Cauvery Aarati: ಸ್ಯಾಂಕಿ ಕೆರೆಯಲ್ಲಿ ಇಂದು ಸಂಜೆ ಕಾವೇರಿ ಆರತಿ, ಅಧಿಕೃತ ಗಿನ್ನೆಸ್ ದಾಖಲೆಗೆ ಸಿದ್ದತೆ, ಸಮಯ ಮತ್ತು ಇತರೆ ವಿವರ
ಕನ್ನಡ ಸುದ್ದಿ  /  ಕರ್ನಾಟಕ  /  Cauvery Aarati: ಸ್ಯಾಂಕಿ ಕೆರೆಯಲ್ಲಿ ಇಂದು ಸಂಜೆ ಕಾವೇರಿ ಆರತಿ, ಅಧಿಕೃತ ಗಿನ್ನೆಸ್ ದಾಖಲೆಗೆ ಸಿದ್ದತೆ, ಸಮಯ ಮತ್ತು ಇತರೆ ವಿವರ

Cauvery Aarati: ಸ್ಯಾಂಕಿ ಕೆರೆಯಲ್ಲಿ ಇಂದು ಸಂಜೆ ಕಾವೇರಿ ಆರತಿ, ಅಧಿಕೃತ ಗಿನ್ನೆಸ್ ದಾಖಲೆಗೆ ಸಿದ್ದತೆ, ಸಮಯ ಮತ್ತು ಇತರೆ ವಿವರ

Cauvery Aarati at Sankey Tank: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಇಂದು ಸಂಜೆ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಹೀಗಾಗಿ, ಎರಡು ದಿನ ವಾಕಿಂಗ್, ಜಾಗಿಂಗ್ ಗೆ ಅವಕಾಶ ನಿರಾಕರಿಸಲಾಗಿದೆ. ಕಾವೇರಿ ಆರತಿಗೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ ನೀಡಿದ್ದು, ಕಾರ್ಯಕ್ರಮಕ್ಕೆ ಅಡ್ಡಿ ನಿವಾರಣೆಯಾಗಿದೆ. (ವರದಿ- ಎಚ್.‌ ಮಾರುತಿ, ಬೆಂಗಳೂರು)

ಸ್ಯಾಂಕಿ ಕೆರೆಯಲ್ಲಿ ಇಂದು ಸಂಜೆ ಕಾವೇರಿ ಆರತಿ, ಅಧಿಕೃತ ಗಿನ್ನೆಸ್ ದಾಖಲೆಗೆ ಸಿದ್ದತೆ, ಸಮಯ ಮತ್ತು ಇತರೆ ವಿವರ
ಸ್ಯಾಂಕಿ ಕೆರೆಯಲ್ಲಿ ಇಂದು ಸಂಜೆ ಕಾವೇರಿ ಆರತಿ, ಅಧಿಕೃತ ಗಿನ್ನೆಸ್ ದಾಖಲೆಗೆ ಸಿದ್ದತೆ, ಸಮಯ ಮತ್ತು ಇತರೆ ವಿವರ

Cauvery Aarati at Sankey Tank: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಇಂದು (ಮಾರ್ಚ್ 21) ಸಂಜೆ ಕಾವೇರಿ ಆರತಿ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೆಸ್ ದಾಖಲೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸುವುದಕ್ಕೂ ಸಿದ್ಧತೆ ನಡೆದಿದೆ. ಈ ಕಾರ್ಯಕ್ರಮದ ಸಮಯ ಮತ್ತು ಇತರೆ ವಿವರ ಇಲ್ಲಿದೆ. ಕಾವೇರಿ ಆರತಿ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಸ್ಯಾಂಕಿ ಕೆರೆ ಸಮೀಪ ವಾಯುವಿಹಾರ ನಿಷೇಧಿಸಲಾಗಿದೆ. ಶುಕ್ರವಾರ ಮುಂಜಾನೆಯಿಂದ ಶನಿವಾರ ಮುಂಜಾನೆವರೆಗೂ ಪ್ರವೇಶ ನಿಷೇಧಿಸಲಾಗಿದೆ. ವಾಕಿಂಗ್, ಜಾಗಿಂಗ್ ಗೆ ಅವಕಾಶ ಇರುವುದಿಲ್ಲ. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜಿಕರಿಗೆ ಅವಕಾಶ ನೀಡಲಾಗಿದೆ. ಕೆರೆಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ ನಿಯಮಗಳನ್ನು ಉಲ್ಲಂಘಿಸದಂತೆ ಸ್ಯಾಂಕಿ ಟ್ಯಾಂಕ್‌ನ ಬಫರ್ ಝೋನ್ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಹೈಕೋರ್ಟ್ ಅನುಮತಿ ನೀಡಿದೆ.

