ಚೆಕ್ ಬೌನ್ಸ್ ಪ್ರಕರಣ: ಸಂಚಲನ ಸೃಷ್ಟಿಸಿದ್ದ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲು ಶಿಕ್ಷೆ
ಕನ್ನಡ ಸುದ್ದಿ  /  ಕರ್ನಾಟಕ  /  ಚೆಕ್ ಬೌನ್ಸ್ ಪ್ರಕರಣ: ಸಂಚಲನ ಸೃಷ್ಟಿಸಿದ್ದ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲು ಶಿಕ್ಷೆ

ಚೆಕ್ ಬೌನ್ಸ್ ಪ್ರಕರಣ: ಸಂಚಲನ ಸೃಷ್ಟಿಸಿದ್ದ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲು ಶಿಕ್ಷೆ

ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ತೊಡೆ ತಟ್ಟಿ ನಿಂತಿರುವ ದೂರುದಾರ ಸ್ನೇಹಮಯಿ ಕೃಷ್ಣ 6 ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಚೆಕ್ ಬೌನ್ಸ್  ಪ್ರಕರಣ: ಸಂಚಲನ ಸೃಷ್ಟಿಸಿದ್ದ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ 6 ತಿಂಗಳು ಶಿಕ್ಷೆ
ಚೆಕ್ ಬೌನ್ಸ್ ಪ್ರಕರಣ: ಸಂಚಲನ ಸೃಷ್ಟಿಸಿದ್ದ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ 6 ತಿಂಗಳು ಶಿಕ್ಷೆ

ಬೆಂಗಳೂರು: ಚೆಕ್​ ಬೌನ್ಸ್​ ಪ್ರಕರಣಕ್ಕೆ ಸಂಬಂಧಿಸಿ ಆರ್​ಟಿಐ ಕಾರ್ಯಕರ್ತ ಹಾಗೂ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ 6 ತಿಂಗಳ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾ‌ರ್ ಎನ್ನುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿಯನ್ನು ಜನವರಿ 30ರಂದು ವಿಚಾರಣೆ ನಡೆಸಿದ್ದ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಕೃಷ್ಣಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಆದರೆ ಶಿಕ್ಷೆಯ ಪ್ರಮಾಣ ಪ್ರಕಟಿಸಿರಲಿಲ್ಲ. ಇಂದು ಈ ಪ್ರಕರಣದ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, ಸ್ನೇಹಮಯಿ ಕೃಷ್ಣಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಕುಮಾರ್ ಅವರಿಂದ ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ 2015ರಲ್ಲಿ 1 ಲಕ್ಷ 75 ಸಾವಿರ ರೂಪಾಯಿ ಸಾಲ ಪಡೆದಿದ್ದ ಆರೋಪ ಇದಾಗಿದೆ. ಈ ಸಂಬಂಧ ಕೋ ಅಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆದ ಹಿನ್ನೆಲೆ ಕುಮಾರ್ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ 6 ತಿಂಗಳ ಕಾಲ ಶಿಕ್ಷೆ ವಿಧಿಸಿದೆ.

ಸ್ನೇಹಮಯಿ ಕೃಷ್ಣ ಏನು ಹೇಳಿದ್ದರು?

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸ್ನೇಹಮಯಿ ಕೃಷ್ಣ, ನನಗೆ ಕುಮಾರ್ ಸಾಲವನ್ನೇ ನೀಡಿರಲಿಲ್ಲ. ನನಗೆ ಸಮಸ್ಯೆ ಇದ್ದ ಕಾರಣ ಸಾಲ ಕೇಳಿದ್ದೆ. 1.5 ಲಕ್ಷ ಸಾಲ ಕೇಳಿದ್ದೆ. ಅದಕ್ಕೆ ದಿನಾಂಕ‌ ನಮೂದಿಸದ ಚೆಕ್ ಕೇಳಿದ್ರು, ಕೊಟ್ಟಿದ್ದೆ. ವ್ಯವಹಾರದ ಹಣ ಕೊಡುತ್ತೀನಿ ಎಂದು ಹೇಳಿ ಹಣ ಕೊಡಲಿಲ್ಲ ಎಂದಿದ್ದರು. ಸಾಲ ಕೊಡುವುದಾಗಿ ಹೇಳಿ ದಿನಾಂಕ‌ ನಮೂದಿಸದ ಚೆಕ್ ಪಡೆದಿದ್ದ ಕುಮಾರ್, ನಂತರ ಸಾಲವನ್ನೂ ಕೊಡದೇ ಚೆಕ್‌ನ್ನು ಬ್ಯಾಂಕ್‌ಗೆ ಪ್ರೆಸೆಂಟ್ ಮಾಡಿದ್ದ. ಆ ಬಳಿಕ ಚೆಕ್ ಬೌನ್ಸ್ ಮಾಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದ. ನನ್ನ ಕಾನೂನು ಹೋರಾಟ ಮುಂದುವರಿಸುತ್ತೇನೆಂದು ಸ್ನೇಹಮಯಿ‌ಕೃಷ್ಣ ಪ್ರತಿಕ್ರಿಯಿಸಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿ ಅಕ್ಟೋಬರ್‌ 1ರಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮೈಸೂರಿನ 3ನೇ ಹೆಚ್ಚುವರಿ ಸಿವಿಲ್‌ ಜಡ್ಜ್‌ ಮತ್ತು ಜೆಎಂಎಫ್‌ಸಿ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿತ್ತು. ಎನ್ ಕುಮಾರ್‌ ಅವರು 2015ರಲ್ಲಿ ಚೆಕ್‌ ಬೌನ್ಸ್‌ ಕೇಸ್​ ದಾಖಲಿಸಿದ್ದರು. ಪ್ರಸ್ತುತ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಶಿಕ್ಷೆ ವಿಧಿಸಿದೆ.

Whats_app_banner