ಮೈಸೂರಿನಲ್ಲಿ ಕಾರು ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರಿನಲ್ಲಿ ಕಾರು ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಮೈಸೂರಿನಲ್ಲಿ ಕಾರು ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಳಲೆ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದರೆ, ಮತ್ತೋರ್ವನಿಗೆ ಗಂಭೀರ ಗಾಯಗಳುಂಟಾಗಿವೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನಲ್ಲಿ ಕಾರು ಬೈಕ್ ಮುಖಾಮುಖಿ ಡಿಕ್ಕಿ
ಮೈಸೂರಿನಲ್ಲಿ ಕಾರು ಬೈಕ್ ಮುಖಾಮುಖಿ ಡಿಕ್ಕಿ

ಮೈಸೂರು: ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರ ಗಾಯಗೊಂಡಿರುವ ಪ್ರಕರಣ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಳಲೆ ಗೇಟ್ ಬಳಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಚಿನ್ನಸ್ವಾಮಪ್ಪ (55) ಮೃತಪಟ್ಟಿದ್ದು, ಹೆಮ್ಮರಗಾಲ ಗ್ರಾಮದ ರಾಮೇಗೌಡ (55) ಎಂಬವರಿಗೆ ಗಂಭೀರ ಗಾಯಗಳಾಗಿವೆ.

ನಂಜನಗೂಡು ಮತ್ತು ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಳಲೆ ಗ್ರಾಮದ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಚಿನ್ನಸ್ವಾಮಪ್ಪ ಮತ್ತು ರಾಮೇಗೌಡ ದ್ವಿಚಕ್ರ ವಾಹನದಲ್ಲಿ ಕಳಲೆ ಗ್ರಾಮಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಬೈಕ್ ಸವಾರ ಚಿನ್ನಸ್ವಾಮಪ್ಪ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ. ರಾಮೇಗೌಡಗೆ ಗಂಭೀರ ಗಾಯವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಎಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ರಘು, ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in