ಕನ್ನಡ ಸುದ್ದಿ  /  ಕರ್ನಾಟಕ  /  Chikkaballapura Result: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್‌ಗೆ ಗೆಲುವು; ಕಾಂಗ್ರೆಸ್‌ನ ರಕ್ಷಾ ರಾಮಯ್ಯಗೆ ನಿರಾಸೆ

Chikkaballapura Result: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್‌ಗೆ ಗೆಲುವು; ಕಾಂಗ್ರೆಸ್‌ನ ರಕ್ಷಾ ರಾಮಯ್ಯಗೆ ನಿರಾಸೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ಚಿಕ್ಕಬಳ್ಳಾಪುರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಅವರು ಕಾಂಗ್ರೆಸ್‌ನ ರಕ್ಷಾ ರಾಮಯ್ಯ ಅವರ ವಿರುದ್ಧ 1,63,460 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. Chikkaballapur Lok Sabha Elections Result.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್‌ಗೆ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ರಕ್ಷಾ ರಾಮಯ್ಯಗೆ ನಿರಾಸೆ ಅನುಭವಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್‌ಗೆ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ರಕ್ಷಾ ರಾಮಯ್ಯಗೆ ನಿರಾಸೆ ಅನುಭವಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಲೋಕಸಭಾ ಕ್ಷೇತ್ರಗಳ ಪೈಕಿ ಹೆಚ್ಚು ಕುತೂಹಲ ಮೂಡಿಸಿದ್ದ ಕ್ಷೇತ್ರಗಳಲ್ಲಿ ಒಂದಾಗಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ (Chikkaballapur Sabha Election Result 2024) ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ (BJP Candidate Dr K Sudhakar) ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಎಂಎಸ್ ರಕ್ಷಾ ರಾಮಯ್ಯ (Congress Candidate Raksha Ramaiah) ನಿರಾಸೆ ಅನುಭವಿಸಿದ್ದಾರೆ. ಸುಧಾಕರ್ 1,63,460 ಮತಗಳ ಅಂತರದಿಂದ ಗೆದ್ದು ಲೋಕಸಭೆ ಪ್ರವೇಶಕ್ಕೆ ಮತದಾರರಿಂದ ಗ್ರೀನ್ ಸಿಗ್ನಲ್ ಪಡೆದಿದ್ದಾರೆ. ಡಾ ಕೆ ಸುಧಾಕರ್ 8,22,619 ಮತಗಳನ್ನು ಪಡೆದರೆ, ಇವರ ಪ್ರತಿ ಸ್ಪರ್ಧಿ ರಕ್ಷಾ ರಾಮಯ್ಯ 6,59,150 ಮತಗಳನ್ನು ಗಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ ಕೆ ಸುಧಾಕರ್ ಅವರ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ವಿರುದ್ಧ ಸೋಲು ಕಂಡಿದ್ದರು. ಇದೀಗ ಲೋಕಸಭೆ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿದ್ದ ಡಾ ಕೆ ಸುಧಾಕರ್ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದ್ದರು. ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಎದುರಾಗಿದ್ದ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ನಂತರ ಆರೋಗ್ಯ ಸಚಿವರಾಗಿದ್ದರು. ಆದರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅಚ್ಚರಿಯ ರೀತಿಯಲ್ಲಿ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ವಿರುದ್ಧ ಸೋಲು ಕಾಣಬೇಕಾಯಿತು. ಡಾ ಕೆ ಸುಧಾಕರ್ ಶ್ರೀಸಿದ್ದಾರ್ಥ ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಮಾಡಿದ್ದಾರೆ.

