ಕನ್ನಡ ಸುದ್ದಿ  /  ಕರ್ನಾಟಕ  /  Chamarajanagar News: ಪ್ರತ್ಯೇಕ ಪ್ರಕರಣಗಳು; ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸಾವು, ಜಿಂಕೆ ಕೊಂದು ಮಾಂಸ ಕತ್ತರಿಸುತ್ತಿದ್ದ ಇಬ್ಬರ ಬಂಧನ

Chamarajanagar News: ಪ್ರತ್ಯೇಕ ಪ್ರಕರಣಗಳು; ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸಾವು, ಜಿಂಕೆ ಕೊಂದು ಮಾಂಸ ಕತ್ತರಿಸುತ್ತಿದ್ದ ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಬೈಕ್​ ಸವಾರರೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮತ್ತಿಬ್ಬರು ಜಿಂಕೆ ಕೊಂದು ಮಾಂಸ ಕತ್ತರಿಸುತ್ತಿದ್ದ ಇಬ್ಬರು ಬಂಧನವಾಗಿದ್ದಾರೆ. ಹಾಗೆಯೇ ಎರಡು ಕಾಡಾನೆ ದಾಳಿ ನಡೆಸಿದೆ.

ಅಪಘಾತದಲ್ಲಿ ಬೈಕ್​ ಸವಾರ ಸಾವು; ಜಿಂಕೆ ಕೊಂದು ಮಾಂಸ ಕತ್ತರಿಸುತ್ತಿದ್ದ ಇಬ್ಬರ ಬಂಧನ
ಅಪಘಾತದಲ್ಲಿ ಬೈಕ್​ ಸವಾರ ಸಾವು; ಜಿಂಕೆ ಕೊಂದು ಮಾಂಸ ಕತ್ತರಿಸುತ್ತಿದ್ದ ಇಬ್ಬರ ಬಂಧನ

ಗುಂಡ್ಲುಪೇಟೆ: ಕೇರಳ ರಸ್ತೆಯಲ್ಲಿ ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Road Accident) ಬೈಕ್ ಸವಾರ ಸ್ಥಳದಲ್ಲೇ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡಿನಲ್ಲಿ ನಡೆದಿದೆ. ತಾಲೂಕಿನ ಭೀಮನಬೀಡು ಗ್ರಾಮದ 25 ವರ್ಷದ ನಂದೀಶ್ ಎಂಬುವರು ಮೃತರು. ಕೇರಳ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕೂಡಲೇ ಸ್ಥಳೀಯರು ಕೂಡಲೇ ತಾಲೂಕು ಆಸ್ಪತ್ರೆಗೆ ಸಾಗಿಸಿದರು.

ಆದರೆ ತಾಲೂಕು ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ (Mysore) ವರ್ಗಾಯಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಸ್ಥಳಕ್ಕೆ ದೌಡಾಯಿಸಿದ ಗುಂಡ್ಲುಪೇಟೆ ಪೊಲೀಸರು ವಾಹನವನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಸರ್ಕಲ್ ಇನ್ಸ್ಪೆಕ್ಟರ್ ಮುದ್ದುರಾಜ್ ಅವರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಾಗಿದ್ದರೂ ಡಬಲ್ ಲೇನ್ ರಸ್ತೆ ನಿರ್ಮಿಸದಿರುವುದು ಇಂತಹ ಘಟನೆಗಳಿಗೆ ಕಾರಣ ಎಂಬುದು ಸ್ಥಳೀಯರ ಆರೋಪ.

