ಕನ್ನಡ ಸುದ್ದಿ / ಕರ್ನಾಟಕ /
ಮೈಸೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ಮೃತ್ಯು
ಮೈಸೂರು ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಲಿಗ್ರಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಭೀಕರ ಅಪಘಾತ
ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರು ಮರಕ್ಕೆ ಡಿಕ್ಕಿಯೊಡೆದ ಪರಿಣಾಮ ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಖಲೀಂ ರೆಹಮಾನ್ (65) ಮತ್ತು ಶೇಖ್ ಅಬ್ದುಲ್ ಖಾದರ್ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಹಾಸನದ ಲಕ್ಷ್ಮಿಪುರಂ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಮತ್ತೋರ್ವ ಪ್ರಯಾಣಿಕ ಷೇಕ್ ಮುನೀರ್ ಅಹಮದ್‌ಗೆ ಗಾಯಗಳು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಲಾಪುರ ಗ್ರಾಮದ ಬಳಿ ರಸ್ತೆ ಬದಿ ಪೈಪ್ ಹಾಕಲು ತೆಗೆಯಲಾಗಿದ್ದ ಗುಂಡಿಯನ್ನು ಮುಚ್ಚಿರಲಿಲ್ಲ. ಹೀಗಾಗಿ ಹಾಸನದಿಂದ ಚುಂಚನಕಟ್ಟೆ ಕಡೆಗೆ ಹೋಗುತ್ತಿದ್ದ ಕಾರು ಅದೇ ಸ್ಥಳದಲ್ಲಿ ನಿಯಂತ್ರಣ ತಪ್ಪಿದೆ.
ಘಟನಾ ಸ್ಥಳಕ್ಕೆ ಸಾಲಿಗ್ರಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.