Charmadi Ghat: ಚಾರ್ಮಾಡಿ ಘಾಟಿಯಲ್ಲಿ ಹರಡಿದೆ ಭಾರಿ ಕಾಡ್ಗಿಚ್ಚು: ಅಪಾರ ಪ್ರಮಾಣದ ಅರಣ್ಯ ನಾಶ ಶಂಕೆ
Charmadi Ghat Forest Fire: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಲಿಚ್ಚು ಆವರಿಸಿದೆ. ಇದರ ಪರಿಣಾಮ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿರುವುದು ಗಮನಸೆಳೆದಿದೆ.(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Charmadi Ghat Forest Fire: ದಕ್ಷಿಣ ಕನ್ನಡ - ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹರಡಿಕೊಂಡಿರುವ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಲಿಚ್ಚು ಆವರಿಸಿದೆ. ಇದರ ಪರಿಣಾಮ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟ ಘಟನೆ ನಡೆದಿದೆ.
ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಲಿಚ್ಚು ಆವರಿಸಿದ ಪರಿಣಾಮ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟ ಘಟನೆ ನಡೆದಿದೆ.
ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದ ಪರದಾಡಿದರು. ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್‌ರಾಜ್(ಚಾಲಕ) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ 10 ಕಿ.ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದೆ. ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಲಿಚ್ಚು ಆವರಿಸಿದ ಪರಿಣಾಮ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದರು.
ಚಾರ್ಮಾಡಿಯಲ್ಲಿ ಬೆಂಕಿ, ಕಿಡಿಗೇಡಿಗಳ ಕೃತ್ಯ?
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬಾರಿ ಬೆಂಕಿ ಕಾಣಿಸಿಕೊಂಡಿದ್ದನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಳಿಯ ವೇಗಕ್ಕೆ ಬೆಂಕಿ ಹೆಚ್ಚು ಹೆಚ್ಚುತ್ತಲಿದ್ದು, ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಶುಕ್ರವಾರ ರಾತ್ರಿಯಿಂದ ಬೆಂಕಿ ಹೊತ್ತಿಕೊಂಡಿದೆ. ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. ಇದೀಗ ಶುಕ್ರವಾರ ರಾತ್ರಿ ಮತ್ತೆ ಬೆಂಕಿ ಹೊತ್ತಿಕೊಂಡಿದ್ದು, ಕಿಡಿಗೇಡಿಗಳಿಂದ ಬೆಂಕಿ ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ.
ಈ ಕಾಡ್ಗಿಚ್ಚಿನಿಂದ ಪ್ರಾಣಿ ಸಂಕುಲ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಅಪಾಯ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಮಾರ್ಚ್ ಏಪ್ರಿಲ್ ಬೇಸಿಗೆಯಲ್ಲಿ ಕಾಡ್ಗಿಚ್ಚು ಹೆಚ್ಚಾಗಿ ಆಗಲಿದೆ. ಆದರೆ ಈ ಬಾರಿ ಕಿಡಿಗೇಡಿಗಳಿಂದಲೇ ಬೆಂಕಿ ಕೊಟ್ಟಿರುವ ಶಂಕೆ ಎದುರಾಗಿದೆ ಅಂತವರ ಬಗ್ಗೆ ಸುಳಿವು ಕಂಡಲ್ಲಿ ಸೂಕ್ತ ಕ್ರಮ ಕೈ ಗೊಳ್ಳಬೇಕೆಂದು ಪರಿಸರವಾದಿಗಳ ಆಗ್ರಹ.
ಮಾಹಿತಿ ಅಪ್ಡೇಟ್ ಆಗುತ್ತಿದೆ
(ವರದಿ- ಹರೀಶ್ ಮಾಂಬಾಡಿ, ಮಂಗಳೂರು)
