Shakti Smart Card: ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವುದು ಹೇಗೆ; ಇಲ್ಲಿದೆ ಸಂಪೂರ್ಣ ಮಾಹಿತಿ
ಕನ್ನಡ ಸುದ್ದಿ  /  ಕರ್ನಾಟಕ  /  Shakti Smart Card: ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವುದು ಹೇಗೆ; ಇಲ್ಲಿದೆ ಸಂಪೂರ್ಣ ಮಾಹಿತಿ

Shakti Smart Card: ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವುದು ಹೇಗೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಸೇವಾ ಸಿಂಧು ಪೋರ್ಟಲ್‌ನಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯುವುದು ಎಂಬುದರ ಕುರಿತ ಹಂತ ಹಂತವಾಗಿ ಇಲ್ಲಿ ಮಾಹಿತಿ ನೀಡಲಾಗಿದೆ. ಶಕ್ತಿ ಸ್ಮಾರ್ಟ್ ಕಾರ್ಡ್ ಇದ್ದರೆ ರಾಜ್ಯದ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವುದೇಗೆ ಎಂಬ ಮಾಹಿತಿ ಇಲ್ಲಿದೆ
ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವುದೇಗೆ ಎಂಬ ಮಾಹಿತಿ ಇಲ್ಲಿದೆ

ಬೆಂಗಳೂರು: ಕರ್ನಾಟಕದಲ್ಲಿ (Karnataka) ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು (Five Guarantees) ಈಡೇರಿಸುವುದಾಗಿ ಕಾಂಗ್ರೆಸ್ (Congress) ಭರವಸೆ ನೀಡಿತ್ತು. ಅದರಂತೆ ಈ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ (Shakti Scheme) ಭಾನುವಾರ (ಜೂನ್‌ 11) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಚಾಲನೆ ನೀಡಿದ್ದಾರೆ.

ಅಂದು ಮುಖ್ಯಮಂತ್ರಿಗಳು ಐವರು ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ (Shakti Smart Card) ವಿತರಿಸುವ ತಮ್ಮ ಸರ್ಕಾರದ ಮೊದಲ ಗ್ಯಾರಂಟಿಗೆ ಚಾಲನೆನ ನೀಡಿದ್ದರು. ರಾಜ್ಯಾದ್ಯಂತ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಶಕ್ತಿ ಯೋಜನೆಗಾಗಿ ಸ್ಮಾರ್ಟ್ ಕಾರ್ಡ್ ಸರ್ಕಾರ ಬಿಡುಗಡೆ ಮಾಡಿದೆ.

ಸೇವಾ ಸಿಂಧು ಮೂಲಕ ಶಕ್ತಿ ಸ್ಮಾರ್ಟ್ ಕಾರ್ಡ್ ಅನ್ನು ಪಡೆಯುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಜೂನ್ 11 ರಿಂದ ಶಕ್ತಿ ಸ್ಮಾರ್ಟ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಸೇವಾ ಸಿಂಧು ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಾಗಿ ಮಹಿಳೆಯರು ಮೊದಲು ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಶಕ್ತಿ ಸ್ಮಾರ್ಟ್ ಕಾರ್ಡ್‌ಗಾಗಿ ಪ್ರಮುಖ ದಾಖಲೆಗಳಾಗಿ ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರ, ರಾಜ್ಯದಲ್ಲಿ ನಿವಾಸಿಸುತ್ತಿರುವುದಕ್ಕೆ ಪುರಾವೆ ನೀಡಬೇಕು.

ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಮೊದಲ ಬಾರಿ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಬೇಕು. ಇದಕ್ಕಾಗಿ New user ? Register here ಇಲ್ಲಿ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಾಕಿ ಅಕೌಂಟ್‌ ಕ್ರಿಯೇಟ್ ಮಾಡಿಕೊಳ್ಳಿ.

ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ಆಪ್ಷನ್‌ ನಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ

ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ ಸಂಖ್ಯೆ, ಗುರುತಿನ ಚೀಟಿ ಹಾಗೂ ಇತರೆ ಅಗತ್ಯ ಮಾಹಿತಿಯನ್ನು ವಿವರಗಳನ್ನು ನಮೂದಿಸಿ.

ಹಂತ 5: ಸೇನಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್ ಪಿಡಿಎಫ್ ಫೈಲ್‌ ಓಪನ್ ಆಗುತ್ತದೆ. ಡೌನ್‌ಲೋಡ್ ಪಿಡಿಎಫ್‌ ಮೇಲೆ ಕ್ಲಿಕ್ ಮಾಡಿ ನಿಮ್ಮ ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್‌ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಕೆಲವು ಷರತ್ತುಗಳನ್ನು ಅನ್ವಯಿಸಲಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

ಶಕ್ತಿ ಸ್ಮಾರ್ಟ್‌ಕಾರ್ಡ್‌ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್‌ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು.

ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

ಎಸಿ, ನಾನ್​ ಎಸಿ ಸ್ಲೀಪರ್​ ಬಸ್​ಗಳು ಹಾಗೂ \ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ. ಅಂದರೆ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್​ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್​ ಬಸ್​ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಅದೇ ರೀತಿ, ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ ಇಲ್ಲ. ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಶೇ 50 ಆಸನಗಳನ್ನು ಪುರುಷರಿಗೆ ಮೀಸಲು ಇರಿಸಲಾಗುತ್ತದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

Whats_app_banner