CM Siddaramaiah: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ರಾಜ್ಯಾದ್ಯಂತ ಜೂನ್ 11ಕ್ಕೆ ಏಕ‌ಕಾಲಕ್ಕೆ ಮೊದಲ ಗ್ಯಾರಂಟಿಗೆ ಚಾಲನೆ
ಕನ್ನಡ ಸುದ್ದಿ  /  ಕರ್ನಾಟಕ  /  Cm Siddaramaiah: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ರಾಜ್ಯಾದ್ಯಂತ ಜೂನ್ 11ಕ್ಕೆ ಏಕ‌ಕಾಲಕ್ಕೆ ಮೊದಲ ಗ್ಯಾರಂಟಿಗೆ ಚಾಲನೆ

CM Siddaramaiah: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ರಾಜ್ಯಾದ್ಯಂತ ಜೂನ್ 11ಕ್ಕೆ ಏಕ‌ಕಾಲಕ್ಕೆ ಮೊದಲ ಗ್ಯಾರಂಟಿಗೆ ಚಾಲನೆ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯನ್ನು ಜೂನ್ 11 ರಂದು ರಾಜ್ಯಾದ್ಯಂತ ಜಾರಿಗೆ ತರಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ (Karnataka) ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ 'ಶಕ್ತಿ' (Shakti Scheme) ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನಿರ್ಧರಿಸಿದ್ದು, ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ (Congress Guarantees) ಮೊದಲ ಗ್ಯಾರಂಟಿ ಜೂನ್ 11 ರಂದು ರಾಜ್ಯದ ಮಹಿಳೆಯರಿಗೆ ಸಮರ್ಪಣೆ ಮಾಡಲಿದ್ದಾರೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕರ್ನಾಟಕದ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು. ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಾನು (ಮುಖ್ಯಮಂತ್ರಿಗಳು) ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ವೇಳೆ ತಾನು ನೀಡಿದ ಗ್ಯಾರಂಟಿಯನ್ನು ಕಾಂಗ್ರೆಸ್​ ಜಾರಿ ಮಾಡಲು ಮುಂದಾಗಿದೆ. ಸರ್ಕಾರಿ ಬಸ್​​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆಯನ್ನು ಈಡೇರಿಸಲು ಗ್ರೀನ್​ ಸಿಗ್ನಲ್​ ನೀಡಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯದ ಎಲ್ಲ ಮಹಿಳೆಯರಿಗೂ ಸರ್ಕಾರಿ ಬಸ್​​​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕಾಗಿ ಯಾವುದೇ ಷರತ್ತು ಅನ್ವಯ ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್​ನ 5 ಗ್ಯಾರಂಟಿಗಳಿವು

1. ಗೃಹಲಕ್ಷ್ಮಿ ಯೋಜನೆ - ಮನೆ ಒಡತಿಗೆ ಪ್ರತಿ ತಿಂಗಳು 2 ಸಾವಿರ ರೂ.

2. ಗೃಹ ಜ್ಯೋತಿ ಯೋಜನೆ - ತಿಮನೆಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌)

3. ಅನ್ನಭಾಗ್ಯ- ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ

4. ಯುವನಿಧಿ -ಪದವೀಧರರಿಗೆ 3000 ರೂ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ)

5 .ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

Whats_app_banner