ಕನ್ನಡ ಸುದ್ದಿ  /  ಕರ್ನಾಟಕ  /  Paycm Posters Against Cm Bommai: ರೇಸ್ ಕೋರ್ಸ್ ಕಾಂಪೌಂಡ್ ಗೆ ಪೇಸಿಎಂ ಪೋಸ್ಟರ್ ಅಂಟಿಸಿದ ಕೈ ನಾಯಕರು

PayCM posters against CM Bommai: ರೇಸ್ ಕೋರ್ಸ್ ಕಾಂಪೌಂಡ್ ಗೆ ಪೇಸಿಎಂ ಪೋಸ್ಟರ್ ಅಂಟಿಸಿದ ಕೈ ನಾಯಕರು

ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ವಿಷಯವನ್ನು ಮತ್ತಷ್ಟು ಹೈಪ್ ಮಾಡಿದ್ದಾರೆ. ಇಂದು ಸಂಜೆ ರೇಸ್ ಕೋರ್ಸ್ ಕಾಂಪೌಂಡ್ ಗೆ ಪ್ರತಿಭಟನಾರ್ಥವಾಗಿ ಪೇ ಸಿಎಂ ಪೋಸ್ಟರ್ ಅಂಟಿಸಿದ್ದಾರೆ.

ರೇಸ್ ಕೋರ್ಸ್ ಕಾಂಪೌಂಡ್ ಗೆ ಪೇಸಿಎಂ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ನಾಯಕರು
ರೇಸ್ ಕೋರ್ಸ್ ಕಾಂಪೌಂಡ್ ಗೆ ಪೇಸಿಎಂ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ವಿಷಯವನ್ನು ಮತ್ತಷ್ಟು ಹೈಪ್ ಮಾಡಿದ್ದಾರೆ. ಇಂದು ಸಂಜೆ ರೇಸ್ ಕೋರ್ಸ್ ಕಾಂಪೌಂಡ್ ಗೆ ಪ್ರತಿಭಟನಾರ್ಥವಾಗಿ ಪೇ ಸಿಎಂ ಪೋಸ್ಟರ್ ಅಂಟಿಸಿದ್ದಾರೆ.

ಇಂದು ಸಂಜೆ 4:45ಕ್ಕೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ವೋಲ್ವೋ ಕಚೇರಿ ಎದುರು ರೇಸ್ ಕೋರ್ಸ್ ಕಾಂಪೌಂಡ್ ಗೆ ಪ್ರತಿಭಟನಾರ್ಥವಾಗಿ ಪೇಸಿಎಂ ಪೋಸ್ಟರ್ ಅಂಟಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಮತ್ತಿತರ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪೇಸಿಎಂ ಪೋಸ್ಟರ್ ಅನ್ನು ಅಂಟಿಸಿದರು. ಇದೇ ವೇಳೆ ಸ್ಥಳದಲ್ಲಿ ಇದ್ದ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು. ನಂತರ ಬಿಡುಗಡೆ ಮಾಡಲಾಯಿತು.

ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹೌದು, ಇಡೀ ರಾಜ್ಯದಲ್ಲಿ ಈ 'ಪೇಸಿಎಂ' ಪೋಸ್ಟರ್ ಪ್ರತಿಭಟನೆ ಮುಂದುವರೆಯಲಿದೆ. ಇದು ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರದ ಶೇ.40 ಭ್ರಷ್ಟಾಚಾರದ ವಿರುದ್ಧ ಅಭಿಯಾನವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಟಾರ್ಗೆಟ್‌ ಮಾಡಿದ ʻPAYCM Campaignʼ ಬುಧವಾರ ದೇಶದ ಗಮನಸೆಳೆದಿದೆ. ಕಾಂಗ್ರೆಸ್‌ ಪಕ್ಷ ಈ ಅಭಿಯಾನವನ್ನು ಪ್ರೊಮೋಟ್‌ ಮಾಡುತ್ತಿದ್ದು, ಸಾಮಾಜಿಕ ತಾಣಗಳಲ್ಲೂ ಇದು ಸದ್ದು ಮಾಡಿದೆ.

ಪೇಸಿಎಂ ಶೀರ್ಷಿಕೆಯ ಪೋಸ್ಟರ್‌ಗಳು ಯುಪಿಐ ಪಾವತಿ ಆಪ್‌ ಪೇಟಿಎಂನ ಬಣ್ಣ ಮತ್ತು ಅದರ ಲೋಗೋವನ್ನು ಹೋಲುತ್ತಿವೆ. ಈ ಪೋಸ್ಟರ್‌ ಮೇಲೆ ಪೇಸಿಎಂ ಎಂಬ ಶೀರ್ಷಿಕೆ ಇದ್ದು, ಕ್ಯೂಆರ್‌ ಕೋಡ್‌ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖವನ್ನು ಹೋಲುವ ಚಿತ್ರವಿದೆ.

ಮಾಧ್ಯಮ ವರದಿಗಳ ಪ್ರಕಾರ, ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿದರೆ ಅದು ಪ್ರತಿಪಕ್ಷ ಕಾಂಗ್ರೆಸ್ ಸ್ಥಾಪಿಸಿದ '40 ಪರ್ಸೆಂಟ್‌ ಸರ್ಕಾರ' ವೆಬ್‌ಸೈಟ್‌ಗೆ ಕರೆದೊಯ್ಯುತ್ತದೆ.

ರಾಜ್ಯದ ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರುಗಳನ್ನು ಸ್ವೀಕರಿಸಲು ವೆಬ್‌ಸೈಟ್ ಅನ್ನು ಸ್ಥಾಪಿಸಲಾಗಿದೆ. ಪೋಸ್ಟರ್‌ಗಳಿಗೆ ಕಾಂಗ್ರೆಸ್ ಹೊಣೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಈ ಅಭಿಯಾನವನ್ನು ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಸೋಷಿಯಲ್‌ ಮೀಡಿಯಾಗಳಲ್ಲಿ ಶೇರ್‌ ಮಾಡಿಕೊಂಡು ಪ್ರೊಮೋಟ್‌ ಮಾಡುತ್ತಿರುವುದು ಕಂಡುಬಂದಿದೆ.

IPL_Entry_Point