ಬೆಂಗಳೂರು ಅರಮನೆ ಮೈದಾನದ ಜಾಗ ಬಳಕೆ ನಿರ್ಬಂಧಿಸಿ ಸುಗ್ರೀವಾಜ್ಞೆ; ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಣಯ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಅರಮನೆ ಮೈದಾನದ ಜಾಗ ಬಳಕೆ ನಿರ್ಬಂಧಿಸಿ ಸುಗ್ರೀವಾಜ್ಞೆ; ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಣಯ

ಬೆಂಗಳೂರು ಅರಮನೆ ಮೈದಾನದ ಜಾಗ ಬಳಕೆ ನಿರ್ಬಂಧಿಸಿ ಸುಗ್ರೀವಾಜ್ಞೆ; ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಣಯ

Palace Grounds land row: ಬೆಂಗಳೂರು ಅರಮನೆ ಮೈದಾನದ ಜಾಗ ಬಳಕೆ ವಿಚಾರವಾಗಿ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರು ಅರಮನೆ ಮೈದಾನದ ಜಾಗ ಬಳಕೆ ನಿರ್ಬಂಧಿಸಿ ಸುಗ್ರೀವಾಜ್ಞೆ;‌ ರಾಜ್ಯ ಸರ್ಕಾರ ನಿರ್ಣಯ
ಬೆಂಗಳೂರು ಅರಮನೆ ಮೈದಾನದ ಜಾಗ ಬಳಕೆ ನಿರ್ಬಂಧಿಸಿ ಸುಗ್ರೀವಾಜ್ಞೆ;‌ ರಾಜ್ಯ ಸರ್ಕಾರ ನಿರ್ಣಯ

Palace Grounds land row: ಬೆಂಗಳೂರು ಅರಮನೆ ಮೈದಾನದ ಜಾಗ ಬಳಸಿಕೊಳ್ಳುವುದನ್ನು ನಿರ್ಬಂಧಿಸಿ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಬಳಿಕ ಸಚಿವ ಎಚ್‌.ಕೆ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರು ಅರಮನೆ ರಸ್ತೆ ಅಗಲೀಕರಣ ಯೋಜನೆ ವಿಚಾರವಾಗಿ ಟಿಡಿಆರ್ ವಿಸ್ತರಣೆಗೆ ಸಂಪುಟದಲ್ಲಿ ಒಪ್ಪಿಲ್ಲ. ಹೀಗಾಗಿ ವಾರಸುದಾರರಿಗೆ ಟಿಡಿಆರ್ ನೀಡದಿರುವ ನಿರ್ಧಾರಕ್ಕೆ ಬರಲಾಗಿದೆ.

ಮೈಸೂರು ರಾಜಮನೆತನ ಒಡೆಯರ್‌ ವಂಶಕ್ಕೆ ಸೇರಿದ ಬೆಂಗಳೂರು ಅರಮನೆ ಆಸ್ತಿ ವಿಚಾರವಾಗಿ ಕರ್ನಾಟಕ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಬೇಕು. ಈ ಅಫಿಡವಿಟ್‌ನಲ್ಲಿ ಏನಿರಬೇಕು ಎಂಬುದನ್ನು ನಿರ್ಣಯಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜನವರಿ 24) ತುರ್ತಾಗಿ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಇದು ತುರ್ತು ಸಚಿವ ಸಂಪುಟ ಸಭೆಯಾಗಿದ್ದು, ನಿಗದಿಯಂತಾಗಿದ್ದರೆ ಜನವರಿ 30ರಂದು ಮುಂದಿನ ಸುಂಪುಟ ಸಭೆ ನಡೆಯಬೇಕಾಗಿತ್ತು. ಅರಮನೆ ಸ್ವತ್ತಿಗೆ ಸಂಬಂಧಿಸಿದ ವಿಚಾರಣೆ ಗುರುವಾರ (ಜನವರಿ 23) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಕರ್ನಾಟಕ ಸರ್ಕಾರ ತನ್ನ ನಿಲುವನ್ನು ಸೋಮವಾರ ಸ್ಪಷ್ಟಪಡಿಸಬೇಕಾದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದರು.

ತುರ್ತು ಸಚಿವ ಸಂಪುಟ ಸಭೆ ನಡೆಸುವುದಕ್ಕೆ ಇದು ಕಾರಣ

ಬೆಂಗಳೂರು ಅರಮನೆ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ 2001ರಲ್ಲಿ ನೀಡಿದ ಆದೇಶ ಉಲ್ಲಂಘಿಸಲಾಗಿದೆ. ಬೆಂಗಳೂರು ಅರಮನೆ ಮೈದಾನದ ಎರಡು ಲಕ್ಷ ಚದರ ಮೀಟರ್ ಕಾಯಂ ಕಟ್ಟಡಗಳನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. ಆದ್ದರಿಂದ, ಮೈಸೂರು ಮಹಾರಾಜರ ಮೇಲೆ ನ್ಯಾಯಾಂಗ ನಿಂದನೆ ದಾವೆ ಹೂಡಲು ಜನವರಿ16ರ ಸಚಿವ ಸಂಪುಟ ನಿರ್ಣಯಿಸಲಾಗಿತ್ತು.

ಅರಮನೆ ಒಟ್ಟು ಸ್ವತ್ತಿನ ವಿಚಾರದಲ್ಲಿ ಸರ್ಕಾರ ಹೂಡಿದ ಮೂಲ ದಾವೆ (1997ರಲ್ಲಿ)ಯನ್ನು ತ್ವರಿತವಾಗಿ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಈ ಎರಡು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ (ಜನವರಿ 22) ವಿಚಾರಣೆಗೆ ಬಂದಿದ್ದವು. ಆಗ, ಸರ್ಕಾರದ ಪರ ವಕೀಲರು ಸಂಪುಟ ಸಭೆ ಕೈಗೊಂಡ ನಿರ್ಣಯವನ್ನು ಪೀಠದ ಗಮನಕ್ಕೆ ತಂದಿದ್ದರು. ಹೊಸ ಪೀಠದ ಮುಂದೆ ಜ.27ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ. ಹೀಗಾಗಿ ಸರ್ಕಾರದ ಕಡೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳುವುದಕ್ಕಾಗಿ ತುರ್ತು ಸಚಿವ ಸಂಪುಟ ಸಭೆ ಕರೆಯಲಾಯಿತು.

Whats_app_banner