KCET 2025: ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ; ಇಲ್ಲಿದೆ ಪರೀಕ್ಷಾ ವೇಳಾಪಟ್ಟಿ ಹಾಗೂ ಇನ್ನಿತರ ಮಾಹಿತಿ
ಕನ್ನಡ ಸುದ್ದಿ  /  ಕರ್ನಾಟಕ  /  Kcet 2025: ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ; ಇಲ್ಲಿದೆ ಪರೀಕ್ಷಾ ವೇಳಾಪಟ್ಟಿ ಹಾಗೂ ಇನ್ನಿತರ ಮಾಹಿತಿ

KCET 2025: ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ; ಇಲ್ಲಿದೆ ಪರೀಕ್ಷಾ ವೇಳಾಪಟ್ಟಿ ಹಾಗೂ ಇನ್ನಿತರ ಮಾಹಿತಿ

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದೆ. ಇಂದು ಕನ್ನಡ ಪರೀಕ್ಷೆ ನಡೆಯುತ್ತಿದೆ. ಕ್ರಮವಾಗಿ ನಾಳೆ ಏಪ್ರಿಲ್ 16 ಹಾಗೂ 17ರಂದು ಸಹ ಪರೀಕ್ಷೆ ನಡೆಯಲಿದೆ. ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದಾರೆ.

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ
ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ (ಸಾಂದರ್ಭಿಕ ಚಿತ್ರ - Canva)

ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಯಾರೆಲ್ಲ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿದ್ದೀರೊ ಅವರೆಲ್ಲರೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಿ ಪರೀಕ್ಷೆ ಬರೆಯಬಹುದು. ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ಇಂದಿನಿಂದ ಹಾಜರಾಗುತ್ತಿದ್ದಾರೆ. ಏಪ್ರಿಲ್‌ 15ರಂದು ಕನ್ನಡ ಹಾಗೂ 16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ ಪರೀಕ್ಷೆ ನಡೆಯಲಿದೆ.

ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳು ತಮ್ಮ ಆಕಾಂಕ್ಷೆಯಂತೆ ಮುಂದಿನ ಶಿಕ್ಷಣ ಪಡೆದುಕೊಳ್ಳುವ ಸಲುವಾಗಿ ಸಿಇಟಿ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಸಂಖ್ಯೆಯನ್ನು ನೋಡಿದರೆ ಸಾಕಷ್ಟು ಜನರು ಉನ್ನತ ಶಿಕ್ಷಣದ ಬಗ್ಗೆ ಆಸಕ್ತಿ ಹೊಂದಿರುವುದು ತಿಳಿದು ಬರುತ್ತದೆ.

ಪರೀಕ್ಷಾ ವೇಳಾಪಟ್ಟಿ
ಏಪ್ರಿಲ್‌ 15ರಂದು ಕನ್ನಡ, ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯನ್ನು ಆಫ್‌ಲೈನ್ ಮೋಡ್‌ನಲ್ಲಿ, OMR ಹಾಳೆಗಳನ್ನು ಬಳಸಿ ನಡೆಸಲಾಗುತ್ತದೆ.ಪ್ರವೇಶ ಪತ್ರಗಳನ್ನು ಏಪ್ರಿಲ್ 7, 2025 ರಂದು ಬಿಡುಗಡೆ ಮಾಡಲಾಗಿದ್ದು, ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ತೆರಳುವಾಗ ಮರೆಯದೆ ಪ್ರವೇಶ ಪತ್ರಗಳನ್ನು ತೆಗೆದುಕೊಂಡು ಹೋಗಬೇಕು.

ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ಸಿಇಟಿ ಪರೀಕ್ಷೆ ಬರೆಯದೆ ಕೈಚೆಲ್ಲವುದು ಸರಿಯಲ್ಲ. ದ್ವಿತೀಯ ಪಿಯುಸಿಯ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವುದಕ್ಕೂ ಅವಕಾಶ ಇದ್ದು, ಅಲ್ಲಿ ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಬಹುದು. ಸಿಇಟಿ ಬರೆದಿದ್ದರೆ ಮಾತ್ರ ಪಿಯುಸಿಯ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೂ ಸಿಇಟಿ ರಾಂಕ್ (Rank) ಕೊಟ್ಟು, ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಮಾಡಬಹುದು. ಆದರೆ ಸಿಇಟಿಯೇ ಬರೆಯದಿದ್ದರೆ ರಾಂಕ್ ಗೆ ಪರಿಗಣಿಸಲು ಆ ಸಂದರ್ಭದಲ್ಲಿ ಸಾಧ್ಯ ಇರುವುದಿಲ್ಲ.

ಕಳೆದ ವರ್ಷ ಕೂಡ 3ನೇ ಪರೀಕ್ಷೆಯಲ್ಲಿ ಅರ್ಹತೆಯಾದ ಆನೇಕರಿಗೆ ರಾಂಕ್ ಕೊಟ್ಟು, ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಸಿಇಟಿ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬೇಡಿ. ಸಿಇಟಿ ಪರೀಕ್ಷೆ ಒಮ್ಮೆ ಮಾತ್ರ ನಡೆಸುವುದರಿಂದ ಅದನ್ನು ತಪ್ಪದೇ ಬರೆಯಬೇಕು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸಲಹೆ ನೀಡಿದ್ದಾರೆ.

Suma Gaonkar

eMail
Whats_app_banner