ಕನ್ನಡ ಸುದ್ದಿ  /  ಕರ್ನಾಟಕ  /  ಲೋಕಸಭಾ ಚುನಾವಣೆಯಲ್ಲಿ ಡಾ ಸುಧಾಕರ್ ಗೆಲುವು; ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ ವೈರಲ್, ಅಸಲಿಯೋ ನಕಲಿಯೋ

ಲೋಕಸಭಾ ಚುನಾವಣೆಯಲ್ಲಿ ಡಾ ಸುಧಾಕರ್ ಗೆಲುವು; ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ ವೈರಲ್, ಅಸಲಿಯೋ ನಕಲಿಯೋ

ಲೋಕಸಭಾ ಚುನಾವಣೆಯಲ್ಲಿ ಡಾ ಸುಧಾಕರ್ ಗೆಲುವು ಖಚಿತವಾದ ಕೂಡಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ ವೈರಲ್ ಆಗಿದೆ. ಅವರ ಮನೆಯ ಮೇಲೆ ಕಲ್ಲುತೂರಾಟ ನಡೆದಿರುವುದಾಗಿ ವರದಿಯಾಗಿದೆ. ಏನಿದು ವಿದ್ಯಮಾನ ಇಲ್ಲಿದೆ ವಿವರ.

ಲೋಕಸಭಾ ಚುನಾವಣೆಯಲ್ಲಿ ಡಾ ಸುಧಾಕರ್ ಗೆಲುವು; ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ ವೈರಲ್
ಲೋಕಸಭಾ ಚುನಾವಣೆಯಲ್ಲಿ ಡಾ ಸುಧಾಕರ್ ಗೆಲುವು; ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ ವೈರಲ್

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದ ಬೆನ್ನಿಗೆ ಶಾಸಕ ಪ್ರದೀಪ್ ಈಶ್ವರ್ ಅವರ ರಾಜೀನಾಮೆ ಪತ್ರ ವೈರಲ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪ್ರದೀಪ್ ಈಶ್ವರ್ ಅವರ ರಾಜೀನಾಮೆ ಪತ್ರದೊಂದಿಗೆ ಮಾತು ಅಂದ್ರೆ ಮಾತು ಎಂಬ ವಿಚಾರ ಟ್ರೋಲ್ ಕೂಡ ಆಗುತ್ತಿದೆ.

ಟ್ರೆಂಡಿಂಗ್​ ಸುದ್ದಿ

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಅವರು ಒಂದು ಮತ ಲೀಡ್ ಪಡೆದುಕೊಂಡರೆ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್ ಈಶ್ವರ್ ಘೋಷಿಸಿದ್ದರು. ಇದನ್ನೇ ಅನುಸರಿಸಿ, ಡಾ ಕೆ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರ ರಾಜೀನಾಮೆ ಪತ್ರ ವೈರಲ್ ಆಗಿದೆ.

ಮಾತಿನ ಬಗ್ಗೆ ಬಹಳ ಭರವಸೆ ವ್ಯಕ್ತಪಡಿಸುವ ಶಾಸಕ ಪ್ರದೀಪ್ ಈಶ್ವರ್‌

ವಿಧಾನಸಭಾ ಚುನಾವಣೆ ಸಂದರ್ಭದಿಂದಲೇ ಮಾತಿನ ಬಗ್ಗೆ ಬಹಳ ಭರವಸೆ ವ್ಯಕ್ತವಪಡಿಸುವ, ಮಾತಿಗೆ ಬದ್ಧತೆ ತೋರಿಸುವ ರೀತಿಯಿಂದಲೇ ಶಾಸಕ ಪ್ರದೀಪ್ ಈಶ್ವರ್ ಜನರ ಮನಗೆದ್ದಿದ್ದರು. ಇದರಂತೆ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಅವರು, ಲೋಕಸಭಾ ಚುನಾವಣೆಯಲ್ಲಿ ಡಾ.ಕೆ. ಸುಧಾಕರ್ ಅವರು ಸೋಲುತ್ತಾರೆ. ಅವರೇನಾದರೂ ಚಿಕ್ಕಬಳ್ಳಾಪುರದಲ್ಲಿ ಒಂದೇ ಒಂದು ಮತ ಹೆಚ್ಚಿಗೆ ಪಡೆದರೂ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಡುವೆ ಎಂದು ಘೋಷಿಸಿದ್ದರು.

ಈ ಹಿಂದೆ ವಿಧಾನಸಭಾ ಚುನಾವಣೆ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡುತ್ತಾ, ಭೋಗ ನಂದೀಶ್ವರ ದೇವಸ್ಥಾನದಲ್ಲಿ ಪ್ರಮಾಣ ಮಾಡುವುದಾಗಿ ಕೂಡ ಸವಾಲು ಹಾಕಿದ್ದರು. ನನ್ನ ಸವಾಲನ್ನು ಸ್ವೀಕರಿಸುವ ಒಪ್ಪಿದರೆ ಸುಧಾಕರ್ ಬಂದು ಪ್ರಮಾಣ ಮಾಡಲಿ ಎಂದು ಹೇಳಿದ್ದರು. ಆದರೆ, ಈಗ ಲೋಕಸಭಾ ಫಲಿತಾಂಶದಲ್ಲಿ ಡಾ.ಕೆ. ಸುಧಾಕರ್ ಗೆಲುವು ಖಚಿತವಾದ ಕೂಡಲೇ ಈ ಹಿಂದೆ ಪ್ರದೀಪ್ ಈಶ್ವರ್ ಹೇಳಿದ್ದ ವಿಡಿಯೋ ವೈರಲ್ ಆಗಿತ್ತು.

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕೆಲವೇ ಕ್ಷಣಗಳಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ ಕೊಡಲಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದಾಗುತ್ತಿದ್ದಂತೆ, ಪ್ರದೀಪ್ ಈಶ್ವರ್‌ ರಾಜೀನಾಮೆ ಪತ್ರ ವೈರಲ್ ಆಗಿದೆ.

ಪ್ರದೀಪ್ ಈಶ್ವರ್ ಸ್ಪಷ್ಟೀಕರಣ, ಪೊಲೀಸರ ಮೊರೆ ಹೋದ ಶಾಸಕ

ಈ ನಡುವೆ, ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕೂಡ ಕಲ್ಲು ತೂರಾಟ ನಡೆದಿದೆ. ರಾಜೀನಾಮೆ ಪತ್ರದ ಬಗ್ಗೆ ಸ್ಪಷ್ಟೀಕರಣ ಕೊಟ್ಟಿರುವ ಪ್ರದೀಪ್ ಈಶ್ವರ್ ಅವರು, ಯಾರೂ ಕಿಡಿಗೇಡಿಗಳು ಮಾಡಿರುವ ಫೇಕ್ ರಾಜೀನಾಮೆ ಪತ್ರ ಅದು. ಆ ರೀತಿ ಯಾವುದೇ ರಾಜೀನಾಮೆ ಪತ್ರ ಸಲ್ಲಿಸಿಲ್ಲ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ಪೋಲೀಸರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿರುವುದಾಗಿ ಸುವರ್ಣ ನ್ಯೂಸ್ ವರದಿ ಮಾಡಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024