ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಗುರುಸ್ವಾಮೀಜಿ‌ ಲಿಂಗೈಕ್ಯ
ಕನ್ನಡ ಸುದ್ದಿ  /  ಕರ್ನಾಟಕ  /  ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಗುರುಸ್ವಾಮೀಜಿ‌ ಲಿಂಗೈಕ್ಯ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಗುರುಸ್ವಾಮೀಜಿ‌ ಲಿಂಗೈಕ್ಯ

ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ದೀರ್ಘ ಕಾಲದ ಅನಾರೋಗ್ಯದಿಂದ ಇಂದು (ಮೇ 20) ಬೆಳಿಗ್ಗೆ ಲಿಂಗೈಕ್ಯರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.

ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಗುರುಸ್ವಾಮೀಜಿ‌ ಲಿಂಗೈಕ್ಯ
ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಗುರುಸ್ವಾಮೀಜಿ‌ ಲಿಂಗೈಕ್ಯ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಹಿರಿಯ ಶ್ರೀ ಗುರುಸ್ವಾಮೀಜಿ (69) ದೀರ್ಘ ಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯಕ್ಕೀಡಾಗಿ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲವು ದಿನಗಳಿಂದ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲೇ ಅವರು ವಿಶ್ರಾಂತಿ ಪಡೆಯುತ್ತಿದ್ದರು. ಇಂದು (ಮೇ 20) ಸಂಜೆ 5.30 ಕ್ಕೆ ಸಾಲೂರು ಮಠದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಸಾಲೂರು ಮಠದ ಶ್ರೀ ಗುರುಸ್ವಾಮೀಜಿ‌ ಬದುಕಿನ ಪಥ

ಹನೂರು ತಾಲೂಕಿನ ಜಿಕೆ ಹೊಸೂರು ಗ್ರಾಮದಲ್ಲಿ ಪೂರ್ವಾಶ್ರಮದ ತಂದೆ ರುದ್ರಪ್ಪ ಮತ್ತು ತಾಯಿ ಪುಟ್ಟ ಮಾದಮ್ಮ ಅವರ ಪುತ್ರರಾಗಿ 1956 ಆಗಸ್ಟ್ 2 ರಂದು ಗುರು ಸ್ವಾಮೀಜಿ ಜನಿಸಿದರು. 1995ರ ಜನವರಿ 26ರಂದು ಸಾಲೂರು ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

ಅವರು ಪಟ್ಟಕ್ಕೆ ಬಂದ ನಂತರ ಸಾಲೂರು ಮಠದಲ್ಲಿ ನಿತ್ಯ ದಾಸೋಹ ಸೇವೆ ಮಲೆ ಮಾದೇಶ್ವರ ದೇವಸ್ಥಾನದ ಅಭಿವೃದ್ಧಿ ಮಠದ ಅಭಿವೃದ್ಧಿ ಸಾಲೂರು ಸ್ವಾಮಿ ಟ್ರಸ್ಟ್ ರಚಿಸಿದರು ದೀನ ದಲಿತರ ಹಿಂದುಳಿದವರಿಗಾಗಿ ಪ್ರೌಢಶಾಲೆ ಮತ್ತು ಉಚಿತ ಹಾಸ್ಟೆಲ್ ಸ್ಥಾಪನೆ ಮಾಡಿದರು. ಕೊಳ್ಳೇಗಾಲ ತಾಲೂಕಿನ ಕೆಂಪನ ಪಾಳ್ಯದಲ್ಲಿ ಪ್ರೌಢಶಾಲೆ, ವೃದ್ಧರಿಗೆ ಆಶ್ರಯ ನೀಡಲು ಎಕರೆ ವಿಸ್ತೀರ್ಣದಲ್ಲಿ ಹನೂರು ಸಮೀಪ ವೃದ್ಧಾಶ್ರಮವನ್ನು ಸ್ಥಾಪಿಸಿದ್ದರು.

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.