ದತ್ತ ಮಾಲಾಧಾರಿಗಳ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿ, ಪೊಲೀಸರ ಮೇಲೆ ಹಲ್ಲೆ; ಚಿಕ್ಕಮಗಳೂರಿನಲ್ಲಿ 7 ಮಂದಿ ವಿರುದ್ಧ ಪ್ರಕರಣ ದಾಖಲು
ಕನ್ನಡ ಸುದ್ದಿ  /  ಕರ್ನಾಟಕ  /  ದತ್ತ ಮಾಲಾಧಾರಿಗಳ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿ, ಪೊಲೀಸರ ಮೇಲೆ ಹಲ್ಲೆ; ಚಿಕ್ಕಮಗಳೂರಿನಲ್ಲಿ 7 ಮಂದಿ ವಿರುದ್ಧ ಪ್ರಕರಣ ದಾಖಲು

ದತ್ತ ಮಾಲಾಧಾರಿಗಳ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿ, ಪೊಲೀಸರ ಮೇಲೆ ಹಲ್ಲೆ; ಚಿಕ್ಕಮಗಳೂರಿನಲ್ಲಿ 7 ಮಂದಿ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಶನಿವಾರ ನಡೆದ ದತ್ತ ಮಾಲಾಧಾರಿಗಳ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿ, ಮೆರವಣಿಗೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ 7 ಮಂದಿ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ.

ದತ್ತ ಮಾಲಾಧಾರಿಗಳ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿ, ಪೊಲೀಸರ ಮೇಲೆ ಹಲ್ಲೆ
ದತ್ತ ಮಾಲಾಧಾರಿಗಳ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿ, ಪೊಲೀಸರ ಮೇಲೆ ಹಲ್ಲೆ

ಚಿಕ್ಕಮಗಳೂರು: ಮಸೀದಿ ಮುಂದೆ ಪಟಾಕಿ ಸಿಡಿಸಿದ್ದು ಹಾಗೂ ಮೆರವಣಿಗೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ 7 ಮಂದಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ದತ್ತ ಮಾಲಾಧಾರಿಗಳ ಮೆರವಣಿಗೆ ವೇಳೆ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಚಿಕ್ಕಮಗಳೂರಿನ ಆಲ್ದೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ದತ್ತಾತ್ರೇಯ ಜಯಂತಿ ಆಯೋಜಿಸಿತ್ತು. ಈ ವೇಳೆ ದತ್ತ ಮಾಲಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಪೊಲೀಸರ ಪ್ರಕಾರ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಲು ಸಂಘಟಕರಿಗೆ ಅನುಮತಿ ನೀಡಲಾಗಿತ್ತು. ಆದರೆ ದತ್ತ ಮಾಲಾಧಾರಿಗಳು ಮೆರವಣಿಗೆ ಹೊರಡುವ ವೇಳೆ ಜಾಮಿಯಾ ಮಸೀದಿ ಎದುರು ಪಟಾಕಿ ಸಿಡಿಸಲು ಯತ್ನಿಸಿದ್ದರು.

ಮಸೀದಿ ಬಳಿ ಪಟಾಕಿ ಸಿಡಿಸದಂತೆ ಪೊಲೀಸರ ಸ್ಪಷ್ಟ ನಿರ್ದೇಶನದ ಹೊರತಾಗಿಯೂ ಕಾರ್ಯಕರ್ತರ ಗುಂಪು ಪಟಾಕಿ ಸಿಡಿಸಲು ಯತ್ನಿಸಿತ್ತು ಎಂಬುದು ವರದಿಯಾಗಿದೆ. ಈ ವೇಳೆ ಪಟಾಕಿ ಸಿಡಿಸುವುದನ್ನು ತಡೆಯಲು ಪ್ರಯತ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಘಟನೆ ಸ್ವಲ್ಪ ತಾರಕಕ್ಕೇರಿದ್ದು ಕೆಲವರು ಗಾಯಗೊಂಡಿದ್ದರು. ಮೆರವಣಿಗೆ ವೇಳೆ ಅಹಿತಕರ ವರ್ತನೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಏಳು ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಗಾಯಗೊಂಡ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲಿಸಿ, ನಂತರ ಬಿಡುಗಡೆ ಮಾಡಲಾಗಿದೆ.

ಮೆರವಣಿಗೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಎ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಕೂಡ ಇದ್ದರೂ ಎನ್ನಲಾಗುತ್ತಿದೆ.

ಚಿಕ್ಕಮಗಳೂರಿನ ದತ್ತಪೀಠ ಬಾಬಾಬುಡನ್‌ಗಿರಿಯಲ್ಲಿ 10 ದಿನಗಳ ದತ್ತ ಜಯಂತಿ ಆಚರಣೆ ನಡೆಯುತ್ತಿದೆ. ಡಿಸೆಂಬರ್‌ 17ರಿಂದ ಆರಂಭವಾಗಿರುವ ಆಚರಣೆ ನಾಳೆ (ಡಿ.26) ಮುಕ್ತಾಯವಾಗಲಿದೆ. ಪ್ರತಿ ವರ್ಷ ನಡೆಯುವ ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸುತ್ತಾರೆ. ನಿನ್ನೆ (ಡಿ.4) ಅನುಸೂಯ ಜಯಂತಿ ನಡೆದಿತ್ತು. ಇಂದು ಚಿಕ್ಕಮಗಳೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ಮತ್ತು ಡಿ. 26 ರಂದು ದತ್ತಪಾದುಕೆ ದರ್ಶನ ನಡೆಯಲಿದೆ.

ಇದನ್ನೂ ಓದಿ

Hijab Ban Withdrawal: ಹಿಜಾಬ್‌ ನಿಷೇಧ ಆದೇಶ ಹಿಂಪಡೆಯುವ ಚರ್ಚೆಯ ನಡುವೆ ಕಾಂಗ್ರೆಸ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಬಿಜೆಪಿ

ಕರ್ನಾಟಕದಲ್ಲಿ ಮತ್ತೆ ಹಿಜಾಬ್‌ ಸುದ್ದಿ ಮುನ್ನೆಲೆಗೆ ಬಂದಿದೆ. ಹಿಜಾಬ್‌ ನಿಷೇಧ ಆದೇಶ ಹಿಂಪಡೆಯುವ ಚರ್ಚೆ ಜೋರಾಗಿದ್ದು, ಇದೀಗ ಬಿಜೆಪಿ ಕಾಂಗ್ರೆಸ್‌ಗೆ ಈ ವಿಷಯವಾಗಿ ಖಡಕ್‌ ಎಚ್ಚರಿಕೆ ನೀಡಿದೆ. ಸರ್ಕಾರವು ಆದೇಶವನ್ನು ರದ್ದುಗೊಳಿಸಲು ಮುಂದಾದರೆ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ.

Whats_app_banner