾಯ್ದೆ ತಿದ್ದುಪಡಿ ಮಾಡಿ ಜಾರಿಗೆ ತಂದಿತ್ತು. ಈಗ ಕ್ಯಾಬಿನೆಟ್ ನಲ್ಲಿ ನಾವು ಚರ್ಚೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿ ವಿದ್ಯುತ್ ದರ ಪರಿಷ್ಕರಣೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಸ್ತಾವ ಸಲ್ಲಿಸಿತ್ತು. ಹಾಗಾಗಿ, ನಾವು ಈಗ ಅನುಮೋದನೆ ಕೊಟ್ಟಿದ್ದೇವಷ್ಟೇ ಎಂದು ವಿದ್ಯುತ್ ದರ ಹೆಚ್ಚಳ ಮಾಡಿದ ವಿಚಾರವಾಗಿ ಪ್ರತಿಕ್ರಿಯೆ‌ ನೀಡಿದರು.

ಗಮನಿಸಬಹುದಾದ ಸುದ್ದಿಗಳು

ಕರ್ನಾಟಕದಲ್ಲಿ ಎಂದಿನಿಂದ ಮುಂಗಾರು ಮಳೆ ಆರಂಭ? ಮಳೆಯ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಹವಾಮಾನ ಇಲಾಖೆ

ಮುಂಗಾರು ಮಳೆ ಪ್ರವೇಶ ( Monsoon)ಕ್ಕೆ ಕುರಿತಂತೆ ಹವಾಮಾನ ಇಲಾಖೆಯು ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಕೇರಳಕ್ಕೆ ಈ ಬಾರಿ ಮುಂಗಾರು ಮಳೆ ಪ್ರವೇಶ ಮೂರರಿಂದ ನಾಲ್ಕು ದಿನಗಳ ಕಾಲ ವಿಳಂಬವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಹೀಗಾಗಿ ಕರ್ನಾಟಕಕ್ಕೆ ಮುಂಗಾರು ಮಳೆ ವಿಳಂಬವಾಗಲಿದೆ. ಜೂನ್‌ 4ರಂದು ಮುಂಗಾರು ಮಳೆಯು ಕೇರಳ ಪ್ರವೇಶಿಸಲಿದೆ ಎಂದು ಈ ಹಿಂದೆ ಮುನ್ಸೂಚನೆ ನೀಡಲಾಗಿತ್ತು. ಇದೀಗ ಐಎಂಡಿ ನೀಡಿರುವ ಅಪ್‌ಡೇಟ್‌ ಪ್ರಕಾರ ಜೂನ್‌ 7ರಂದು ಕೇರಳಕ್ಕೆ ಮುಂಗಾರು ಮಳೆ ಪ್ರವೇಶವಾಗಲಿದೆ. ವಿವರಕ್ಕೆ ಓದಿ - ಕರ್ನಾಟಕದಲ್ಲಿ ಎಂದಿನಿಂದ ಮುಂಗಾರು ಮಳೆ ಆರಂಭ? ಮಳೆಯ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಹವಾಮಾನ ಇಲಾಖೆ

ವನ್ಯಜೀವಿ ಮಾನವ ಸಂಘರ್ಷ ತಡೆಗಾಗಿ ರಾಮನಗರ, ಬನ್ನೇರುಘಟ್ಟದಲ್ಲಿ ಆನೆ ಕಾರಿಡಾರ್

ಆನೆ ಮತ್ತು ಮಾನವರ ನಡುವಿನ ಸಂಘರ್ಷವನ್ನು (Human Wildlife Conflic) ನಿಯಂತ್ರಿಸಲು ನಾಡಿಗೆ ಬರುವ ಆನೆಗಳನ್ನು ತ್ವರಿತವಾಗಿ ಕಾಡಿಗೆ ಮರಳಿಸಲು ಬನ್ನೇರುಘಟ್ಟ ಮತ್ತು ರಾಮನಗರದಲ್ಜಿ ಎರಡು ಆನೆ ಕಾರಿಡಾರ್ ನಿರ್ಮಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ (Eshwara Khandre) ಹೇಳಿದ್ದಾರೆ. ವಿವರ ಓದಿಗೆ - ವನ್ಯಜೀವಿ ಮಾನವ ಸಂಘರ್ಷ ತಡೆಗಾಗಿ ರಾಮನಗರ, ಬನ್ನೇರುಘಟ್ಟದಲ್ಲಿ ಆನೆ ಕಾರಿಡಾರ್

ಕಲ್ಯಾಣ ಕರ್ನಾಟಕದಲ್ಲಿ ಅನ್ನದಾತನ ಮೊದಲ ಹಬ್ಬ ಕಾರ ಹುಣ್ಣಿಮೆ ಸಂಭ್ರಮ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾರ ಹುಣ್ಣಿಮೆ ತುಂಬಾ ವಿಶೇಷ. ಭಾನುವಾರ (ಮೇ 4) ಕಾರ ಹುಣ್ಣಿಮೆ ನಿಮಿತ್ತ ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಅದರಲ್ಲೂ ಗ್ರಾಮೀಣ ಭಾಗದ ರೈತರು, ತಮ್ಮ ಮಕ್ಕಳು ಹಾಗೂ ಕುಟುಂಬಸ್ಥರೊಂದಿಗೆ ಕಾರ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು. ವಿವರಕ್ಕೆ ಓದಿ - ಕಲ್ಯಾಣ ಕರ್ನಾಟಕದಲ್ಲಿ ಅನ್ನದಾತನ ಮೊದಲ ಹಬ್ಬ ಕಾರ ಹುಣ್ಣಿಮೆ ಸಂಭ್ರಮ

IPL_Entry_Point

ವಿಭಾಗ