ಸರ್ಕಾರಿ ಬಸ್​ ಮೇಲೆ ಕಾಡಾನೆ ದಾಳಿ

ಚಾಮರಾಜನಗರ: ಬಣ್ಣಾರಿ ಸಮೀಪ ಆನೆಯೊಂದು ಸರ್ಕಾರಿ ಬಸ್ ಮೇಲೆ ದಾಳಿ ನಡೆಸಿ, ಗಾಜನ್ನು ಪುಡಿಪುಡಿ ಮಾಡಿದೆ. ಈ ಬಸ್ ಗುಂಡ್ಲುಪೇಟೆ ಬಸ್ ಡಿಪೋಗೆ ಸೇರಿದ್ದು, ಮೈಸೂರಿನಿಂದ ಕೊಯಮತ್ತೂರಿಗೆ ಪ್ರಯಾಣ ನಡೆಸುವ ವೇಳೆ ಬಣ್ಣಾರಿ ಬಳಿ ಆನೆಯೊಂದು ದಿಢೀರ್ ದಾಳಿ ನಡೆಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಾಡಾನೆ ದಾಳಿಗೆ 2 ಎಕರೆ ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ: ಮತ್ತೊಂದು ಪ್ರಕರಣದಲ್ಲಿ ಕಾಡಾನೆ ದಾಳಿಗೆ 2 ಎಕರೆಯಷ್ಟು ಟೊಮೆಟೊ ಬೆಳೆ ನಾಶವಾಗಿದೆ. ಈ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಮಗುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲಿಗೌಡನಹಳ್ಳಿ ಗ್ರಾಮದ ಬಸವರಾಜು ಎಂಬ ರೈತ ಮಗುವಿನಹಳ್ಳಿ ಬಳಿ ಎರಡು ಎಕರೆಯಷ್ಟು ಟೊಮೆಟೊ ಬೆಳೆ ಬೆಳೆದಿದ್ದರು. ಆನೆ ದಾಳಿ ನಡೆಸಿದ ಕಾರಣ ಟೊಮೆಟೊ ನೆಲ ಕಚ್ಚಿದೆ. ಪೋಲ್​ಗಳನ್ನೂ ನಾಶಗೊಳಿಸಿದೆ. ಹೀಗಾಗಿ ರೈತನಿಗೆ ಭಾರಿ ನಷ್ಟ ಸಂಭವಿಸಿದ್ದು, ಕೈಗೆ ಬಂದ ತುತ್ತು ಬಾಯಿಗೆ ಇಲ್ಲದಂತಾಗಿದೆ. ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಹಾರ ಒದಗಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಜಿಂಕೆ ಕೊಂದು ಮಾಂಸ ಕತ್ತರಿಸುತ್ತಿದ್ದ ಇಬ್ಬರ ಬಂಧನ

ಕೊಳ್ಳೇಗಾಲ: ಜಿಂಕೆ ಕೊಂದು ಅರಣ್ಯದಲ್ಲೇ ಮಾಂಸ ಕತ್ತರಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಕೊಳ್ಳೇಗಾಲದ ಅರಣ್ಯ ವಲಯದಲ್ಲಿ ನಡೆದಿದೆ. ಕೊಳ್ಳೇಗಾಲದ ಕುಣಗಳ್ಳಿ ಗ್ರಾಮದ ಮೂರ್ತಿ ಮತ್ತು ರಾಮು ಬಂಧಿತರು. ಇವರ ಜೊತೆಗಿದ್ದ ಮೂವರು ಪರಾರಿಯಾಗಿದ್ದಾರೆ. ಐವರು ಕೊಳ್ಳೇಗಾಲ ರಾಯರಹಳ್ಳ ಬಳಿ ನಾಡ ಬಂದೂಕು ಬಳಸಿ ಜಿಂಕೆಯನ್ನು ಬೇಟೆಯಾಡಿದ್ದರು. ಅರಣ್ಯದಲ್ಲಿಯೇ ಮಾಂಸ ಕತ್ತರಿಸುತ್ತಿರುವ ಖಚಿತ ಮಾಹಿತಿಯನ್ನು ಪಡೆದ ಅರಣ್ಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 35 ಕೆಜಿ ಮಾಂಸ ಹಾಗೂ ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

IPL_Entry_Point