ಸ್ಯಾಂಕಿ ಕೆರೆಯಲ್ಲಿ ಇಂದು ಸಂಜೆ ಕಾವೇರಿ ಆರತಿ; ಕಾರ್ಯಕ್ರಮ ವಿವರ

ಸಿದ್ದತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರತಿ 7 ಗಂಟೆಗೆ ಆರಂಭವಾಗಲಿದೆ. ನೀವೆಲ್ಲರೂ ಆಗಮಿಸಿ ಆರತಿ ನೋಡಿ ಎಂದು ಬೆಂಗಳೂರಿನ ನಾಗರಿಕರಿಗೆ ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಎಲ್ಲರೂ ಪ್ರಾರ್ಥಿಸೋಣ. ನಮ್ಮ ಪ್ರಾರ್ಥನೆ ಫಲ ಕೊಡುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದು ಹೇಳಿದ್ದಾರೆ.

ಸಂಜೆ 5.30 ಗಂಟೆಗೆ ಕಲಾವಿದರಾದ ಅನನ್ಯ ಭಟ್ ಮತ್ತು ರಘು ದೀಕ್ಷಿತ್ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಇದೇ ಮೊದಲ ಬಾರಿ ಫ್ಲೋಟಿಂಗ್ ಸ್ಟೇಜ್ ವ್ಯವಸ್ಥೆ ಮಾಡಲಾಗಿದೆ. ಒಳ್ಳೆಯ ಲೈಟಿಂಗ್ಸ್ ವ್ಯವಸ್ಥೆಯೂ ಇರಲಿದೆ. ಕಾವೇರಿ ತಾಯಿಗೆ ಪೂಜೆ ಮಾಡುವ ಭಾಗ್ಯ ಸಿಕ್ಕಿದ್ದು, ಎರಡು ತಂಡಗಳಿಂದ ಕಾವೇರಿ ಆರತಿ 45 ನಿಮಿಷ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಈಂತಹ ಶುಭ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕು ಎಂದು ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಕೋರ್ಟ್ ಅವರ ಮನವಿಯನ್ನು ವಜಾ ಮಾಡಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಪಾಸ್ ಅವಶ್ಯಕತೆ ಇರುವುದಿಲ್ಲ. ಎಲ್ಲರಿಗೂ ಮುಕ್ತ ಪ್ರವೇಶ ನೀಡಲಾಗಿದೆ. ಕೂರಲು ಕುರ್ಚಿ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು.

ಕೆಆರ್‌ಎಸ್‌ನಲ್ಲಿ ಮಾರ್ಚ್ 22ಕ್ಕೆ ಕಾವೇರಿ ಆರತಿ

ಮಾರ್ಚ್ 22 ರಂದು ವಿಶ್ವ ಜಲದಿನ ಆಚರಿಸಲಾಗುತ್ತಿದೆ. ಈ ಬಾರಿ ವಿಶ್ವಜಲದಿನವನ್ನು ವಿಶೇ಼ವಾಗಿ ಆಚರಿಸಲಾಗುತ್ತಿದೆ. ಜಲಮಂಡಳಿ, ನೀರಾವರಿ ಇಲಾಖೆ ವತಿಯಿಂದ ಪ್ರತಿಜ್ಞೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ನಾನು ಜಲಮಂಡಳಿ ಅಧಿಕಾರಿಗಳ ಜೊತೆ ಭಾಗಮಂಡಲಕ್ಕೆ ಹೋಗಿ ಕಾವೇರಿ ನೀರನ್ನು ತರುತ್ತೇನೆ. ಮುಂದಿನ ದಿನಗಳಲ್ಲಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಮಾಡಲು ತೀರ್ಮಾನಿಸಲಾಗಿದೆ ಎಂದು ಶಿವಕುಮಾರ್‌ ಹೇಳಿದ್ದಾರೆ.

ಕಾವೇರಿ ಆರತಿ: ಹೈಕೋರ್ಟ್‌ ಷರತ್ತುಬದ್ಧ ಅನುಮತಿ

ಬೆಂಗಳೂರು: ಸ್ಯಾಂಕಿ ಕೆರೆಯ ಬಫರ್‌ ಝೋನ್‌ ನಲ್ಲಿ ಇದೇ 21 ಶುಕ್ರವಾರ ಹಮ್ಮಿಕೊಳ್ಳಲಾಗಿರುವ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಹೈಕೋರ್ಟ್‌, ಬೆಂಗಳೂರು ಜಲಮಂಡಳಿಗೆ ಷರತ್ತುಬದ್ಧ ಅನುಮತಿ ನೀಡಿದೆ.‘ಕಾವೇರಿ ಆರತಿ’ ನಡೆಸಬಾರದು ಎಂದು ಹೈಕೋರ್ಟ್‌ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಯ ನಿಯಮಗಳು ಉಲ್ಲಂಘನೆಯಾಗದಂತೆ ಕಾವೇರಿ ಆರತಿ ಕಾರ್ಯಕ್ರಮ ನಡೆಸಬೇಕು. ಕಾನೂನು ಮತ್ತು ಸಾರ್ವಜನಿಕ ಸುವ್ಯವಸ್ಥೆ ಕಾಪಾಡಬೇಕು. ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ರಾಜ್ಯ ಸರ್ಕಾರ ಮತ್ತು ಜಲಮಂಡಳಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner