ಕನ್ನಡ ಸುದ್ದಿ  /  ಕರ್ನಾಟಕ  /  ಶೃಂಗೇರಿಯ ಮಾರುತಿ ಬೆಟ್ಟದಲ್ಲಿ 32 ಅಡಿ ಎತ್ತರದ ಶಂಕರಾಚಾರ್ಯರ ಪ್ರತಿಮೆ ಅನಾವರಣ Video

ಶೃಂಗೇರಿಯ ಮಾರುತಿ ಬೆಟ್ಟದಲ್ಲಿ 32 ಅಡಿ ಎತ್ತರದ ಶಂಕರಾಚಾರ್ಯರ ಪ್ರತಿಮೆ ಅನಾವರಣ VIDEO

Shankaracharya statue: ಭಾರತೀ ತೀರ್ಥ ಮಹಾಸ್ವಾಮೀಜಿ ಮತ್ತು ವಿಧುಶೇಕಹರ ಭಾರತೀ ಮಹಾಸ್ವಾಮೀಜಿ ಅವರು ಶುಕ್ರವಾರ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿ ಶಂಕರ ಗಿರಿ ಪ್ರವಾಸಿ ತಾಣವನ್ನು ಉದ್ಘಾಟಿಸಿದರು.

ಶಂಕರಾಚಾರ್ಯರ ಪ್ರತಿಮೆ ಅನಾವರಣ
ಶಂಕರಾಚಾರ್ಯರ ಪ್ರತಿಮೆ ಅನಾವರಣ

ಚಿಕ್ಕಮಗಳೂರು: ಶಾರದಾಂಬೆ ಕ್ಷೇತ್ರಕ್ಕೆ ಹೆಸರುವಾಸಿಯಾಗಿದ್ದ ಚಿಕ್ಕಮಗಳೂರಿನ ಶೃಂಗೇರಿ ಇದೀಗ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಶೃಂಗೇರಿಯ ಶಾರದಾ ಮಠದಿಂದ 2 ಕಿಲೋ ಮೀಟರ್ ದೂರದಲ್ಲಿರುವ ಮಾರುತಿ ಬೆಟ್ಟದಲ್ಲಿ ನಿರ್ಮಿಸಿರುವ ಆದಿ ಶಂಕರಾಚಾರ್ಯರ 32 ಅಡಿ ಎತ್ತರದ ಭವ್ಯ ಪ್ರತಿಮೆ ಅನಾವರಣಗೊಂಡಿದೆ.

ಭಾರತೀ ತೀರ್ಥ ಮಹಾಸ್ವಾಮೀಜಿ ಮತ್ತು ವಿಧುಶೇಕಹರ ಭಾರತೀ ಮಹಾಸ್ವಾಮೀಜಿ ಅವರು ನಿನ್ನೆ (ನ.10, ಶುಕ್ರವಾರ) ಪ್ರತಿಮೆಯನ್ನು ಅನಾವರಣಗೊಳಿಸಿ ಶಂಕರ ಗಿರಿ ಪ್ರವಾಸಿ ತಾಣವನ್ನು ಉದ್ಘಾಟಿಸಿದರು. ಶೃಂಗೇರಿಯ ಹಿರಿಯ ಗುರುಗಳಾದ ಶ್ರೀ ಭಾರತೀತೀರ್ಥ ಶ್ರೀಗಳ ಸಂಕಲ್ಪದಂತೆ 2 ಎಕರೆ ವಿಸ್ತೀರ್ಣದಲ್ಲಿ 45 ಕೋಟಿ ವೆಚ್ಚದಲ್ಲಿ 32 ಅಡಿಯ ಬೃಹತ್ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಯವರ 50ನೇ ವರ್ಷದ ಸನ್ಯಾಸ ಸ್ವೀಕಾರದ ಶುಭ ಸ್ವರ್ಣ ಮಹೋತ್ಸವದಂದು ಶಂಕರಾಚಾರ್ಯರ ಪ್ರತಿಮೆ ಲೋಕಾರ್ಪಣೆಯಾಗಿದೆ. ಉದ್ಘಾಟನೆ ಸಮಾರಂಭದಲ್ಲಿ ಭಾರತದ 10 ಮಂದಿ ವೇದಾಂತ ವಿದ್ವಾಂಸರಿಗೆ ತಲಾ 1 ಲಕ್ಷ ರೂ. ನಗದು ನೀಡಿ ಸನ್ಮಾನಿಸಲಾಯಿತು.

ಪ್ರತಿಮೆ ಅನಾವರಣದ ಸಮಯದಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರಲಿಲ್ಲ. ಹೊರಗಡೆ ನಿಂತು ಭಕ್ತರು ಸಮಾರಂಭ ವೀಕ್ಷಿಸಿದರು. ಇಷ್ಟು ದಿನ ಶಾರದಾಂಬೆ ದರ್ಶನ ಮಾತ್ರ ಪಡೆಯುತ್ತಿದ್ದ ಭಕ್ತರು ಇನ್ನುಮುಂದೆ ಶಂಕರಾಚಾರ್ಯರ ದರ್ಶನವನ್ನೂ ಪಡೆಯಬಹುದು.