ಎಂಎಸ್ ರಕ್ಷಾ ರಾಮ್ಯಯ್ಯ ಅವರ ಹಿನ್ನಲೆ

ಕಾಂಗ್ರೆಸ್‌ ಅಭ್ಯರ್ಥಿ ಎಂಎಸ್ ರಕ್ಷಾ ರಾಮಯ್ಯ ರಾಜಕಾರಣಕ್ಕೆ ಹೊಸ ಮುಖವಾಗಿದ್ದರೂ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸೇರಿದವರು. ಖ್ಯಾತ ಶಿಕ್ಷಣ ತಜ್ಞ ಎಂಎಸ್ ರಾಮಯ್ಯ ಅವರ ಮೊಮ್ಮಗ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಎಂಎಸ್ ರಾಮಯ್ಯ ಗ್ರೂಪ್‌ನ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳನ್ನು ನಡೆಸುತ್ತಿದ್ದಾರೆ. ಆದರೆ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಬೇಕೆಂಬ ರಕ್ಷಾ ರಾಮಯ್ಯ ಅವರ ಆಸೆ ಈಡೇರಿಲ್ಲ.

ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸತತ 2ನೇ ಬಾರರಿಗೆ ಬಿಜೆಪಿ ವಶ

ಈ ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಖಾತೆ ತೆರೆದಿತ್ತು. 2019ರ ಚುನಾವಣೆಯಲ್ಲಿ ಬಿಜೆಪಿಯ ಬಿಎನ್ ಬಚ್ಚೇಗೌಡ ಅವರು ಕಾಂಗ್ರೆಸ್‌ನ ಎಂ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಮಣಿಸಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19,50,000 ಮತದಾರರು ಇದ್ದು, ಇದರಲ್ಲಿ ಪುರುಷರು 9,80,641 ಹಾಗೂ 9,69,538 ಮಹಿಳಾ ಮತದಾರರು ಇದ್ದಾರೆ. ಇನ್ನ ಜಾತಿವಾರು ನೋಡುವುದಾದರೆ ಪರಿಶಿಷ್ಟ ಜಾತಿ 5,50,000, ಒಕ್ಕಲಿಗರು 4,50,000, ಬಲಿಜಗ2,50,000, ಮುಸ್ಲಿಂ 2,00,000, ಲಿಂಗಾಯತರು, ಬ್ರಾಹ್ಮಣರು 1 ಲಕ್ಷ, ಕುರುಬರು 1 ಲಕ್ಷ ಹಾಗೂ ಇತರರು 3 ಲಕ್ಷ ಮತದಾರರು ಇದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಇದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಹಾಗೂ ಬೆಂಗಳೂರು ನಗರ ಜಿಲ್ಲೆಯ 1 ವಿಧಾನಸಭಾ ಕ್ಷೇತ್ರ ಸೇರಿಕೊಂಡಿದೆ. ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೋಸಕೋಟೆ ಹಾಗೂ ಯಲಹಂಕ ಕ್ಷೇತ್ರಗಳಿವೆ.

2009 ಮತ್ತು 2014ರಲ್ಲಿ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಇಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಬಿಎನ್ ಬಚ್ಚೇಗೌಡರ ವಿರುದ್ಧ ಕೇವಲ 9,520 ಮತಗಳ ಅಂತರದಿಂದ ಗೆದ್ದುಕೊಂಡಿದ್ದರು. ಆದರೆ 2019ರಲ್ಲಿ ಬಿಎನ್ ಬಚ್ಚೇಗೌಡ 1,82,110 ಮತಗಳ ದೊಡ್ಡ ಅಂತರದ ಗೆಲುವು ಕಂಡಿದ್ದರು. ಬದಲಾದ ರಾಜಕೀಯ ಹಾಗೂ ವಯೋಸಹಜ ಕಾರಣದಿಂದಲೋ ಅವರ ಚುನಾವಣೆಯಿಂದ ಹಿಂದೆ ಸರಿದಿದ್ದರು. ಅಲ್ಲದೆ, ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಶಾಸಕರಾಗಿದ್ದಾರೆ. ಇದು ಕೂಡ ಅವರು ಬಿಜೆಪಿಯಿಂದ ಮತ್ತೊಮ್ಮೆ ಸ್ಪರ್ಧೆಗೆ ಅಡ್ಡಿಯಾಗಿತ್ತು ಎಂದು ಹೇಳಲಾಗಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024