ಕನ್ನಡ ಸುದ್ದಿ  /  Karnataka  /  Cm Basavaraj Bommai Offered Pooja To Chamundi Utsav Idol

CM Bommai offered pooja to Chamundi Utsav idol: ಚಾಮುಂಡಿ ಉತ್ಸವ ಮೂರ್ತಿಗೆ ಸಿಎಂ ಪೂಜೆ

ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಚಾಮುಂಡಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉಪಸ್ಥಿತರಿದ್ದರು.
ಚಾಮುಂಡಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉಪಸ್ಥಿತರಿದ್ದರು.

ಮೈಸೂರು: ವಿಜಯದಶಮಿಯ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಚಿನ್ನದ ಅಂಬಾರಿ ಮೇಲೆ ವಿರಾಜಮಾನಳಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವ ಎಸ್.ಟಿ. ಸೋಮಶೇಖರ್ ತಾಯಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ಜಂಬೂ ಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದ ಸ್ವರ ತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ. ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡು ಬದಿ ಭಕ್ತ ಸಮೂಹವೇ ನೆರೆದಿದೆ.

ಚಾಮುಂಡೇಶ್ವರಿ ದೇವಸ್ಥಾನದಿಂದ ದಾಸೋಹ ಭವನದವರೆಗೆ ಸಿಎಂ ಬಸವರಾಜ ಬೊಮ್ಮಾಯಿ ನಡೆದುಕೊಂಡ ಬಂದರು. ಹೂವು,ಕಾಯಿ ಅಂಡಿಯವರ ಜೊತೆ ಮಾತನಾಡಿದರು. ಅಲ್ಲದೆ, ಸಾರ್ವಜನಿಕರತ್ತ ಕೈಬೀಸಿದರು.

ಬಳಿಕ, ವಿಜಯದಶಮಿಯ ದಿನವಾದ ಇಂದು ಬೆಳಗ್ಗೆ ಸಿಎಂ ಬೊಮ್ಮಾಯಿ ಅವರು ಮೈಸೂರಿನ ಸುತ್ತೂರು ಮಹಾಸಂಸ್ಥಾನ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಕನ್ನಡ ನಾಡಿನ ಜನತೆಗೆ ತಾಯಿ ಚಾಮುಂಡೇಶ್ವರಿ ಸಕಲ ಮಂಗಳವನ್ನುಂಟು ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ರಾಜ್ಯದ ಜನತೆಗೆ ಶುಭ ಕೋರಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ನಿನ್ನೆ ಮಾಧ್ಯಮದವರ ಜೊತೆ ಮಾತನಾಡಿದ್ದ ಸಿಎಂ, ಮೈಸೂರು ದಸರಾ ಈ ಬಾರಿ ಅದ್ಧೂರಿ, ಅರ್ಥಪೂರ್ಣವಾಗಿ ಯಶಸ್ವಿಯಾಗಿದೆ.

ಬಹಳ ದೊಡ್ಡ ಪ್ರಮಾಣದಲ್ಲಿ ಜನರು ಸೇರಿ ದಸರಾ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸತ್ ಸದಸ್ಯರು ಯೋಜನಾಬದ್ಧವಾಗಿ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ಆಚರಣೆ ಮಾಡಿದ್ದಾರೆ. ಅವರಿಗೆ ಮತ್ತು ನಾಡಿನ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದ್ದಾರೆ.

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.

IPL_Entry_Point