ಕಾವೇರಿ ಕಿಚ್ಚು: ಕರ್ನಾಟಕದಲ್ಲಿ ಸ್ಟಾಲಿನ್ ತಿಥಿ, ತಮಿಳುನಾಡಲ್ಲಿ ಸಿದ್ದರಾಮಯ್ಯರ ಅಣಕು ತಿಥಿ VIDEOS
Cauvery Water Issue: ಒಂದೆಡೆ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುವುದನ್ನು ವಿರೋಧಿಸಿ ಬೆಂಗಳೂರನ್ನು ಇಂದು ಬಂದ್ ಮಾಡಲಾಗಿದ್ದು, ಮತ್ತೊಂದೆಡೆ ರಾಮನಗರದಲ್ಲಿ ಪ್ರತಿಭಟನೆಗಳು ನಡೆದಿವೆ. ರಾಮನಗರದಲ್ಲಿ ಕನ್ನಡ ಪರ ಹೋರಾಟಗಾರರು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಅಣಕು ತಿಥಿ ನಡೆಸಿದ್ದಾರೆ.

ರಾಮನಗರ: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಅತ್ತ ತಮಿಳುನಾಡಿನವರೂ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ಸಿಎಂ ಅಣಕು ತಿಥಿ ಮಾಡಿ ತಮಿಳುನಾಡಿದಲ್ಲಿ ಹಾಗೂ ತಮಿಳುನಾಡು ಸಿಎಂ ಅಣಕು ತಿಥಿ ಮಾಡಿ ಕರ್ನಾಟಕದಲ್ಲಿ ಪ್ರತಿಭಟನೆಗಳು ನಡೆದಿವೆ.
ಟ್ರೆಂಡಿಂಗ್ ಸುದ್ದಿ
ಒಂದೆಡೆ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುವುದನ್ನು ವಿರೋಧಿಸಿ ಬೆಂಗಳೂರನ್ನು ಇಂದು ಬಂದ್ ಮಾಡಲಾಗಿದ್ದು, ಮತ್ತೊಂದೆಡೆ ರಾಮನಗರದಲ್ಲಿ ಪ್ರತಿಭಟನೆಗಳು ನಡೆದಿವೆ. ರಾಮನಗರದಲ್ಲಿ ಕನ್ನಡ ಪರ ಹೋರಾಟಗಾರರು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಅಣಕು ತಿಥಿ ನಡೆಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಎಂ.ಕೆ.ಸ್ಟಾಲಿನ್ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ಫೋಟೋ ಮುಂದೆ ಸತ್ತವರ ತಿಥಿಗೆ ಮಾಡುವ ಕಾರ್ಯಗಳನ್ನು ಮಾಡಿ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಇನ್ನು ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳುತ್ತಿರುವ ಕರ್ನಾಟಕದ ವಿರುದ್ಧ ಕೂಡ ತಮಿಳುನಾಡಿನ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೈತರ ಗುಂಪೊಂದು ಸತ್ತ ಇಲಿಗಳನ್ನು ಬಾಯಿಯಲ್ಲಿ ಹಾಕಿಕೊಂಡು ಪ್ರತಿಭಟನೆ ನಡೆಸಿತು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ಅಣಕು ತಿಥಿ ಮಾಡಿದ್ದಾರೆ.
ಬರ ಪರಿಸ್ಥಿತಿಗೆ ತುತ್ತಾಗಿರುವ ಕರ್ನಾಟಕದಿಂದ ತಮಿಳುನಾಡಿಗೆ ಸೆಪ್ಟೆಂಬರ್ 26ರ ವರೆಗೆ ಪ್ರತಿದಿನ 5000 ಕ್ಯೂಸೆಕ್ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿತ್ತು. ಈ ಆದೇಶದ ವಿರುದ್ಧ ಕರ್ನಾಟಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತಾದರೂ ಸರ್ವೋಚ್ಛ ನ್ಯಾಯಾಲಯ ಕೂಡ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದಿತ್ತು.
ಇದನ್ನು ವಿರೋಧಿಸಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಂದ್, ಪ್ರತಿಭಟನೆಗಳನ್ನು ಮಾಡಲಾಗುತ್ತಿದೆ.ಇಂದು ( ಸೆಪ್ಟೆಂಬರ್ 26 ರಂದು) ಬೆಂಗಳೂರು ಬಂದ್ ಮಾಡಲಾಗಿದ್ದು, ಸೆ.29 ರಂದು ಇಡೀ ಕರ್ನಾಟಕ ಬಂದ್ ಆಗಲಿದೆ. ಆದರೆ ಬಂದ್ ನಡುವೆಯೇ ಕರ್ನಾಟಕಕ್ಕೆ ಮತ್ತೊಂದು ಆಘಾತವಾಗಿದೆ. ಮುಂದಿನ 18 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಆದೇಶ ನೀಡಿದೆ.